ಖಾಸಗಿ ಬಸ್‌ ನಿಲ್ದಾಣ ಪೀಣ್ಯಕ್ಕೆ ಸ್ಥಳಾಂತರ


Team Udayavani, Dec 29, 2017, 12:09 PM IST

khasagi-bus.jpg

ಬೆಂಗಳೂರು: ನಗರದ ಹೃದಯಭಾಗದಲ್ಲಿರುವ ಖಾಸಗಿ ಬಸ್‌ ನಿಲ್ದಾಣಗಳ ಎತ್ತಂಗಡಿ ಮಾಡಬೇಕು ಎಂಬ ಕೂಗು ಮತ್ತೂಮ್ಮೆ ಕೇಳಿಬಂದಿದೆ.
ಮೆಜೆಸ್ಟಿಕ್‌ ಸುತ್ತ ಸಂಚಾರದಟ್ಟಣೆಗೆ ಪ್ರಮುಖ ಕಾರಣವಾಗಿರುವ ಖಾಸಗಿ ಬಸ್‌ಗಳ ಕಾರ್ಯಾಚರಣೆಯನ್ನು ನಗರದಿಂದ ಹೊರಗೆಹಾಕಲು ಹಲವು ಬಾರಿ ಕೈಹಾಕಿ ವಿಫ‌ಲವಾಗಿದ್ದ ಸರ್ಕಾರ, ಮತ್ತೂಮ್ಮೆ ಈ ನಿಟ್ಟಿನಲ್ಲಿ ಮುಂದಾಗಿದೆ. ಆದರೆ, ಮೂಲಸೌಕರ್ಯ ಸಿಗದ ಹೊರತು, ಹೋಗುವ ಪ್ರಶ್ನೆಯೇ ಇಲ್ಲ ಎಂದು ಖಾಸಗಿ ಬಸ್‌ ಮಾಲಿಕರು ಪಟ್ಟುಹಿಡಿದಿದ್ದಾರೆ. 

ನಗರದ ಪೀಣ್ಯ ಬಸವೇಶ್ವರ ಬಸ್‌ ನಿಲ್ದಾಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ, ಇತ್ತೀಚೆಗೆ ನಗರದಲ್ಲಿ ವಾಯುಮಾಲಿನ್ಯ ವಿಪರೀತ ಆಗುತ್ತಿದೆ. ಬೆಂಗಳೂರನ್ನು ಮಾಲಿನ್ಯರಹಿತ ನಗರವಾಗಿ ನಿರ್ಮಿಸಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಪೀಕ್‌ ಅವರ್‌ನಲ್ಲಿ ಭಾರೀ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ಖಾಸಗಿ ಬಸ್‌ ನಿಲ್ದಾಣ ಸ್ಥಳಾಂತರಿಸಲು ಉದ್ದೇಶಿಸಲಾಗಿದೆ ಎಂದರು.  

ಪೀಣ್ಯದಲ್ಲಿ ಎರಡೂವರೆ ಎಕರೆ ಜಾಗ ಲಭ್ಯವಿದೆ. ಅಲ್ಲಿ ಮೂಲಸೌಕರ್ಯ ಕಲ್ಪಿಸಿ, ನಿಲ್ದಾಣ ಶಿಫ್ಟ್ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ ಎಂದ ಅವರು, ಈ ಸಂಬಂಧ ಇನ್ನೂ ಖಾಸಗಿ ಬಸ್‌ ಮಾಲಿಕರೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ. ಶೀಘ್ರ ಸಭೆ ಕರೆಯಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. 

ಸೌಲಭ್ಯ ಕೊಟ್ಟು ಶಿಫ್ಟ್ ಮಾಡಿ: ಆದರೆ, ಮೂಲಸೌಕರ್ಯಗಳನ್ನು ಕಲ್ಪಿಸದ ಹೊರತು, ಸ್ಥಳಾಂತರಗೊಳ್ಳಲು ಸಾಧ್ಯವೇ ಇಲ್ಲ. ಕೆಎಸ್‌ಆರ್‌ಟಿಸಿಗೆ ನಗರದ ನಾಲ್ಕೂ ದಿಕ್ಕುಗಳಲ್ಲಿ ಬಸ್‌ ನಿಲ್ದಾಣಗಳಿವೆ. ಖಾಸಗಿ ಬಸ್‌ ನಿಲ್ದಾಣಗಳಿಗೆ ಈ ವ್ಯವಸ್ಥೆ ಇಲ್ಲ. ನಮಗೇನೂ ಮೆಜೆಸ್ಟಿಕ್‌ ಮೂಲಕವೇ ಕಾರ್ಯಾಚರಣೆ ಮಾಡಬೇಕು ಎಂಬ ಹಠ ಇಲ್ಲ. ಸೂಕ್ತ ಸೌಲಭ್ಯಗಳ ಕೊರತೆಯಿಂದ ಅನಿವಾರ್ಯವಾಗಿ ಇಲ್ಲಿಂದಲೇ ಕಾರ್ಯಾಚರಣೆ ಮಾಡಬೇಕಾಗಿದೆ ಎಂದು ಖಾಸಗಿ ಪ್ರವಾಸಿ ಬಸ್‌ ಆಪರೇಟರ್ ಅಸೋಸಿಯೇಷನ್‌ ಸಹಾಯಕ ಕಾರ್ಯದರ್ಶಿ ಕೆ.ಎನ್‌. ರಮೇಶ್‌ ಸ್ಪಷ್ಟಪಡಿಸುತ್ತಾರೆ. 

