ವಿದ್ಯುತ್ ದರ ಪರಿಷ್ಕರಣೆಗೆ ಪ್ರಸ್ತಾವ ಸಲ್ಲಿಕೆ
Team Udayavani, Dec 10, 2017, 6:15 AM IST
ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಮಾಡುವಂತೆ ರಾಜ್ಯದ 5 ವಿದ್ಯುತ್ ವಿತರಣಾ ಕಂಪನಿಗಳು (ಎಸ್ಕಾಂ) ರಾಜ್ಯ
ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಇತ್ತೀಚೆಗೆ ಪ್ರಸ್ತಾವ ಸಲ್ಲಿಸಿದ್ದು, ಶೀಘ್ರವೇ ದರ ಪರಿಷ್ಕರಣೆ ಮಾಡುವಂತೆ ಮನವಿ ಮಾಡಿವೆ. ಆದರೆ ಕೆಇಆರ್‌ಸಿಯು 90 ದಿನಗಳಲ್ಲಿ ನಿಯಮಾನುಸಾರ ಪ್ರಕ್ರಿಯೆ ಪೂರ್ಣಗೊಳಿಸಿ ಮುಂದಿನ ಏಪ್ರಿಲ್ 1ರಿಂದ ದರ ಪರಿಷ್ಕರಣೆ ಅನುಷ್ಠಾನಗೊಳಿಸಲು ನಿರ್ಧರಿಸಿದೆ. ಪ್ರತಿ ನವೆಂಬರ್‌ನಲ್ಲಿ ಎಲ್ಲ ಎಸ್ಕಾಂಗಳು ದರ ಪರಿಷ್ಕರಣೆಗೆ ಪ್ರಸ್ತಾವ ಸಲ್ಲಿಸುತ್ತವೆ. ವಿದ್ಯುತ್ ವಿತರಣೆ ಪ್ರಕ್ರಿಯೆಯಲ್ಲಿನ ವೆಚ್ಚಕ್ಕೆ ಅನುಗುಣವಾಗಿ ಆದಾಯ ಹೊಂದಾಣಿಕೆಗಾಗಿ ದರ ಪರಿಷ್ಕರಣೆಗೆ ಮನವಿ ಸಲ್ಲಿಸುತ್ತವೆ. ಅದರಂತೆ ನ.30ರೊಳಗೆ ಎಲ್ಲ ಎಸ್ಕಾಂಗಳು ಪ್ರಸ್ತಾವ ಸಲ್ಲಿಸಿವೆ.
ಬೆಸ್ಕಾಂ ಪ್ರತಿ ಯೂನಿಟ್‌ಗೆ 1.45 ರೂ., ಸೆಸ್ಕ್ 1.65 ರೂ.,ಮೆಸ್ಕಾಂ 1.08 ರೂ., ಜೆಸ್ಕಾಂ 1.36 ರೂ. ಹಾಗೂ ಹೆಸ್ಕಾಂ 1.23 ರೂ. ದರ ಹೆಚ್ಚಳಕ್ಕೆ ಪ್ರಸ್ತಾವ ಸಲ್ಲಿಸಿವೆ. ಪರಿಷ್ಕೃತ ದರಗಳನ್ನು ಏಪ್ರಿಲ್ 1ಕ್ಕೆ ಬದಲಾಗಿ ಮುಂಚಿತವಾಗಿ ಜಾರಿಗೊಳಿಸಲು ಅವಕಾಶ ನೀಡುವಂತೆಯೂ ಮನವಿ ಮಾಡಿವೆ ಎಂದು ಮೂಲಗಳು ತಿಳಿಸಿವೆ. ಪ್ರತಿ ವರ್ಷದಂತೆ ಈ ಬಾರಿಯೂ ಎಲ್ಲ ಎಸ್ಕಾಂಗಳು ದರ ಪರಿಷ್ಕರಣೆಗೆ ಪ್ರಸ್ತಾವ ಸಲ್ಲಿಸಿವೆ. ದರ ಏರಿಕೆ ಪ್ರಸ್ತಾವ ಹಾಗೂ ಅದಕ್ಕೆ ನೀಡಿರುವ ಕಾರಣಗಳು, ವಸ್ತುಸ್ಥಿತಿಯನ್ನು ಅವಲೋಕಿಸಲಾಗುವುದು.
ಜತೆಗೆ ಸಾರ್ವಜನಿಕ ಆಕ್ಷೇಪಣೆಗಳನ್ನು ಸ್ವೀಕರಿಸಿ ನಿಯಮಾನುಸಾರ ಎಲ್ಲ ಪ್ರಕ್ರಿಯೆ ನಡೆಸಿ ಏ.1ರಿಂದ ದರ
ಪರಿಷ್ಕರಣೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೆಇಆರ್‌ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.