13ರಂದು ಪ್ರಧಾನಿ ಮೋದಿ ರಾಯಚೂರಿಗೆ
Team Udayavani, Mar 5, 2018, 6:40 AM IST
ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದು, ಮಾ.13ರಂದು ರಾಯಚೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮಧ್ಯೆ, ಪ್ರಧಾನಿಯವರ ಬೆಳಗಾವಿ ಕಾರ್ಯಕ್ರಮವನ್ನು ಚಿಕ್ಕೋಡಿಗೆ ಸ್ಥಳಾಂತರಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಈ ಸಮಾವೇಶದ ದಿನಾಂಕವನ್ನೂ ಅಂತಿಮಗೊಳಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು ಮತ್ತು ಚಿಕ್ಕೋಡಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ಬೃಹತ್ ಸಮಾವೇಶಗಳನ್ನು ಏರ್ಪಡಿಸುವ ಮೂಲಕ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸಲಾಗುವುದು ಎಂದು ಹೇಳಿದರು. ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮತ್ತು ಕೊಡಗು ಜಿಲ್ಲೆಯ ಕುಶಾಲನಗರದಿಂದ ಆರಂಭವಾಗಿರುವ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಜನ ಸುರಕ್ಷಾ ಯಾತ್ರೆ ಮಾ.6ರಂದು ಮಂಗಳೂರಿನಲ್ಲಿ ಸಮಾಪನಗೊಳ್ಳಲಿದೆ. ಇದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳುತ್ತಾರೆ. ರಾಜಧಾನಿಯಲ್ಲಿ ನಡೆಯುತ್ತಿರುವ ಬೆಂಗಳೂರು ಉಳಿಸಿ ಪಾದಯಾತ್ರೆ ಮಾ.15ರಂದು ಅಂತ್ಯಗೊಳ್ಳಲಿದ್ದು, ಆ ಸಲುವಾಗಿ ಬೆಂಗಳೂರಿನಲ್ಲಿ ಮಾ.15ರಂದು ನಡೆಯುವ ಸಮಾವೇಶಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ರಾಜೀನಾಮೆ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
MUST WATCH
ಹೊಸ ಸೇರ್ಪಡೆ
BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
Punjalkatte: ಗುಂಡಿಗಳು ಸಾರ್ ಗುಂಡಿಗಳು
Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!
Ramayana: ಎರಡು ಭಾಗಗಳಾಗಿ ಬರಲಿದೆ ಬಿಗ್ ಬಜೆಟ್ ʼರಾಮಾಯಣʼ; ರಿಲೀಸ್ ಡೇಟ್ ಅನೌನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.