ಡೆಂಘೀ ತಡೆಗೆ ಸಂಪರ್ಕ ಕಾರ್ಯಕರ್ತರು
ನಗರದಲ್ಲಿ ಡೆಂಘೀ ಪ್ರಕರಣಗಳ ಹೆಚ್ಚಳ ಒಪ್ಪಿಕೊಂಡ ಬಿಬಿಎಂಪಿ ಆರೋಗ್ಯಾಧಿಕಾರಿ
Team Udayavani, Jul 5, 2019, 7:56 AM IST
ಕೆ.ಆರ್.ಮಾರುಕಟ್ಟೆ ಸಮೀಪದ ವಸತಿ ಪ್ರದೇಶದಲ್ಲಿ ರಸ್ತೆ ಮೇಲೆ ಹರಿಯುತ್ತಿರುವ ಚರಂಡಿ ನೀರು.
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣಕ್ಕಾಗಿ ವಾರ್ಡ್ ಮಟ್ಟದಲ್ಲಿ ಇಬ್ಬರು ಸಂಪರ್ಕ ಕಾರ್ಯಕರ್ತರನ್ನು ನಿಯೋಜಿ ಸಲಾಗುತ್ತಿದೆ.
ಕಳೆದ ಒಂದು ತಿಂಗಳಲ್ಲಿ ಬಿಬಿಎಂಪಿ ವ್ಯಾಪ್ತಿ ಯಲ್ಲಿ ಡೆಂಘೀ ಪ್ರಕರಣಗಳು ಮೂರುಪಟ್ಟು ಹೆಚ್ಚಳವಾಗಿದ್ದು, 1,830 ಪ್ರಕರಣಗಳು ದೃಢಪ ಟ್ಟಿವೆ. ಹೀಗಾಗಿ ಡೆಂಘೀ ನಿಯಂತ್ರಣ ಅನಿವಾರ್ಯ ವಾಗಿದ್ದು, ಜನರದಲ್ಲಿ ಜಾಗೃತಿ ಮೂಡಿಸಲು, ಸೊಳ್ಳೆಗಳು ಹೆಚ್ಚಳವಾಗದಂತೆ ವಾರ್ಡ್ ಮಟ್ಟದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ವಾರ್ಡ್‌ಗೆ ಇಬ್ಬರು ಸಂಪರ್ಕ ಕಾರ್ಯಕರ್ತರ ನಿಯೋಜಿಸಲು ತೀರ್ಮಾನಿಸಲಾಗಿದೆ.
ಸಂಪರ್ಕ ಕಾರ್ಯಕರ್ತರು ಮನೆಗಳಿಗೆ ತೆರಳಿ ಜನರಲ್ಲಿ ತೆರೆದ ತೊಟ್ಟಿಯಲ್ಲಿ ನೀರು ಸಂಗ್ರಹಿಸದಂತೆ, ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಹಾಗೂ ಸೊಳ್ಳೆಗಳ ಹೆಚ್ಚಳಕ್ಕೆ ಕಾರಣಗಳನ್ನು ತಿಳಿಸಿ ಜಾಗೃತಿ ಮೂಡಿಸಲಿದ್ದಾರೆ. ಜತೆಗೆ ವಾರ್ಡ್‌ನಲ್ಲಿನ ಡೆಂಘೀ ಶಂಕಿತರು, ಅವರ ಚಿಕಿತ್ಸೆ ಕುರಿತು ಮಾಹಿತಿ ನೀಡಲು ಸೂಚಿಸಿದ್ದು, ಇದಕ್ಕಾಗಿ ವಾಟ್ಸ್‌ಆ್ಯಪ್ ಗ್ರೂಪ್ ಮಾಡಿ ಬಿಬಿಎಂಪಿ ಆರೋಗ್ಯ ವಿಭಾಗ ಅಧಿಕಾರಿಗಳಿಗೆ ನಿತ್ಯ ಮಾಹಿತಿ ರವಾನೆ ಮಾಡಲಿದ್ದಾರೆ.
ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತರ ಉಪಸ್ಥಿತಿಯಲ್ಲಿ ಶುಕ್ರವಾರ ಬಿಬಿಎಂಪಿ ಆರೋಗ್ಯ ವಿಭಾಗದಿಂದ ಅಧಿಕಾರಿಗಳ ಸಭೆ ಕರೆಯಲಾಗಿದೆ. ಈ ವೇಳೆ ಸಂಪರ್ಕ ಕಾರ್ಯಕರ್ತರ ನಿಯೋಜನೆ, ಮುಂದಿನ ದಿನಗಳಲ್ಲಿ ನಡೆಸಬೇಕಾದ ಜಾಗೃತಿ ಸಭೆಗಳು, ನಗರದ ಸ್ವಚ್ಛತೆ, ಸೊಳ್ಳೆ ನಿಯಂತ್ರಣಕ್ಕೆ ಫಾಗಿಂಗ್, ಶಂಕಿತರ ತಪಾಸಣೆ ಕುರಿತು ಚರ್ಚಿಸ ಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಸಹಯೋಗದೊಂದಿಗೆ ಕಾರ್ಯನಿರ್ವಹಿಸಲು ಸೂಚನೆ: ಬೆಂಗಳೂರಿನ 198 ವಾರ್ಡ್‌ಗಳ ಪೈಕಿ 135 ವಾರ್ಡ್ ಬಿಬಿಎಂಪಿ ಆರೋಗ್ಯ ವಿಭಾಗದ ವ್ಯಾಪ್ತಿಗೆ ಹಾಗೂ 63 ವಾರ್ಡ್ ಜಿಲ್ಲಾ ಆರೋಗ್ಯ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಈ ಎರಡೂ ಇಲಾ ಖೆಗಳ ಸಹಯೋಗದೊಂದಿಗೆ ಡೆಂಘೀ ನಿಯಂ ತ್ರಣಕ್ಕೆ ಮುಂದಾಗಬೇಕು ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಇತ್ತೀಚೆಗೆ ನಡೆದ ಸಭೆಯಲ್ಲಿ ತಿಳಿಸಿದ್ದಾರೆ. ಜತೆಗೆ ಬಿಬಿಎಂಪಿ ಎಂಟು ವಲಯಗಳನ್ನು ಎರಡೂ ಇಲಾಖೆಗಳಿಗೂ ವಿಭಾಗಿಸಿ ಡೆಂಘೀ ಹತೋಟಿಗೆ ಸೂಚಿಸಿದ್ದಾರೆ.
ನೀರಿನ ಸಮಸ್ಯೆ ಕಾರಣ: ನಗರದಲ್ಲಿ ಕೆಲವೆಡೆ ನೀರಿನ ಸಮಸ್ಯೆ ಇದ್ದು, ಸಾರ್ವಜನಿಕರು ತಮ್ಮ ಮನೆಗಳಲ್ಲಿ ಅಗತ್ಯ ಪ್ರಮಾಣದ ನೀರು ಶೇಖರಿಸುತ್ತಿದ್ದಾರೆ. ಈ ವೇಳೆ ನೀರು ಸಂಗ್ರಹಿಸದಂತೆ ಪಾಲಿಕೆ ಅಧಿಕಾರಿಗಳು ಹೇಳಿದರೆ ಸಾರ್ವಜನಿಕರು, ‘ಮುಂದೆ ನಮಗೆ ನೀರಿಗೆ ಸಮಸ್ಯೆಯಾಗುತ್ತದೆ ಎಂದು ಜನ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ಶೇಖರಿಸುವ ನೀರನ್ನು ಒಂದು ಬಟ್ಟೆಯಿಂದ ಮುಚ್ಚಲು ಸೂಚಿಸಲಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೈಕ್‌ಗಳ ಮಧ್ಯೆ ಡಿಕ್ಕಿ: ಸವಾರ 3 ಪಲ್ಟಿ ಹೊಡೆದರೂ ಪಾರು
Metro Rail: ಮೆಟ್ರೋ ಹಳಿಗೆ ಜಿಗಿದ ಏರ್‌ಫೋರ್ಸ್ ನಿವೃತ ಅಧಿಕಾರಿ
Bengaluru: ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾ*ಚಾರ!
Arrested: ಪತ್ನಿ, ಅತ್ತೆ ಮೇಲೆ ಹಲ್ಲೆ; ಆರೋಪಿ ಬಂಧನ
Bengaluru: ಟೆಕಿಯ 1 ತಿಂಗಳು ಡಿಜಿಟಲ್ ಅರೆಸ್ಟ್ ಮಾಡಿ 11.8 ಕೋಟಿ ರೂ. ವಂಚಿಸಿದ ಮೂವರ ಸೆರೆ