ಗೌರಿ ಹತ್ಯೆ ಆರೋಪಿಗಳ ಪತ್ತೆಗೆ ಒತ್ತಡ
Team Udayavani, Dec 6, 2017, 12:38 PM IST
ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ ತನಿಖೆ ಚುರುಕುಗೊಳ್ಳಬೇಕು ಹಾಗೂ ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಬೇಕು ಎಂದು ಒತ್ತಾಯಿಸಿ ಗೌರಿ ಲಂಕೇಶ್ ಒಳಗದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರಗತಿಪರ ಚಿಂತಕರು, ಸಾಹಿತಿಗಳು ಹಾಗೂ ಹೋರಾಟಗಾರರನ್ನು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು.
ಗೌರಿ ಲಂಕೇಶ್ ಹತ್ಯೆಯಾಗಿ ಮೂರು ತಿಂಗಳು ಕಳೆದರೂ ಇದುವರೆಗೂ ಆರೋಪಿಗಳನ್ನು ಬಂಧಿಸದಿರುವುದನ್ನು ಖಂಡಿಸಿ ಗೌರಿ ಲಂಕೇಶ್ ಬಳಗದ ಕಾರ್ಯಕರ್ತರು ಮಂಗಳವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮತ್ತಿಗೆ ಹಾಕಲು ಜಾಥಾ ಕೈಗೊಂಡರು. ಮೌರ್ಯ ವೃತ್ತದಿಂದ ಕೆಲ ದೂರ ಹೋಗುತ್ತಿದ್ದಂತೆ ನೂರಾರು ಮಂದಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು ಬಳಿಕ ಬಿಡುಗಡೆ ಮಾಡಿದರು.
ಇದಕ್ಕೂ ಮೊದಲು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್, ಪ್ರಪಂಚದ ಎಲ್ಲ ವಿದ್ಯಮಾನಗಳ ಬಗ್ಗೆ ಬಹಳ ಸಂವೇದನ ಶೀಲರಾಗಿ “ಮನ್ ಕಿ ಬಾತ್’ನಲ್ಲಿ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ, ವಿಚಾರವಾದಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರದಲ್ಲಿ ಮೌನವಹಿಸಿರುವುದು ಯಾಕೆ ಎಂದು ಪ್ರಶ್ನಿಸಿದರು.
ನಮ್ಮೆಲ್ಲರ ಗೆಳೆಯ, ವಿಚಾರವಾದಿ ಡಾ.ಎಂ.ಎಂ.ಕಲಬುರ್ಗಿ, ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ, ಗೌರಿ ಲಂಕೇಶ್ ಅವರನ್ನೂ ನಾವು ಕಳೆದುಕೊಂಡಿದ್ದೇವೆ.ಆದರೆ, ಹಂತಕರ ಬಂಧನ ಇನ್ನು ಆಗಿಲ್ಲ. ರಾಜ್ಯ ಸರ್ಕಾರದ ಮೇಲಿರುವ ಭರವಸೆ ಕಡಿಮೆಯಾಗುವ ಮೊದಲೇ ಹಂತಕರ ಬಂಧನವಾಗಬೇಕು ಎಂದು ಚಂಪಾ ಆಗ್ರಹಿಸಿದರು.
ಇನ್ನು ಗೌರಿ ಲಂಕೇಶ್ ಸಹೋದರಿ, ಸಿನಿಮಾ ನಿರ್ದೇಶಕಿ ಕವಿತಾ ಲಂಕೇಶ್ ಮಾತನಾಡಿ, ಗೌರಿ ಹಂತಕರ ತನಿಖೆ ಮಂದಗತಿಯಲ್ಲಿ ನಡೆಯುತ್ತಿದೆ. ಅಲ್ಲದೆ, ತನಿಖೆ ಯಾವ ರೀತಿ ನಡೆಯುತ್ತಿದೆ ಎನ್ನುವ ಮಾಹಿತಿಯೂ ನಮಗೆ ದೊರೆಯುತ್ತಿಲ್ಲ. ರಾಜ್ಯ ಸರ್ಕಾರ ತ್ವರಿತವಾಗಿ ಹಂತಕರನ್ನು ಬಂಧಿಸಬೇಕು. ಇಲ್ಲವಾದರೆ, ಸರ್ಕಾರದ ಮೇಲಿನ ಭರವಸೆ ದೂರವಾಗುತ್ತದೆ ಎಂದರು.
