ಪ್ರಾಂಶುಪಾಲರ ಕಂಪ್ಯೂಟರ್ ಕದ್ದವರ ಸೆರೆ
Team Udayavani, Mar 31, 2017, 11:39 AM IST
ಬೆಂಗಳೂರು: ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರ ಚೇಂಬರ್ನಲ್ಲಿದ್ದ 2.40 ಲಕ್ಷರೂ ಮೌಲ್ಯದ ಕಂಪ್ಯೂಟರ್ ಹಾಗೂ ಬಿಡಿಭಾಗಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಪ್ರೇಮ್ ಮತ್ತು ಲಕ್ಷ್ಮಣ್ ಬಂಧಿತರು.
ಇವರು ಕೇಂದ್ರೀಯ ವಿದ್ಯಾಲಯದಲ್ಲೇ ಸೆಕ್ಯೂರಿಟಿ ಗಾರ್ಡಗಳಾಗಿ ಕೆಲಸ ಮಾಡುತ್ತಿದ್ದರು. ಮಾರ್ಚ್ 24ರಂದು ಎಂದಿನಂತೆ ಕೆಲಸ ಮುಗಿಸಿಕೊಂಡು ಹೋಗುವಾಗ ಪ್ರಾಂಶುಪಾಲರು ತಮ್ಮ ಚೇಂಬರ್ಗೆ ಬೀಗ ಹಾಕಿ ತೆರಳಿದ್ದರು. ಆದರೆ ಮಧ್ಯರಾತ್ರಿ ಕೊಠಡಿ ಬೀಗ ಮುರಿದು ಒಳನುಗ್ಗಿದ್ದ ಆರೋಪಿಗಳು 2 ಲಕ್ಷರೂ ಮೌಲ್ಯದ ಕಂಪ್ಯೂಟರ್ ಹಾಗೂ ಬಿಡಿಭಾಗಗಳನ್ನು ಕದ್ದೊಯ್ದಿದ್ದರು.
ಮಾರನೇ ದಿನ ಈ ಘಟನೆ ಬೆಳಕಿಗೆ ಬಂದಿತ್ತು. ಈ ಸಂಬಂಧ ದಾಖಲಾಗಿದ್ದ ದೂರಿನ ಅನ್ವಯ ತನಿಖೆ ನಡೆಸಿದ್ದ ಪೊಲೀಸರು ಮಾರ್ಚ್ 27ರಂದು ವಿವಿ ಸೆಕ್ಯೂರಿಟಿ ಗಾರ್ಡ್ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳಿಬ್ಬರು ಕಳ್ಳತನದ ಬಗ್ಗೆ ಬಾಯ್ಬಿಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.