ಲೋಕಸಭೆ ಮತ ಎಣಿಕೆಗೆ ಸಿದ್ಧತೆ ಆರಂಭ

Team Udayavani, May 5, 2019, 3:09 AM IST

lokasabher

ಬೆಂಗಳೂರು: ಈಗಾಗಲೇ ಬೆಂಗಳೂರಿನ ಮೂರು ಲೋಕಸಭೆ ಕ್ಷೇತ್ರಗಳ ಮತ ಎಣಿಕೆಗೆ ಸಿದ್ಧತೆ ಆರಂಭಿಸಿದ್ದು, ಬೆಂಗಳೂರಿನ ಮೂರು ಕೇಂದ್ರಗಳಲ್ಲಿ ವಿಧಾನಸಭಾ ಕ್ಷೇತ್ರವಾರು ಪ್ರತ್ಯೇಕವಾಗಿ ಮತ ಎಣಿಕೆ ನಡೆಯಲಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

ಚುನಾವಣಾಧಿಕಾರಿಗಳು ಹಾಗೂ ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಜಂಟಿ ನೇತೃತ್ವದಲ್ಲಿ ಶನಿವಾರ ನಡೆದ ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ತಪಾಸಣೆ ಕಾರ್ಯದ ಬಳಿಕ ಅವರು ಮಾತನಾಡಿದರು.

ಮತ ಎಣಿಕೆಗೆ ಈಗಾಗಲೇ ಸಿಬ್ಬಂದಿ ನಿಯೋಜಿಸಿದ್ದು, ಮೇ 16ರಂದು ಮೊದಲ ಹಂತದಲ್ಲಿ ಹಾಗೂ ಮೇ 21ರಂದು ಎರಡನೇ ಹಂತದಲ್ಲಿ ಅವರಿಗೆ ತರಬೇತಿ ನೀಡಲಾಗುತ್ತಿದೆ. ಯಾರನ್ನು ಯಾವ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ನಿಯೋಜಿಸಲಾಗಿದೆ ಎಂದು ಮೇ 22ರಂದು ತಿಳಿಸಲಾಗುತ್ತದೆ. ಮೇ 23ರಂದು ಯಾವ ವಿಧಾಸಭಾ ಕ್ಷೇತ್ರದ ಕೊಠಡಿಗೆ ನಿಯೋಜನೆಗೊಂಡಿದ್ದಾರೆ ಎಂಬ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು.

ನಗರದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ತಲಾ 8 ವಿಧಾನಸಭಾ ಕ್ಷೇತ್ರಗಳಿವೆ. ಅಲ್ಲಿನ ಮತಯಂತ್ರಗಳನ್ನು ಪ್ರತ್ಯೇಕವಾಗಿ ಇಡಲಾಗಿದ್ದು, ಪ್ರತ್ಯೇಕವಾಗಿಯೇ ಮತ ಎಣಿಕೆ ನಡೆಯಲಿದೆ. ಮತಯಂತ್ರ ಇಟ್ಟಿರುವ ಸ್ಟ್ರಾಂಗ್‌ ರೂಂ ಪಕ್ಕದಲ್ಲೇ ಮತ ಎಣಿಕೆಗೆ ಕೊಠಡಿ ನಿಗದಿ ಮಾಡಲಾಗಿದೆ. ಪ್ರತಿ ಕೊಠಡಿಗೆ 15 ಟೇಬಲ್‌ಗ‌ಳನ್ನು ಹಾಕಲಾಗುತ್ತದೆ. ಕೊಠಡಿಗೆ ಒಬ್ಬ ಮತ ಎಣಿಕೆ ರಿಟರ್ನಿಂಗ್‌ ಅಧಿಕಾರಿ, ಒಬ್ಬ ಸಹಾಯಕ ರಿಟರ್ನಿಂಗ್‌ ಅಧಿಕಾರಿ ಹಾಗೂ ಸೂಕ್ಷ್ಮವೀಕ್ಷಕರಾಗಿ ಕೇಂದ್ರ ಸರ್ಕಾರದ ಒಬ್ಬ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಕಾರ್ಯಚಟುವಟಿಕೆ ಹೇಗಿರಲಿದೆ?: ಮತ ಎಣಿಕೆ ದಿನ ಬೆಳಗ್ಗೆ 8 ಗಂಟೆಗೆ ಅಂಚೆ ಮತಪತ್ರ ಎಣಿಕೆಯಾಗಲಿದೆ. 11ರಿಂದ 12 ಗಂಟೆಯೊಳಗೆ ಇವಿಎಂ ಮತಗಳ ಎಣಿಕೆ ಕೆಲಸ ಮುಕ್ತಾಯವಾಗಲಿದ್ದು, ಆ ಬಳಿಕೆ ಲಾಟರಿ ಮೂಲಕ ಆಯ್ದ 5 ಮತಗಟ್ಟೆಗಳ ವಿವಿ ಪ್ಯಾಟ್‌ನ ಮತಚೀಟಿ ಎಣಿಕೆ ಮಾಡಲಾಗುತ್ತದೆ. ಸಂಜೆ 4 ಗಂಟೆಗೆ ಅಂತಿಮ ಫ‌ಲಿತಾಂಶ ಹೊರಬೀಳಬಹುದು.

