ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ
Team Udayavani, Jun 23, 2017, 12:17 PM IST
ಬೆಂಗಳೂರು: ಬಾಡಿ ಮಸಾಜ್ ಸೆಂಟರ್ ಹೆಸರಿನಲ್ಲಿ ಹೊರ ರಾಜ್ಯದ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗುಂಡ್ಲುಪೇಟೆ ಮೂಲದ ಶಿವಮಲ್ಲಪ್ಪ, ದತ್ತಾತ್ರೇಯ ನಗರದ ಹರೀಶ್ ಎಂಬುವವರನ್ನು ಬಂಧಿಸಲಾಗಿದ್ದು, ತಲೆ ಮರೆಸಿಕೊಂಡಿರುವ ಮತ್ತೋರ್ವ ಆರೋಪಿ ಅಂಕಲ್ ಕುಮಾರ್ ಬಂಧನಕ್ಕೆ ಬಲೆ ಬೀಸಲಾಗಿದೆ.
ಕಮ್ಮನಹಳ್ಳಿ ಮುಖ್ಯರಸ್ತೆ ರಾಮಯ್ಯ ಲೇಔಟ್ ಬಳಿ ಮನೆಯೊಂದರಲ್ಲಿ ” ಸಪ್ರೂನ್ ಸಲೂನ್ ಅಂಡ್ ಥೈ ಮಸಾಜ್’ ಸೆಂಟರ್ ನಡೆಸುತ್ತಿದ್ದ ಆರೋಪಿಗಳು, ಮಸಾಜ್ ಮಾಡಿಸಿಕೊಳ್ಳಲು ಬರುತ್ತಿದ್ದ ಗ್ರಾಹಕರನ್ನು ಬಾಡಿ ಟು ಬಾಡಿ ಮಸಾಜ್, ಹ್ಯಾಪಿ ಎಂಡಿಂಗ್ ಹೆಸರಿನಲ್ಲಿ ಕೆಲಸ ಮಾಡುವ ಯುವತಿಯರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಪ್ರೇರೇಪಿಸುತ್ತಿದ್ದರು
ಈ ಬಗ್ಗೆ ಮಾಹಿತಿ ಅಧರಿಸಿ ದಾಳಿ ನಡೆಸಲಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಲಾಗಿದೆ. ಜೊತೆಗೆ ಆರೋಪಿಗಳಿಂದ 3 ಸಾವಿರ ರೂ ನಗದು,3 ಮೊಬೈಲ್, ಒಂದು ಸ್ಪೈಪಿಂಗ್ ಮಷಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು. ಈ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.