ಮೌಡ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ಪ್ರಗತಿಪರ ಸ್ವಾಮೀಜಿಗಳ ಆಗ್ರಹ
Team Udayavani, May 17, 2017, 11:27 AM IST
ಬೆಂಗಳೂರು: ಮೌಡ್ಯ ಪ್ರತಿಬಂಧಕ ಕಾಯ್ದೆಯನ್ನು ತ್ವರಿತವಾಗಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ನೇತೃತ್ವದಲ್ಲಿ 51 ಸ್ವಾಮೀಜಿಗಳನ್ನು ಒಳಗೊಂಡ ಪ್ರಗತಿಪರ ಮಠಾಧೀಶರ ವೇದಿಕೆ ನಿಯೋಗ ಮಂಗಳವಾರ ಮುಖ್ಯಮಂತ್ರಿಗೆ ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಬುಧವಾರ ನಡೆಯುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗು ವುದು ಎಂದು ಭರವಸೆ ನೀಡಿದರು.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಪ್ರತಿಕ್ರಿಯಿಸಿದ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ, “ರಾಜ್ಯದಲ್ಲಿ ಮೌಡ್ಯಪ್ರತಿಬಂಧಕ ಕಾಯ್ದೆ ಜಾರಿಯಲ್ಲಿ ವಿಳಂಬವಾಗುತ್ತಿದೆ. ಬಹುಜನರ ಹಿತಕ್ಕಾಗಿ ಹಾಗೂ ಸಾಮಾನ್ಯ ಜನರನ್ನು ಶೋಷಣೆಯಿಂದ ವಿಮೋಚನೆಗೊಳಿಸಲು ಈ ಕಾನೂನಿನ ಅಗತ್ಯವಿದೆ ಎಂದು ಹೇಳಿದರು.
ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಾಯ್ದೆ ಜಾರಿಗೆ ನಾನು ಬದ್ಧನಾಗಿದ್ದೇನೆ. ಮೌಢಾÂ ಚರಣೆ ಬಗ್ಗೆ ನನಗೆ ನಂಬಿಕೆಯಿಲ್ಲ.ಮೌಢಾÂಚರಣೆಗಳಿಂದ ಸಾಮಾನ್ಯ ಜನರ ಶೋಷಣೆಯಾಗುತ್ತಿದ್ದು, ಇದನ್ನು ತಪ್ಪಿಸ ಬೇಕಿದೆ. ಇಂತಹ ಕಾಯ್ದೆಗಳಿಗೆ ಸಹಜವಾಗಿ ಅಭಿಪ್ರಾಯ ಭೇದ ವ್ಯಕ್ತವಾಗಲಿದ್ದು, ಎಲ್ಲರೂ ತಮ್ಮ ಅಭಿಪ್ರಾಯ ಹೇಳಿದ್ದಾರೆ ಎಂದರು.
ವಿವಾದಿತ ಅಂಶಗಳಿಲ್ಲ: ವಿವಾದಕ್ಕೆ ಕಾರಣವಾದ ಅಂಶಗಳನ್ನು ತೆಗೆಯಲಾಗಿದೆ. ಕಾಯ್ದೆಯಲ್ಲಿ ಯಾವುದೇ ಧರ್ಮದ ಪ್ರಶ್ನೆ ಬಂದಿಲ್ಲ. ವಿವಾದಕ್ಕೆ ಆಸ್ಪದವಾದ ಯಾವ ಅಂಶವೂ ಇಲ್ಲ. ಸರ್ಕಾರ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿ ಅಭಿಪ್ರಾಯ ಸಂಗ್ರಹಿಸಲಿ. ಒಟ್ಟಾರೆ ಕಾಯ್ದೆ ಜಾರಿಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.