ಲೇಖಕ ಯೋಗೇಶ್ ಮಾಸ್ಟರ್, ಕೋಮು ಸೌಹರ್ದ ವೇದಿಕೆ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಅಶೋಕ್, ವಕೀಲರಾದ ಅನಂತ್‌ನಾಯ್ಕ, ನರಸಿಂಹಮೂರ್ತಿ, ಬಸವರಾಜ ಪೂಜಾರ್, ಹಿರಿಯ ಸಾಹಿತಿ ಕೆ.ನೀಲಾ, ತ್ರಿಮೂರ್ತಿ ಇತರರು ಇದ್ದರು.
ಅನೂಪ್ ಗೌಡ ವಿಚಾರಣೆ: ಇತ್ತೀಚೆಗಷ್ಟೇ ಅಪಹರಣ ಯತ್ನ ಹಾಗೂ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ತಾಹೀರ್ ಹುಸೇನ್ ಅಲಿಯಾಸ್ ಅನೂಪ್ ಗೌಡನನ್ನು ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ.
ಚಿಕ್ಕಬಳ್ಳಾಪುರ ಮೂಲದ ತಾಹೀರ್ ಹುಸೇನ್ ಹಲವು ಬಾರಿ ಅಕ್ರಮ ಶಸ್ತ್ರಾಸ್ತ್ರ ಪೂರೈಕೆ ಪ್ರಕರಣಗಳಲ್ಲಿ ಬಂಧಿತನಾಗಿದ್ದಾನೆ. ಈತನ ವಿರುದ್ಧ ಬೆಳಗಾವಿ, ಮೈಸೂರು, ಬೆಂಗಳೂರು, ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳಿವೆ. 10 ತಿಂಗಳ ಹಿಂದೆಯಷ್ಟೇ ತಾಹೀರ್ ಹುಸೇನ್‌ನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು.
ನೆರೆ ರಾಜ್ಯಗಳಲ್ಲಿನ ಅಕ್ರಮ ಶಸ್ತ್ರಾಸ್ತ್ರ ಪೂರೈಸುವವರೊಂದಿಗೆ ತಾಹೀರ್ ನಿಕಟ ಸಂಪರ್ಕ ಹೊಂದಿದ್ದು, ಇದನ್ನೇ ಈತ ವೃತ್ತಿಯನ್ನಾಗಿಸಿಕೊಂಡಿದ್ದ. ಆತನನ್ನು ಸದ್ಯದಲ್ಲೇ ವಶಕ್ಕೆ ಪಡೆದು ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತೇವೆ. ಡಿ.16ರವರೆಗೆ ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುವುದು ಎಂದು ಎಸ್‌ಐಟಿ ತನಿಖಾಧಿಕಾರಿ ಎಂ.ಎನ್.ಅನುಚೇತ್ “ಉದಯವಾಣಿ’ಗೆ ತಿಳಿಸಿದ್ದಾರೆ.
ಗೌರಿ ಹಂತಕರಿಗೆ ಪಿಸ್ತೂಲ್ ಮಾರಾಟ?: ಪತ್ರಕರ್ತೆ ಗೌರಿ ಹತ್ಯೆಗೈದಿರುವುದು 7.65 ಎಂಎಂ ಕಂಟ್ರಿ ಮೆಡ್ ಪಿಸ್ತೂಲ್‌ನಲ್ಲಿಯೇ ಎಂದು ವಿಧಿ ವಿಜ್ಞಾನ ಪರೀûಾ ವರದಿ ತಿಳಿಸಿದೆ. ಹೆಚ್ಚಾಗಿ ಈ ಕಂಟ್ರಿ ಮೆಡ್ ಪಿಸ್ತೂಲ್‌ಗಳು ಮಾರಾಟವಾಗುವುದು ಉತ್ತರ ಕರ್ನಾಟಕದ ಭಾಗದಲ್ಲಿ.
ಜತೆಗೆ ಗೌರಿ ಹಂತಕರಿಗೆ ಉತ್ತರ ಕರ್ನಾಟಕ ಹಾಗೂ ಉತ್ತರ ಭಾರತದ ಕಡೆಯವರೇ ಪಿಸ್ತೂಲ್ ಪೂರೈಕೆ ಮಾಡಿದ್ದಾರೆ ಎಂಬ ಅನುಮಾನ ಕೂಡ ಇದೆ. ಈ ಹಿನ್ನೆಲೆಯಲ್ಲಿ ತಾಹೀರ್‌ನನ್ನು ವಿಚಾರಣೆಗೊಳಪಡಿಸುವುದರಿಂದ ಮಹತ್ವದ ಸುಳಿವು ಸಿಗುವ ಸಾಧ್ಯತೆಯಿದೆ ಎಂದು ಅಧಿಕಾರಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ: ನರಿಂಗಾನ ಕಂಬಳ್ಳೋತ್ಸವದಲ್ಲಿ ಸಿಎಂ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ
ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್ ಸಿಂಗ್
Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.