ಅನ್ವೇಷಣಾ ಪ್ರವೃತ್ತಿಯಿಂದ ದೇಶದ ಪ್ರಗತಿ
Team Udayavani, Sep 9, 2018, 12:08 PM IST
ಬೆಂಗಳೂರು: ಉತ್ತಮ ಶಿಕ್ಷಕರು ಸಂಪೂರ್ಣ ಬದ್ಧತೆ ಹಾಗೂ ಅನ್ವೇಷಣಾ ಪ್ರವೃತ್ತಿ ಹೊಂದಿದ್ದರೆ ದೇಶ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯ. ಆದ್ದರಿಂದ ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರು ತೊಡಗಿಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಕರೆ ನೀಡಿದರು.
ನಗರದಲ್ಲಿ ಬೆಂಗಳೂರು ಎಜುಕೇಷನ್ ಟ್ರಸ್ಟ್ ಅವರು ಎ.ಪಿ.ಜೆ ಅಬ್ದುಲ್ ಕಲಾಂ ಅವರ ಸ್ಮರಣಾರ್ಥ ಇತೀ¤ಚೆಗೆ ಹಮ್ಮಿಕೊಂಡಿದ್ದ ‘ಗುರು ಬ್ರಹ್ಮ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವದ್ಯಾಲಯದ ಕುಲಾಧಿಪತಿ ಪ್ರೊ. ಎನ್.ಆರ್. ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಪ್ರಸಕ್ತ ಸಾಲಿನಿಂದ ಗುರುಬ್ರಹ್ಮ ಪ್ರಶಸ್ತಿಯನ್ನು ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನೀಡಲಾಗುತ್ತಿದೆ. ಅಂತಹ ಶಿಕ್ಷಕರನ್ನು ಗುರುತಿಸಿ ಸೂಕ್ತ ಗೌರವ ತೋರಿಸುವುದು ಸಮಾಜದ ಹೊಣೆ ಹಾಗೂ ಶಿಕ್ಷಕರು ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಮಾಜಿ ನಿರ್ದೇಶಕ ಪ್ರೊ. ಜೆ. ಫಿಲಿಪ್ ಅವರಿಗೆ ‘ಸಾರ್ಥಕ ಜೀವನ’ ಪ್ರಶಸ್ತಿ ಹಾಗೂ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಮಾಜಿ ಅಧ್ಯಕ್ಷ ಸಿ. ವಳ್ಳಿಯಪ್ಪ ಅವರಿಗೆ ‘ಉದ್ಯಮ ಆಚಾರ್ಯ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.