ಅಷ್ಟಕ್ಕೂ ನಗರದ ಕೇಂದ್ರಭಾಗದಿಂದ ಕಾರ್ಯಾಚರಣೆ ನರಕಯಾತನೆಯಾಗಿದೆ. ಸಂಚಾರದಟ್ಟಣೆ ದಾಟಲು ಗಂಟೆಗಟ್ಟಲೆ ಸಮಯ ವ್ಯಯವಾಗುತ್ತಿದೆ. ಮೊದಲು ಸೌಲಭ್ಯಗಳನ್ನು ನೀಡಲಿ. ನಂತರ ಶಿಫ್ಟ್ ಮಾಡಲಿ ಎಂದು ಅವರು ಒತ್ತಾಯಿಸುತ್ತಾರೆ. 

ಖಾಸಗಿ ಬಸ್‌ಗಳಿಂದಲೇ ಸಂಚಾರ ದಟ್ಟಣೆ: ಮೆಜೆಸ್ಟಿಕ್‌ನ ಆನಂದರಾವ್‌ ವೃತ್ತದಲ್ಲಿ ಸುಮಾರು 468 ಹಾಗೂ ಧನ್ವಂತರಿ ಆಯುರ್ವೇದಿಕ್‌ ಕಾಲೇಜಿನಿಂದ 240ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಕಾರ್ಯಾಚರಣೆ ಮಾಡುತ್ತಿವೆ. ವಾಸ್ತವವಾಗಿ ಇವರಿಂದಲೇ ಮೆಜೆಸ್ಟಿಕ್‌ ಸುತ್ತ ಸಂಚಾರದಟ್ಟಣೆ ಆಗಿದೆ.

ಆದರೆ, ಹೊರಹಾಕಿರುವುದು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು! ಇದರಿಂದ ಪ್ರತಿ ದಿನ ಮೂರೂ ಸಾರಿಗೆ ನಿಗಮಕ್ಕೆ ನಿತ್ಯ 3ರಿಂದ 3.50 ಲಕ್ಷ ರೂ. ನಷ್ಟವಾಗುತ್ತಿದೆ. ಖಾಸಗಿ ಬಸ್‌ಗಳನ್ನು ಹೊರಹಾಕುವಂತೆ ಹಲವು ಬಾರಿ ಕೆಎಸ್‌ಆರ್‌ಟಿಸಿ ಕೂಡ ಮನವಿ ಮಾಡಿತ್ತು. ಆದರೆ, ಪ್ರಯೋಜನವಾಗಿರಲಿಲ್ಲ ಎಂದು ಕೆಎಸ್‌ಆರ್‌ಟಿಸಿಯ ಸಂಚಾರ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. 

ಸಮಗ್ರ ಅಭಿವೃದ್ಧಿ ಯೋಜನೆ (ಸಿಡಿಪಿ) ಪ್ರಕಾರ ಕೆಎಸ್‌ಆರ್‌ಟಿಸಿಯ ಎರಡು ಕಿ.ಮೀ. ಸುತ್ತಲಿನ ಪ್ರದೇಶದಲ್ಲಿ ಯಾವುದೇ ಖಾಸಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸುವಂತಿಲ್ಲ. ಆದರೆ, ಇಲ್ಲಿ ಆ ನಿಯಮ ಉಲ್ಲಂಘನೆಯಾಗುತ್ತಿದೆ ಎಂದೂ ಅವರು ಹೇಳುತ್ತಾರೆ. ಈ ಹಿಂದೆ ಕೂಡ ಹಲವು ಬಾರಿ ಖಾಸಗಿ ಬಸ್‌ ನಿಲ್ದಾಣ ಸ್ಥಳಾಂತರದ ಕೂಗು ಕೇಳಿಬಂದಿತ್ತು. ಆದರೆ, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ನಂತರ ಈ ಪ್ರಸ್ತಾವವನ್ನು ಕೈಬಿಡಲಾಗಿತ್ತು. ಈಗ ಮತ್ತೆ ಸಾರಿಗೆ ಇಲಾಖೆ ಸ್ಥಳಾಂತರಕ್ಕೆ ಮುಂದಾಗಿದೆ.

ಉದಯವಾಣಿ ಕಾಳಜಿಗೆ ಮೆಚ್ಚುಗೆ: ನಗರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ, “ಉದಯವಾಣಿ’ಯಲ್ಲಿ ಪ್ರಕಟವಾದ “ಧೂಳಾಗಿದೆ ಬೆಂದಕಾಳೂರು ಗಾಳಿ’ ವರದಿಯನ್ನು ಪ್ರಸ್ತಾಪಿಸಿದರು.

ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಈ ಬಗ್ಗೆ ಒಂದೆರಡು ದಿನಗಳ ಹಿಂದೆ “ಉದಯವಾಣಿ’ಯಲ್ಲಿ ವಿವರವಾದ ವರದಿ ಪ್ರಕಟವಾಗಿದೆ ಎಂದರು. ಮಾಲಿನ್ಯರಹಿತ ನಗರವನ್ನಾಗಿ ನಿರ್ಮಿಸುವುದು ನಮ್ಮ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.