ರಾಘವೇಶ್ವರ ಶ್ರೀ ವಿರುದ್ಧದಪ್ರಕರಣ: ಅರ್ಜಿ ವಜಾ
Team Udayavani, Sep 27, 2018, 11:57 AM IST
ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಆರೋಪ ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಪ್ರಕರಣದಲ್ಲಿ ವಾದ ಮಂಡಿಸಲು ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್. ಪೊನ್ನಣ್ಣ ಅವರನ್ನು ಎಸ್‌ಪಿಪಿಯಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.
ಹೀಗಾಗಿ, ಪೊನ್ನಣ್ಣ ಅವರು ಪ್ರಕರಣದಲ್ಲಿ ವಾದ ಮಂಡನೆ ಮಾಡಬಾರದು ಎಂದು ಸ್ವಾಮೀಜಿ ಪರ ವಕೀಲರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾ. ಆರ್.ಬಿ. ಬೂದಿಹಾಳ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಜಾಗೊಳಿಸಿತು. ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಸರ್ಕಾರ ಅಥವಾ ಪ್ರಾಸಿಕ್ಯೂಷನ್‌ನ್ನು ಪ್ರತಿನಿಧಿಸಬೇಕಾದರೆ ಅವರು ಎಸ್‌ಪಿಪಿ ಆಗಿರಬೇಕು ಇಲ್ಲವೇ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಕಗೊಂಡಿರ ಬೇಕು. ಆದರೆ, ಸಂವಿಧಾನದಲ್ಲಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಹುದ್ದೆ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಹೀಗಾಗಿ ಈ ಮೇಲ್ಮನವಿ ಪ್ರಕರಣದಲ್ಲಿ ಎ.ಎಸ್. ಪೊನ್ನಣ್ಣ ಅವರು ವಾದ ಮಂಡಿಸುವಂತಿಲ್ಲ ಅನ್ನುವುದು ಮಠದ ಪರ ವಕೀಲರ ವಾದವಾಗಿತ್ತು.
ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯ 2016ರ ಮಾ.31 ರಂದು ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಆರೋಪವನ್ನು ಕೈ ಬಿಟ್ಟಿತ್ತು. ಅದನ್ನು ಪ್ರಶ್ನಿಸಿ ಸರ್ಕಾರ, ಸಂತ್ರಸ್ತೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.