ಪ್ರಿಯಾಂಕ್ ಖರ್ಗೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ: ವೀರಯ್ಯ
Team Udayavani, Jun 29, 2019, 3:05 AM IST
ಬೆಂಗಳೂರು: “ರಾಜ್ಯದ ಎಲ್ಲ 7 ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದು, ದಲಿತ ಸಮುದಾಯ ಬಿಜೆಪಿ ಬೆಂಬಲಿಸುತ್ತಿರುವುದು ಸ್ಪಷ್ಟವಾಗುತ್ತಿದ್ದಂತೆ ರಾಜಕೀಯ ಅಭದ್ರತೆಗೆ ಒಳಗಾಗಿರುವ ಸಚಿವ ಪ್ರಿಯಾಂಕ್ ಖರ್ಗೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ’ ಎಂದು ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಡಿ.ಎಸ್.ವೀರಯ್ಯ ದೂರಿದರು.
ಬಿ.ಎಸ್.ಯಡಿಯೂರಪ್ಪ ಅವರು ದಲಿತರಲ್ಲಿ ಆತ್ಮವಿಶ್ವಾಸ ಮೂಡಿಸುವ ಪ್ರಾಮಾಣಿಕ ಕಳಕಳಿಯಿಂದ ದಲಿತರ ಮನೆಗಳಿಗೆ ಭೇಟಿ ನೀಡಿ ಉಪಾಹಾರ, ಭೋಜನ ಸೇವಿಸಿದ್ದಾರೆ. ಆದರೆ ಒಮ್ಮೆಯೂ ದಲಿತರ ಕೇರಿಗೆ ಹೋಗದ, ದಲಿತರ ಮನೆಯ ಊಟವನ್ನೇ ಸೇವಿಸದ ಪ್ರಿಯಾಂಕ್ ಖರ್ಗೆಯವರು ಯಡಿಯೂರಪ್ಪ ಅವರನ್ನು ಟೀಕಿಸುವ ಮೂಲಕ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ದಲಿತರ ಮನೆಗಳಿಗೆ ಭೇಟಿ ನೀಡಿದಾಗ ಹೋಟೆಲ್‌ನಿಂದ ಉಪಾಹಾರ, ಊಟ ತರಿಸಿ ಸೇವಿಸುತ್ತಿದ್ದರು ಎಂಬುದಾಗಿ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿರುವುದು ಅತ್ಯಂತ ಬಾಲಿಶ. ಯಡಿಯೂರಪ್ಪ ಅವರು ದಲಿತರ ಮನೆಗಳಿಗೆ ಭೇಟಿ ನೀಡಿದಾಗ ನಾನೂ ಅವರೊಂದಿಗಿದ್ದೆ. ದಲಿತರ ಕುಟುಂಬದಲ್ಲಿ ಸಿದ್ಧಪಡಿಸಿದ ಊಟವನ್ನೇ ಸೇವಿಸಿದ್ದಾರೆಯೇ ಹೊರತು ಹೋಟೆಲ್‌ನಿಂದ ತರಿಸಿದ ಆಹಾರ ಸೇವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಿಯಾಂಕ್ ಖರ್ಗೆಯವರು ಯಡಿಯೂರಪ್ಪ ಅವರ ದಲಿತ ಪರ ಕಾಳಜಿಯನ್ನು ಗುರುತಿಸಿ ಅವರ ಹಿರಿತನಕ್ಕೆ ಗೌರವ ನೀಡುವುದನ್ನು ಕಲಿಯಬೇಕು. ಬಾಲಿಶ ಹೇಳಿಕೆ ನೀಡುವ ಮೂಲಕ ದಲಿತರನ್ನು ದಾರಿ ತಪ್ಪಿಸಬಾರದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.