ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ: ವಿಶೇಷ ಅಧಿವೇಶನ
Team Udayavani, Sep 8, 2017, 6:35 AM IST
ಬೆಂಗಳೂರು: ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಸರ್ಕಾರ ರೂಪಿಸಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕವನ್ನು ಶೀಘ್ರವೇ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದ್ದು, ವಿಧೇಯಕ ಅಂಗೀಕಾರಕ್ಕೆ ಸೆಪ್ಟೆಂಬರ್ ಅಂತ್ಯದೊಳಗೆ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲು ಮುಂದಾಗಿದೆ.
ರಾಜ್ಯದ ಎಲ್ಲ ಕುಟುಂಬಗಳನ್ನು “ಸಾರ್ವತ್ರಿಕ ಆರೋಗ್ಯ ವ್ಯಾಪ್ತಿ’ಗೆ(ಯೂನಿವರ್ಸಲ್ ಹೆಲ್ತ್ ಕವರೇಜ್) ತರುವ
ಯೋಜನೆಯನ್ನು ನವೆಂಬರ್ 1 ರಿಂದ ರಾಜ್ಯಾದ್ಯಂತ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಅದಕ್ಕೆ ಮುನ್ನ
ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ಒಪ್ಪಿಗೆ ಪಡೆಯಬೇಕಾಗಿರುವುದರಿಂದ
ಸೆಪ್ಟೆಂಬರ್ ಅಂತ್ಯದೊಳಗೆ ವಿಶೇಷ ಅಧಿವೇಶನ ಕರೆಯಲು ಚಿಂತನೆ ನಡೆಸಲಾಗಿದೆ.
ವಿಕಾಸಸೌಧದಲ್ಲಿ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಆರೋಗ್ಯ ಸಚಿವ ರಮೇಶ್‌ಕುಮಾರ್, ವಿಧೇಯಕ ಅಂಗೀಕಾರವಾದ ಬಳಿಕ ಅದಕ್ಕೆ ನಿಯಮಾವಳಿಗಳನ್ನು ರೂಪಿಸಬೇಕಾಗುತ್ತದೆ. ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ. ಆದರೆ, ನ.1ರೊಳಗೆ ಈ ಕಾಯ್ದೆಯೂ ಜಾರಿಯಾಗಬೇಕಿರುವುದರಿಂದ ಸೆಪ್ಟೆಂಬರ್ ಅಂತ್ಯದೊಳಗೆ ವಿಧೇಯಕಕ್ಕೆ ಸದನಗಳ ಒಪ್ಪಿಗೆ ಪಡೆಯಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು. ಈ ಹಿಂದೆ ರೂಪಿಸಿದ್ದ
ತಿದ್ದುಪಡಿ ವಿಧೇಯಕದಲ್ಲಿ ಕೈಗೊಂಡಿರುವ ಜನಪರ ನಿರ್ಣಯಗಳನ್ನು ಕೈಬಿಡುವುದಿಲ್ಲ. ತಪ್ಪಿತಸ್ಥರಿಗೆ ನೀಡುವ
ಶಿಕ್ಷೆಯನ್ನು 5 ರಿಂದ 3 ವರ್ಷಕ್ಕೆ ಇಳಿಸುವುದು ಸೇರಿ ಸಣ್ಣಪುಟ್ಟ ಬದಲಾವಣೆ ಮಾಡಲಾಗುವುದು ಎಂದರು.
ಮೊದಲು ಸರ್ಕಾರಿ ಆಸ್ಪತ್ರೆಗೆ ಹೋಗಬೇಕು: ಯೂನಿವರ್ಸಲ್ ಹೆಲ್ತ್ ಕವರೇಜ್ ಯೋಜನೆ ಜಾರಿಯಾದ ಬಳಿಕ ಸರ್ಕಾರವೇ ಜನರ ಚಿಕಿತ್ಸಾ ವೆಚ್ಚ ಭರಿಸುತ್ತದೆ. ಹೀಗಾಗಿ ರೋಗಿಗಳು ಚಿಕಿತ್ಸೆಗೆ ಮೊದಲು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಬೇಕು. ಅಲ್ಲಿ ಚಿಕಿತ್ಸೆ ಲಭ್ಯವಿಲ್ಲ ಎಂದಾದರೆ ಮಾತ್ರ ಖಾಸಗಿ ಆಸ್ಪತ್ರೆಗಳಿಗೆ ಹೋಗಬೇಕು. ಆದರೆ, ಹೃದಯಾಘಾತ, ಬ್ರೈನ್ ಹ್ಯಾಮರೇಜ್ ಮುಂತಾದ ಸಮಸ್ಯೆಗಳಿಗೆ ತುರ್ತು ಚಿಕಿತ್ಸೆ ಅಗತ್ಯವಿರುವುದರಿಂದ
ಸಮೀಪದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.