Bengaluru: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ; ಓರ್ವಸೆರೆ, ಇಬ್ಬರು ಮಹಿಳೆಯರ ರಕ್ಷಣೆ
Team Udayavani, Jun 1, 2024, 10:54 AM IST
ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇರೆಗೆ ಸ್ಪಾ ಮೇಲೆ ದಾಳಿ ನಡೆಸಿರುವ ಇಂದಿರಾನಗರ ಠಾಣೆ ಪೊಲೀಸರು ಒಬ್ಬನನ್ನು ಬಂಧಿಸಿ, ನೆರೆ ರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಸ್ಪಾ ಮ್ಯಾನೇಜರ್ ಮಣಿ ಬಂಧಿತ ಆರೋಪಿ.
ಠಾಣಾ ವ್ಯಾಪ್ತಿಯಲ್ಲಿರುವ ದೊಮ್ಮಲೂರು 2ನೇ ಹಂತದಲ್ಲಿರುವ ಸ್ಪಾವೊಂದರಲ್ಲಿ ಹೊರ ರಾಜ್ಯದ ಮಹಿಳೆಯರನ್ನು ಬಳಸಿಕೊಂಡು ಅಕ್ರಮ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಮೇರೆಗೆ ಮೇ 29 ರಂದು ದಾಳಿ ನಡೆಸಿದ ಪೊಲೀಸರು ಸ್ಪಾ ಮ್ಯಾನೇಜರ್ ಅನ್ನು ಬಂಧಿಸಿ ಉತ್ತರ ಪ್ರದೇಶ ಮತ್ತು ನಾಗಲ್ಯಾಂಡ್ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಸ್ಪಾ ಮ್ಯಾನೇಜರ್ನನ್ನು ವಿಚಾರಣೆಗೆ ಒಳಪಡಿಸಿದಾಗ ಸ್ಪಾನಲ್ಲಿ ಕ್ರಾಸ್ ಮಸಾಜ್, ಬಾಡಿ ಟು ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾಗಿ ತಿಳಿಸಿದ್ದಾನೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.