ಒಕ್ಕಲಿಗರ ಸಂಘದ ಅಧ್ಯಕ್ಷ ಪದಚ್ಯುತಿ
Team Udayavani, Jul 31, 2018, 11:23 AM IST
ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲರಾದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಎನ್.ಬೆಟ್ಟೇಗೌಡ ಹಾಗೂ ಇತರ ಪದಾಧಿಕಾರಿಗಳು ಸೋಮವಾರ ಪದಚ್ಯುತಿಗೊಂಡಿದ್ದು, ಆ.7ರಂದು ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ ನಡೆಯಲಿದೆ.
ನಾಲ್ಕೂವರೆ ವರ್ಷದ ಹಿಂದೆ ಒಕ್ಕಲಿಗರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಮೊದಲ ಮೂರು ವರ್ಷ ಡಾ.ಅಪ್ಪಾಜಿಗೌಡ
ಅಧ್ಯಕ್ಷರಾಗಿದ್ದರು. ಬಳಿಕ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಂಡ ಕಾರಣ 2017ರ ಜನವರಿಯಲ್ಲಿ ಡಿ.ಎನ್.ಬೆಟ್ಟೇಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಸದ್ಯ ಜಂಟಿ ಕಾರ್ಯದರ್ಶಿಯಾಗಿದ್ದ ನಾರಾಯಣ ಮೂರ್ತಿ ಅವರನ್ನು ಹಂಗಾಮಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಒಕ್ಕಲಿಗರ ಸಂಘದ ಅಧೀನ ಸಂಸ್ಥೆಗಳಲ್ಲಿ ಅನಗತ್ಯವಾಗಿ ಸಾವಿರಾರು ಸಿಬ್ಬಂದಿಯನ್ನು ನೇಮಕ ಮಾಡುವ ಮೂಲಕ
ಅಭ್ಯರ್ಥಿಗಳಿಂದ ದೊಡ್ಡ ಮೊತ್ತದ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಅನಗತ್ಯ ಸಿಬ್ಬಂದಿ ಕೈಬಿಡಬೇಕು ಎಂದು ಒತ್ತಾಯಿಸಿ ರಾಜ್ಯ ಒಕ್ಕಲಿಗರ ಸಂಘದ ಅಧೀನದಲ್ಲಿರುವ 18 ಸಂಸ್ಥೆಗಳ ನೌಕರರು ಎರಡು ಸುತ್ತಿನ ಪ್ರತಿಭಟನೆ ನಡೆಸಿದ್ದರು. ಇದರಿಂದ ಕಿಮ್ಸ್ ಸೇರಿ ಇತರೆ ಆಸ್ಪತ್ರೆಗಳಲ್ಲಿ ಹೊರ ರೋಗಿ ಚಿಕಿತ್ಸೆಯಲ್ಲಿ ವ್ಯತ್ಯಯ ಉಂಟಾಗಿತ್ತು.
ಸಂಘದ ಸಂಸ್ಥೆಗಳ ಕಾಯಂ ನೌಕರರಿಗೆ ಸಕಾಲದಲ್ಲಿ ವೇತನ ನೀಡದ ಸ್ಥಿತಿ ಇರುವಾಗ ಅನಗತ್ಯ ಸಿಬ್ಬಂದಿ ನೇಮಕದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಬಗ್ಗೆ ಸಂಘದ ನಿರ್ದೇಶಕರೂ ಆಕ್ಷೇಪ ವ್ಯಕ್ತಪಡಿಸಿದ್ದರು. ಕೆಲ ನಿರ್ದೇಶಕರು ನೌಕರರ ಸಂಘಕ್ಕೆ ಕುಮ್ಮಕ್ಕು ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂಬುದಾಗಿ ಪದಚ್ಯುತ ಅಧ್ಯಕ್ಷ ಬೆಟ್ಟೇಗೌಡ ಕೂಡ ಈ ಹಿಂದೆ ಆರೋಪಿಸಿದ್ದರು.
ಸಭೆ ಕರೆದಿರಲಿಲ್ಲ: ಈ ನಡುವೆ ಸಂಘದ ಅಧ್ಯಕ್ಷರಾಗಿದ್ದ ಬೆಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್, ಖಜಾಂಚಿ ಕಾಳೇಗೌಡ ವಿರುದ್ಧ ಸಂಘದ 35 ನಿರ್ದೇಶಕರ ಪೈಕಿ 19 ನಿರ್ದೇಶಕರು ಅವಿಶ್ವಾಸ ನಿರ್ಣಯ ಮಂಡಿಸಿ ನೋಟಿಸ್ ನೀಡಿದ್ದರು. ಅವಿಶ್ವಾಸ ನಿರ್ಣಯ ಮಂಡಿಸಿದ ಏಳು ದಿನದೊಳಗೆ ಅಧ್ಯಕ್ಷರು ವಿಶ್ವಾಸ ಮತ ಸಾಬೀತು
ಪಡಿಸಬೇಕು. ಆದರೆ 12 ದಿನ ಕಳೆದರೂ ಬೆಟ್ಟೇಗೌಡರು ಸಭೆ ಕರೆಯದ ಕಾರಣ ಉಪಾಧ್ಯಕ್ಷರಾಗಿದ್ದ ಶಿವಲಿಂಗಯ್ಯ ಎಲ್ಲ 35 ನಿರ್ದೇಶಕರಿಗೆ ನೋಟಿಸ್ ನೀಡಿ ಸೋಮವಾರ ಸಭೆ ಕರೆದಿದ್ದರು.
