ಬಡ್ತಿ ಮೀಸಲು ವಿಧೇಯಕ: ಎಜೆ ಸಲಹೆಗೆ ತೀರ್ಮಾನ

Team Udayavani, Dec 8, 2017, 7:30 AM IST

Siddaramaiah-CM-Big.jpg

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಹಿತ ಕಾಯಲು ವಿಧಾನಮಂಡಲದಲ್ಲಿ ಒಪ್ಪಿಗೆ ಪಡೆದಿದ್ದ
ಬಡ್ತಿ ಮೀಸಲು ವಿಧೇಯಕ ರಾಷ್ಟ್ರಪತಿಯವರಿಗೆ ಕಳುಹಿಸಲು ರಾಜ್ಯಪಾಲರು ಸೂಚಿಸಿರುವ ಹಿನ್ನೆಲೆಯಲ್ಲಿ ಅಡ್ವೋಕೇಟ್‌ ಜನರಲ್‌ ಸಲಹೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ.

ಜತೆಗೆ ರಾಷ್ಟ್ರಪತಿ ಹಾಗೂ ಸುಪ್ರೀಂಕೊರ್ಟ್‌ಗೆ ವಿಧೇಯಕ ತಂದಿರುವ ಪ್ರಮೇಯ ವಿವರಿಸಿ ಮನವೊಲಿಕೆ ಮಾಡುವ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯಲು ತೀರ್ಮಾನಿಸಿದೆ.

ರಾಜ್ಯಪಾಲರ ಸೂಚನೆ ಮೇರೆಗೆ ಗುರುವಾರ ಬಡ್ತಿ ಮೀಸಲಾತಿ ವಿಧೇಯಕವನ್ನು ರಾಷ್ಟ್ರಪತಿಯವರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯಿಂದ ರವಾನಿಸಲಾಗಿದೆ. ಜ.14ರಂದು ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದ್ದು ರಾಷ್ಟ್ರಪತಿಯವರ ಬಳಿ ವಿಧೇಯಕ ಇದ್ದಲ್ಲಿ ನ್ಯಾಯಾಂಗ ನಿಂದನೆ ತೂಗುಕತ್ತಿಯಿಂದ ಪಾರಾಗಬಹುದೆಂದು ಹೇಳಲಾಗಿದೆ.

ಈ ಮಧ್ಯೆ, ಸುಪ್ರೀಂಕೋರ್ಟ್‌ ಮುಂದಿನ ವಿಚಾರಣೆಯಲ್ಲಿ ರಾಜ್ಯ ಸರ್ಕಾರದ ಕ್ರಮ ಪುರಸ್ಕರಿಸದಿದ್ದರೆ ಜೇಷ್ಠತಾ ಪಟ್ಟಿ ಅನುಸಾರ ಬಡ್ತಿಯಿಂದ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕಲ್ಪಿಸುವುದು ಅನಿವಾರ್ಯವಾಗಲಿದೆ. ಅಂತಿಮ ಯತ್ನವಾಗಿ ರಾಷ್ಟ್ರಪತಿ ಹಾಗೂ ಸುಪ್ರೀಂಕೋರ್ಟ್‌ಗೆ ರಾಜ್ಯ ಸರ್ಕಾರ ವಿಧೇಯಕದ ಅನಿವಾರ್ಯತೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಲಿದೆ ಎನ್ನಲಾಗಿದೆ.

ಸುಪ್ರೀಂಕೋರ್ಟ್‌ ತೀರ್ಪಿಗೆ ವಿರುದಟಛಿವಾಗಿ ವಿಧೇಯಕ ತಂದಿರುವುದರಿಂದ ಅದಕ್ಕೆ ಅಂಗೀಕಾರ ನೀಡಿದರೆ ಸಂವಿಧಾನ ಬಿಕ್ಕಟ್ಟು ಎದುರಾಗಬಹುದೆಂಬ ಆತಂಕವನ್ನೂ ರಾಜ್ಯಪಾಲರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ರಾಜ್ಯಪಾಲರು ವಿಧೇಯಕ ತಿರಸ್ಕರಿಸಿಲ್ಲ, ಬದಲಿಗೆ ರಾಷ್ಟ್ರಪತಿಯವರಿಗೆ ಕಳುಹಿಸಿ ಎಂಬ ಸಲಹೆ ನೀಡಿದ್ದಾರೆ. ಅದರನ್ವಯ ಕಳುಹಿಸಲಾಗಿದೆ. ರಾಷ್ಟ್ರಪತಿ ಹಾಗೂ ಸುಪ್ರೀಂಕೋರ್ಟ್‌ಗೆ ಈ ಬಗ್ಗೆ ಮನವರಿಕೆ ಮಾಡಿಕೊಡಲು ಯತ್ನಿಸಲಾಗುವುದು ಎಂದು ಹೇಳಿದರು.

ಈಗಾಗಲೇ ಶೇ.80ರಷ್ಟು ಎಲ್ಲ ಇಲಾಖೆಗಳಲ್ಲಿ ಜೇಷ್ಠತಾ ಪಟ್ಟಿ ಸಿದಟಛಿಪಡಿಸಲಾಗಿದೆ. ನ್ಯಾಯಾಲಯ ಕೊಟ್ಟಿರುವ ಕಾಲಾವಕಾಶ ಇನ್ನೂ ಇರುವುದರಿಂದ ಅಷ್ಟರಲ್ಲಿ ಅಂತಿಮ ಪಟ್ಟಿ ಸಿದಟಛಿಗೊಳ್ಳಲಿದೆ. ನಂತರ ನ್ಯಾಯಾಲಯದ ತೀರ್ಪು ಏನು ಎಂಬುದು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪರಿಶಿಷ್ಟರಿಗೆ ಮುಂಬಡ್ತಿ ಸಂಬಂಧದ ಹೊಸ ವಿಧೇಯಕಕ್ಕೆ ಬೆಳಗಾವಿ ಅಧಿ ವೇಶನದಲ್ಲಿ ಅಂಗೀಕಾರ ಪಡೆಯಲಾಗಿದೆ. ಈ ಸಂಬಂಧ ಅಂಕಿತಕ್ಕಾಗಿ ರಾಷ್ಟ್ರಪತಿಗಳ ಬಳಿ ಹೋಗಿದೆ.ವಿಧೇಯಕವನ್ನು ಗೌರ್ನರ್‌ ರಾಷ್ಟ್ರಪತಿ ಅವರಿಗೆ ಕಳುಹಿಸಿದ್ದಾರೆ. ರಾಷ್ಟ್ರಪತಿಗಳ ಜತೆ ಈ ಸಂಬಂಧ ಚರ್ಚಿಸುವೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.