Prostitution: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ
Team Udayavani, Feb 26, 2024, 12:35 PM IST
ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇರೆಗೆ ಸ್ಪಾ ಮೇಲೆ ದಾಳಿ ಮಾಡಿರುವ ಯಲಹಂಕ ಉಪನಗರ ಠಾಣೆ ಪೊಲೀಸರು, ಒಬ್ಬನನ್ನು ಬಂಧಿಸಿ, 7 ಮಂದಿ ವಿದೇಶಿ ಮಹಿಳೆಯರನ್ನು ರಕ್ಷಿಸಿದ್ದಾರೆ.
ಯಲಹಂಕ ಉಪನಗರದ ಬಿ ಸೆಕ್ಟರ್‌ನ ರೋರಾ ಲಕ್ಸುರಿ ಥಾಯಿ ಹೆಸರಿನ ಸ್ಪಾದ ಮ್ಯಾನೇಜರ್ ಕಿಶೋರ್ ಎಂಬಾತನನ್ನು ಬಂಧಿಸಲಾಗಿದೆ. ಸ್ಪಾದ ಮಾಲೀಕ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಶೋಧ ಮುಂದುವರಿಸಲಾಗಿದೆ. ಸ್ಪಾದಲ್ಲಿ ಅನಧಿಕೃತವಾಗಿ ವಿದೇಶಿ ಮಹಿಳೆಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ದಾಳಿ ನಡೆಸಿ ಏಳು ಮಹಿಳೆಯರನ್ನು ರಕ್ಷಿಸಲಾಗಿದೆ.
ಆರೋಪಿಗಳು ಥಾಯ್ಲಂಡ್ ಮೂಲದ ಮಹಿಳೆಯರನ್ನು ಪ್ರವಾಸಿ ವೀಸಾ, ಬಿಜಿನೆಸ್ ವೀಸಾದಡಿ ನಗರಕ್ಕೆ ಕರೆಸಿಕೊಳ್ಳುತ್ತಿದ್ದರು. ಬಳಿಕ ಹಣದಾಸೆ ತೋರಿಸಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿದ್ದರು. ಸ್ಪಾದಲ್ಲಿ ಬಾಡಿ ಮಸಾಜ್, ಕ್ರಾಸ್ ಮಸಾಜ್, ಹ್ಯಾಪಿ ಎಂಡಿಂಗ್, ಬಾಡಿ ಟೂ ಬಾಡಿ ಮಸಾಜ್ ಸೇವೆಯ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಸಂಬಂಧ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.