![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 21, 2023, 6:55 PM IST
ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇನ್ನೊಂದು ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್, ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಆದೇಶದಲ್ಲಿ ತಿಳಿಸಿತ್ತು.
ಈ ಕುರಿತು ಮುಖ್ಯ ಕಾರ್ಯದರ್ಶಿಯವರು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿ ಪರಿಷ್ಕರಿಸಲು ತೀರ್ಮಾನಿಸಲಾಗಿತ್ತು. ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಹೊಸ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಇದನ್ನೂ ಓದಿ: ಮಂಗಳೂರು: ಆಟೋರಿಕ್ಷಾಕ್ಕೆ ಬೈಕ್ ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾವು
You seem to have an Ad Blocker on.
To continue reading, please turn it off or whitelist Udayavani.