ಅವಿಶ್ವಾಸದ ಪರ 21 ಮತ: ಶಿವಲಿಂಗಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ 22 ನಿರ್ದೇಶಕರು
ಪಾಲ್ಗೊಂಡಿದ್ದರು. ಬೆಟ್ಟೇಗೌಡ ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಅವಿಶ್ವಾಸ ನಿರ್ಣಯದ ಪರ 21 ಮತ
ಚಲಾವಣೆಯಾದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿದ್ದ ಬೆಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್, ಖಜಾಂಚಿ ಕಾಳೇಗೌಡ ಪದಚ್ಯುತಿಗೊಂಡರು. ಬಳಿಕ ಉಪಾಧ್ಯಕ್ಷರಾದ ಶಿವಲಿಂಗಯ್ಯ, ಪ್ರಸನ್ನ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜಂಟಿ ಕಾರ್ಯದರ್ಶಿಯಾಗಿದ್ದ ನಾರಾಯಣ ಮೂರ್ತಿ ಅವರನ್ನು ಕಾರ್ಯದರ್ಶಿಯನ್ನಾಗಿ ಸಭೆಯಲ್ಲಿ ನೇಮಕ ಮಾಡಲಾಗಿದೆ.
ಸಂಘದ ಮೇಲೆ ಆರ್ಥಿಕ ಹೊರೆ ಪದಚ್ಯುತ ಅಧ್ಯಕ್ಷ ಸೇರಿ ಮೂವರು ಪದಾಧಿಕಾರಿಗಳ ವಿರುದ್ಧ ಜು.18ರಂದು ಅವಿಶ್ವಾಸ ನಿರ್ಣಯ ಮಂಡಿಸಿದ್ದೆವು. ಆದರೆ ಸಭೆಯನ್ನೇ ಕರೆಯದ ಕಾರಣ ಉಪಾಧ್ಯಕ್ಷರಾಗಿದ್ದ ಶಿವಲಿಂಗಯ್ಯ ನೋಟಿಸ್ ನೀಡಿ ನಡೆಸಿದ ಸಭೆಯಲ್ಲಿ ಅವಿಶ್ವಾಸದ ಪರ 21 ಮತ ಚಲಾವಣೆಯಾಗಿವೆ. ಬೆಟ್ಟೇಗೌಡರ ಒಂದೂವರೆ ವರ್ಷದ ಆಡಳಿತಾವಧಿಯಲ್ಲಿ ಅನಗತ್ಯವಾಗಿ 1100 ಸಿಬ್ಬಂದಿ ನೇಮಕವಾಗಿದೆ. ಅನುದಾನ ಕಾಯ್ದಿರಿಸದೆ ಅನಗತ್ಯ ಹುದ್ದೆಗಳನ್ನು ನೇಮಕ ಮಾಡಿ ಸಂಘಕ್ಕೆ ಆರ್ಥಿಕ ಹೊರೆ ತಂದಿದ್ದಾರೆ. ಅತಿಗಣ್ಯರಿಗೆ ನೀಡಿದ್ದ ಸೀಟು ಹಂಚಿಕೆ ಸೇರಿದಂತೆ ಸಂಘದ ನಿರ್ದೇಶಕರ ವಿರುದ್ಧವೂ ಅನಗತ್ಯ ಆರೋಪ ಮಾಡಿ ಸಂಘದ ಘನತೆಗೆ ಚ್ಯುತಿ ತಂದಿದ್ದರು ಎಂದು ಸಂಘದ ಮಾಜಿ ಅಧ್ಯಕ್ಷ ಅಪ್ಪಾಜಿಗೌಡ ಹೇಳಿದರು.
ನಾನು ಕಾನೂನು ಹೋರಾಟಕ್ಕೆ ಮುಂದಾಗುವುದಿಲ್ಲ. ಆದರೆ ಈ ಹಿಂದೆ ಕೆಲವರು ಸಂಘಕ್ಕೆ 61 ಕೋಟಿ ರೂ. ನಷ್ಟ ಮಾಡಿದ್ದನ್ನು ಬಯಲು ಮಾಡಿದ್ದೆ. ಅದಕ್ಕೆ ಕಾರಣರಾದವರು ಅವಿಶ್ವಾಸ ನಿರ್ಣಯದಲ್ಲಿ ಪಾಲ್ಗೊಂಡಿದ್ದು, ಅವರ ಅಕ್ರಮ ಬಯಲು ಮಾಡುವೆ. ಅವರಿಂದಲೇ ನಷ್ಟ ಭರಿಸಲು ಹೋರಾಟ ನಡೆಸುವೆ.
ಡಿ.ಎನ್.ಬೆಟ್ಟೇಗೌಡ, ಪದಚ್ಯುತ ಅಧ್ಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.