Prostitution: ಸ್ಪಾನಲ್ಲಿ ವೇಶ್ಯಾವಾಟಿಕೆ; ಸ್ಥಳೀಯ ಮಹಿಳೆಯರಿಂದಲೂ ದಂಧೆ!
Team Udayavani, Jan 15, 2024, 11:11 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೆ.ಆರ್.ಪುರದಲ್ಲಿರುವ ನಿರ್ವಾಣ ಸ್ಪಾ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಮಾರತಹಳ್ಳಿ ಉಪವಿಭಾಗದ ಎಸಿಪಿ ಪ್ರಿಯದರ್ಶಿನಿ ನೇತೃತ್ವದ ತಂಡ, ಆರೋಪಿ ಅನಿಲ್ ರೆಡ್ಡಿ ವಿದೇಶಿಯರು, ನೆರೆ ರಾಜ್ಯದವರು ಮಾತ್ರವಲ್ಲದೆ, ಸ್ಥಳೀಯ ಮಹಿಳೆಯರಿಂದಲೂ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಪತ್ತೆ ಹಚ್ಚಿದೆ.
ಈ ಹಿನ್ನೆಲೆಯಲ್ಲಿ ಸ್ಪಾ ಮಾಲೀಕ ಮತ್ತು ಮಹಿಳೆಯರ ನಡುವಿನ ಮಧ್ಯವರ್ತಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದೆ. ಪ್ರಕರಣದಲ್ಲಿ ಸ್ಪಾನಲ್ಲಿದ್ದ 23 ಜನ ಕೆಲಸಗಾರರನ್ನು ಸಾಕ್ಷಿಗಳಾಗಿ ಪರಿಗಣಿಸಿರುವ ಪೊಲೀಸರು, ಈಗಾಗಲೇ ಹಲವು ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ, ಮಾಲೀಕ ಹಾಗೂ ಪ್ರಮುಖ ಆರೋಪಿಯಾಗಿರುವ ಅನಿಲ್ ರೆಡ್ಡಿ, ವಿಚಾರಣೆ ವೇಳೆ ಮಧ್ಯ ವರ್ತಿಗಳ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಆದ್ದರಿಂದ ದಾಳಿ ಸಂದರ್ಭದಲ್ಲಿ ರಕ್ಷಿಸಲ್ಪಟ್ಟ 44 ಜನ ಮಹಿಳೆಯರ ವಿಚಾರಣೆಯನ್ನು ಪೊಲೀಸರು ಮತ್ತೂಮ್ಮೆ ಆರಂಭಿಸಿದ್ದಾರೆ. ಅಲ್ಲದೆ, ದಾಳಿ ವೇಳೆ ಸಿಕ್ಕ 47 ಜನ ಗ್ರಾಹಕರಿಗೂ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.
ಏನಿದು ಪ್ರಕರಣ?: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನಿರ್ವಾಣ ಸ್ಪಾ ಮೇಲೆ ಜ.6ರ ರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಸುಮಾರು 4 ಗಂಟೆಗಳ ಕಾಲ ಪರಿಶೀಲನೆ ನಡೆಸಿ ವಿದೇಶ, ಹೊರ ರಾಜ್ಯ, ರಾಜ್ಯಗಳ ಒಟ್ಟು 44 ಮಹಿಳೆಯರ ರಕ್ಷಣೆ ಮಾಡಲಾಗಿತ್ತು. ಪ್ರಮುಖ ಆರೋಪಿ ಅನಿಲ್‌ರೆಡ್ಡಿ ಸಹಿತ 34 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಸಂಬಂಧ ಮಹಾದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.