ಪ್ರೊ.ಬಿ.ಕೆ.ರವಿ ಬೆಂವಿವಿ ಕುಲಸಚಿವ
Team Udayavani, Apr 28, 2017, 11:46 AM IST
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ. ಬಿ.ಕೆ.ರವಿಯವರನ್ನು ವಿವಿಯ ನೂತನ ಕುಲಸಚಿವರನ್ನಾಗಿ(ಆಡಳಿತ) ನೇಮಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಪ್ರೊ. ಬಿ.ಕೆ.ರವಿಯವರು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ಪತ್ರಿಕೋದ್ಯಮದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದ ನಂತರ ಕೆಲವರ್ಷ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಸೇವಾ ಹಿರಿತನದ ಆಧಾರದಲ್ಲಿ ವಿವಿಧ ಹುದ್ದೆಯನ್ನು ಅಲಂಕರಿಸಿರುವ ಅವರು, ಸದ್ಯ ಬೆಂವಿವಿ ಸಮೂಹ ಸಂವಾಹನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಲವು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿಯೂ ದುಡಿದಿದ್ದಾರೆ ಹಾಗೂ ದುಡಿಯುತ್ತಿದ್ದಾರೆ.
ಸದ್ಯ ಬೆಂವಿವಿ ಕುಲಸಚಿವರಾಗಿರುವ ಪ್ರೊ.ಕೆ.ಎನ್.ನಿಂಗೇಗೌಡ ಅವರ ಸೇವಾವಧಿಯು ಏ.28ಕ್ಕೆ ಮುಗಿಯಲಿದ್ದು, ನಿವೃತ್ತಿ ಹೊಂದಲಿದ್ದಾರೆ. ಕುಲಸಚಿವ(ಆಡಳಿತ) ಹುದ್ದೆ ಖಾಲಿ ಬಿಡುವುದರಿಂದ ವಿವಿಗೆ ಶೈಕ್ಷಣಕವಾಗಿ ಸಮಸ್ಯೆಯಾಗಬಹುದು ಎಂಬುದನ್ನು ಅರಿತ ಸರ್ಕಾರ, ಉನ್ನತ ಶಿಕ್ಷಣ ಇಲಾಖೆ ಮೂಲಕ ಪ್ರೊ.ಬಿ.ಕೆ.ರವಿಯವರನ್ನು ಕುಲಸಚಿವ ಹುದ್ದೆಗೆ ನೇಮಿಸಿ ಆದೇಶ ಹೊರಡಿಸಿದೆ.
“ಉದಯವಾಣಿ’ಯೊಂದಿಗೆ ಮಾತನಾಡಿದ ಪ್ರೊ.ಬಿ.ಕೆ.ರವಿಯವರು, ಕುಲಸಚಿವ ಸ್ಥಾನಕ್ಕೆ ಸರ್ಕಾರ ನನ್ನನ್ನು ನೇಮಿಸಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ. ಆದರೆ, ಆದೇಶ ಪ್ರತಿ ಇನ್ನೂ ತಲುಪಿಲ್ಲ. ವಿದ್ಯಾರ್ಥಿಯಾಗಿ, ಪ್ರಾಧ್ಯಾಪಕನಾಗಿ ಅನೇಕ ವರ್ಷಗಳಿಂದ ಬೆಂವಿವಿ ಬಗ್ಗೆ ತಿಳಿದಿದ್ದೇನೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಇದು ಒಂದಾಗಿದೆ. ಸರ್ಕಾರ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ, ವಿವಿಯ ಶೈಕ್ಷಣಿಕ ಉನ್ನತಿಗೆ ಶ್ರಮಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.