Bengaluru: ಪ್ರಧಾನಿ ಮೋದಿ ಜತೆ ವೇದಿಕೆಯಲ್ಲಿ ದೇವೇಗೌಡ, ಪ್ರಸಾದ್, ಬಿಎಸ್‌ವೈ
Team Udayavani, Apr 11, 2024, 10:03 PM IST
ಬೆಂಗಳೂರು: ಸಿಎಂ ಸಿದ್ದರಾಮಯ್ಯರ ತವರು ಜಿಲ್ಲೆಯಲ್ಲಿ ಏ.14ರಂದು ನಡೆಯುವ ಪ್ರಧಾನಿ ಮೋದಿ ಅವರ ಸಮಾವೇಶದಲ್ಲಿ ರಾಜ್ಯ ರಾಜಕಾರಣದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಪ್ರತಿಷ್ಠಾಪಿಸುವ ಮೂಲಕ ಬೃಹತ್ ರಾಜಕೀಯ ಸಂದೇಶ ರವಾನೆ ಮಾಡುವುದಕ್ಕೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ.
ಈ ಸಮಾವೇಶವನ್ನು ಬಿಜೆಪಿ-ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಲೋಕಸಭಾ ಚುನಾವಣೆಯ ನೈಜ ರಣಕಹಳೆ ಈ ಮೂಲಕ ಮೊಳಗಿಸಲು ಕಾರ್ಯತಂತ್ರ ಹೆಣೆದಿದೆ. ಪ್ರಧಾನಿ ಮೋದಿ ಜತೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಒಂದೇ ವೇದಿಕೆಯಲ್ಲಿ ಉಪಸ್ಥಿತರಿರಲು ಸಿದ್ಧತೆ ನಡೆದಿದೆ.
ಇದರ ಜತೆಗೆ ಒಬಿಸಿ ಪ್ರತಿನಿಧಿಯಾಗಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರಿಗೂ ಮಣೆ ಹಾಕಲು ನಿರ್ಧರಿಸಲಾಗಿದೆ. ಈ ಮೂಲಕ ದೊಡ್ಡ ಸಾಮಾಜಿಕ ಸಮೀಕರಣದ ಸಂದೇಶ ರವಾನೆ ಮಾಡುವುದು ಬಿಜೆಪಿಯ ಉದ್ದೇಶವಾಗಿದೆ.
ಸಮಾವೇಶದ ಸಿದ್ಧತೆಗೆ ಸಂಬಂಧಿಸಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಚುನಾವಣಾ ಸಮಿತಿ ಸಂಚಾಲಕ ವಿ.ಸುನೀಲ್ ಕುಮಾರ್ ಜತೆಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದು, ಬರೋಬ್ಬರಿ 1 ಲಕ್ಷಕ್ಕೂ ಹೆಚ್ಚು ಜನರನ್ನು ಕರೆತರುವ ಮಹತ್ವಾಕಾಂಕ್ಷೆ ಹೊಂದಲಾಗಿದೆ. ಈ ಮೂಲಕ ಮೈಸೂರಿನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಸೆಡ್ಡು ಹೊಡೆಯುವುದು ಎನ್‌ಡಿಎ ಮೈತ್ರಿಕೂಟದ ಉದ್ದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ
Vikram Gowda ಎನ್‌ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
MUST WATCH
ಹೊಸ ಸೇರ್ಪಡೆ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.