ಇನ್ನು ಗೆಲುವಿನ ಅಂತರ ಅಂಚೆ ಮತಗಳಿಗಿಂತ ಕಡಿಮೆ ಇದ್ದರೆ ಮತ್ತೂಮ್ಮೆ ಅಂಚೆ ಮತಪತ್ರ ಎಣಿಕೆ ಮಾಡಲಾಗುವುದು. ಮತ ಎಣಿಕೆ ವೇಳೆ ಆ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕೊಠಡಿಯ ಸ್ಥಳಾವಕಾಶದ ಆಧಾರದ ಮೇಲೆ ಚುನಾವಣಾ ಅಭ್ಯರ್ಥಿಯ ಏಜೆಂಟ್‌ಗಳಿಗೆ ಸ್ಥಳಾವಕಾಶ ಮಾಡಿಕೊಡಲಾಗುತ್ತದೆ. ಮೊದಲಿಗೆ ರಾಷ್ಟ್ರೀಯ ಪಕ್ಷದ ಏಜೆಂಟ್‌, ನಂತರ ರಾಜ್ಯ ಹಾಗೂ ಸ್ಥಳೀಯ ಪಕ್ಷಗಳಿಗೆ, ಪಕ್ಷೇತರರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಲಾಟರಿ ಮೂಲಕ ಆಯ್ದ ವಿವಿ ಪ್ಯಾಟ್‌ಗಳ ಮತಚೀಟಿ ಎಣಿಕೆ: ಇವಿಎಂ ಮತಗಳ ಎಣಿಕೆ ಮುಗಿದ ನಂತರ, ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಇವಿಎಂ ಫ‌ಲಿತಾಂಶದೊಂದಿಗೆ ವಿವಿ ಪ್ಯಾಟ್‌ ಚೀಟಿಗಳ ಫ‌ಲಿತಾಂಶ ತಾಳೆ ಮಾಡಿ ನೋಡಲಾಗುತ್ತದೆ. ಇದಕ್ಕಾಗಿ ವಿಧಾನಸಭಾ ಕ್ಷೇತ್ರವಾರು ತಲಾ 5 ಮತಗಟ್ಟೆಗಳ ಮತಯಂತ್ರಗಳನ್ನು ಎಲ್ಲಾ ಪಕ್ಷ ಏಜೆಂಟ್‌ಗಳ ಸಮ್ಮುಖದಲ್ಲಿಯೇ ಲಾಟರಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇವಿಎಂಗಳಲ್ಲಿನ ಮತಗಳು ವಿವಿ ಪ್ಯಾಟ್‌ನ ಮತಗಳ ನಡುವೆ ವ್ಯಾತ್ಯಾಸ ಬಂದರೆ ಅಂತಿಮವಾಗಿ ವಿವಿ ಪ್ಯಾಟ್‌ಗಳಲ್ಲಿನ ಮತಗಳನ್ನೇ ಪರಿಗಣಿಸಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದರು.

ಮತ ಏಣಿಕೆ ವಿಡಿಯೋ ಸಿಡಿ ಅಭ್ಯರ್ಥಿಗಳಿಗೆ: ಚುನಾವಣಾ ಆಯೋಗದ ನಿರ್ದೇಶನದಂತೆ ಈ ಬಾರಿ ಮತ ಎಣಿಕೆ ಸಂದರ್ಭದಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರವಾರು ಮತ ಎಣಿಕೆ ಕೊಠಡಿಗಳ ಕಾರ್ಯಚಟುವಟಿಕೆಯನ್ನು ಸಂಪೂರ್ಣವಾಗಿ ವಿಡಿಯೋ ರೆಕಾರ್ಡ್‌ ಮಾಡಲಾಗುತ್ತದೆ. ಫ‌ಲಿತಾಂಶದ ಬಳಿಕ ಅದನ್ನು ಸಿ.ಡಿ ಮಾಡಿಸಿ, ಆ ಕ್ಷೇತ್ರದಿಂದ ಸ್ಪರ್ಧಿಸಿರುವ ಪ್ರತಿಯೊಬ್ಬ ಅಭ್ಯರ್ಥಿಗೂ ತಲುಪಿಸಲಾಗುತ್ತದೆ.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.