ಪ್ರಧಾನಿ ಜನ್ಮದಿನ: ಬಿಜೆಪಿಯಿಂದ ಸ್ವಚ್ಛತಾ ಕಾರ್ಯ
Team Udayavani, Sep 18, 2017, 12:01 PM IST
ಯಲಹಂಕ: ಪ್ರಧಾನಿ ನರೇಂದ್ರಮೋದಿ ತಮ್ಮ ಹುಟ್ಟು ಹಬ್ಬವನ್ನು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಬೇಕೆ ಎಂದು ಇಡೀ ದೇಶಕ್ಕೆ ಕರೆ ಕೊಟ್ಟಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.
ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಘಟಕದಿಂದ ಪ್ರಧಾನಿ ನರೇಂದ್ರಮೋದಿ ಹುಟ್ಟು ಹಬ್ಬದ ಅಂಗವಾಗಿ ವಿದ್ಯಾರಣ್ಯಪುರದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಹುಟ್ಟುಹಬ್ಬವನ್ನು ಕೆಲವರು ಆಡಂಬರದಿಂದ ಆಚರಿಸಿಕೊಳ್ಳುವುದು ನೋಡಿದ್ದೇವೆ. ಮೋದಿಯವರು ತಮ್ಮ ಹುಟ್ಟಿದ ದಿನವನ್ನು ಸ್ವಚ್ಛತೆಗೆ ಆದ್ಯತೆ ನೀಡಿದ್ದಾರೆ.
ಇವರ ಆದರ್ಶವನ್ನು ನಾವೆಲ್ಲರೂ ಪಾಲಿಸಬೇಕು. ನಮ್ಮ ಪರಿಸರ ಮತ್ತು ಸುತ್ತಮುತ್ತಲ ಎಲ್ಲಾ ಜಾಗಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಜೊತೆಗೆ ಸ್ವಚ್ಛತಾ ಕಾರ್ಯ ಕೈಗೊಳ್ಳುವವರಿಗೆ ಸಹಕಾರ ನೀಡಬೇಕು ಎಂದರು. ಸ್ವಚ್ಛತಾ ಕಾರ್ಯದಲ್ಲಿ ಬಿಬಿಎಂಪಿ ಪೌರಕಾರ್ಮಿಕರು, ಐಟಿ ಉದ್ಯೋಗಿಗಳು ಸೇರಿದಂತೆ ಬಿಜೆಪಿ ವಿವಿಧ ಮೋರ್ಚಾಗಳ ಸುಮಾರು 500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.
ವಿದ್ಯಾರಣ್ಯಪುರ ಮುಖ್ಯ ರಸ್ತೆ ಚರಂಡಿಗಳು ಹಾಗೂ ಬಸ್ ನಿಲ್ದಾಣದಲ್ಲಿ ಸಂಗ್ರಹವಾಗಿದ್ದ ಕಸ ತೆರವುಗೊಳಿಸಿ ಗಿಡ ಗಂಟಿಗಳನ್ನು ಕಿತ್ತು ಹಾಕಿ ಸ್ವಚ್ಛಗೊಳಿಸಿದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ಎ.ರವಿ, ಬಿಬಿಎಂಪಿ ಸದಸ್ಯರಾದ ಕುಸುಮಾ, ಜಯಮ್ಮ ಪಿಳ್ಳಪ್ಪ, ಬ್ಯಾಟರಾಯನಪುರ ಬಿಜೆಪಿ ಘಟಕದ ಅಧ್ಯಕ್ಷ ರಾಜಗೋಪಾಲ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.