ಗಾಯಗೊಂಡವರ ಜೀವ ರಕ್ಷಿಸಿ
Team Udayavani, Mar 21, 2019, 7:18 AM IST
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುವಿಗೆ ಖಾಸಗಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಮಾಡದೆ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸ ಬೇಕು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಮನವಿ ಮಾಡಿದರು.
ನಗರ ಸಂಚಾರ ಪೊಲೀಸ್ ವಿಭಾಗ ಮತ್ತು ಸಾಗರ್ ಆಸ್ಪತ್ರೆ ಸಹಭಾಗಿತ್ವದಲ್ಲಿ ಬುಧವಾರ ನಗರದ ಸಂಚಾರ ನಿರ್ವಾಹಣ ಕೇಂದ್ರದಲ್ಲಿ ಆಯೋಜಿಸಿದ್ದ ‘ ವಿಶ್ವ ತಲೆ ಗಾಯ ದಿನ (ಹೆಡ್ ಇಂಜುರಿ ಡೇ) ಕಾರ್ಯಕ್ರಮದಲ್ಲಿ ಮಾತನಾಡಿದರು.
ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಕೆಲ ಆಸ್ಪತ್ರೆ ಸಿಬ್ಬಂದಿ ಪ್ರಥಮ ಚಿಕಿತ್ಸೆ ನೀಡದೆ, ಅನಗತ್ಯ ಪ್ರಶ್ನೆಗಳನ್ನು ಕೇಳುತ್ತ ನಿರ್ಲಕ್ಷ್ಯ ಮಾಡುತ್ತಿರುವ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಹೀಗಾಗಿ ಖಾಸಗಿ ಆಸ್ಪತ್ರೆ ಸಿಬ್ಬಂದಿ ಮೊದಲು ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಪ್ರದರ್ಶಿಸಬೇಕು ಎಂದರು.
ಈ ನಿಟ್ಟಿನಲ್ಲಿ ನಗರದ ಎಲ್ಲ ಖಾಸಗಿ ಆಸ್ಪತ್ರೆಗಳ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಮತ್ತು ಆ್ಯಂಬುಲೆನ್ಸ್ ನಿರ್ವಾಹಣ
ಸಂಸ್ಥೆಗಳ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರ ನಡುವೆ ಆಪ್ತ ಸಮಾಲೋಚನಾ ಸಭೆಯನ್ನು ಸದ್ಯದಲ್ಲೇ ಆಯೋಜಿಸಲಾಗುವುದು ಎಂದು ಹೇಳಿದರು.
ಸುರಕ್ಷತಾ ನಿಯಮಗಳನ್ನು ಅನುಸರಿಸದೆ ದೇಶದಲ್ಲಿ ಲಕ್ಷಾಂತರ ಜನರು ರಸ್ತೆ ಅಪಘಾತದಲ್ಲಿ ಮೃತಪಡುತ್ತಿದ್ದಾರೆ. ರಸ್ತೆ ಅಪಘಾತಗಳ ಬಗ್ಗೆ ಮಾಹಿತಿಯಿದ್ದರೂ ಅನೇಕ ಮಂದಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಾರೆ. ಹೆಲ್ಮೆಟ್ ಪಟ್ಟಿಯನ್ನು ಬಿಗಿಗೊಳಿಸಿಕೊಳ್ಳುವುದಿಲ್ಲ. ಕಾರು ಚಲಾಯಿಸುವಾಗ ಸೀಟ್ ಬೆಲ್ಟ್ಹಾ ಕಿಕೊಳ್ಳುವುದಿಲ್ಲ. ಹೀಗಾಗಿ ಪ್ರತಿ ಯೊಬ್ಬ ವಾಹನ ಸವಾರರು ಎಚ್ಚರಿಕೆ ಯಿಂದ ವಾಹನ ಚಲಾವಣೆ ಮಾಡಬೇಕೆಂದು ಮನವಿ ಮಾಡಿದರು.
ಸಾಗರ್ ಆಸ್ಪತ್ರೆ ಪ್ರತಿವರ್ಷ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಆಸ್ಪತ್ರೆಗಳು ಹೆಚ್ಚು ಹೆಚ್ಚು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಾಗರ್ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಜಗದೀಶ್ ಚಂದ್ರ ಮಾತನಾಡಿ, ಸಾಗರ್ ಆಸ್ಪತ್ರೆ ಬಹಳ ವರ್ಷಗಳಿಂದ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿದೆ. ಮುಂದೆಯೂ ಅದು ಮುಂದುವರಿಯಲಿದೆ. ಹಾಗೆಯೇ ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಸಂಚಾರ ವಿಭಾಗದ ಪೊಲೀಸರಿಗೆ ಹೆಲ್ಮೆಟ್ ವಿತರಣೆ ಮಾಡಲಾಯಿತು. ಪೂರ್ವ ಸಂಚಾರ ವಿಭಾಗದ ಡಿಸಿಪಿ ಡಾ. ಕೆ.ವಿ. ಜಗದೀಶ್, ಉತ್ತರ ವಿಭಾಗದ ಡಿಸಿಪಿ ಸಾರಾ ಫಾತಿಮಾ, ಪಶ್ಚಿಮ ವಿಭಾಗದ ಡಿಸಿಪಿ ಡಾ.ಸೌಮ್ಯಲತಾ, ಸಾಗರ್ ಆಸ್ಪತ್ರೆ ವೈದ್ಯ ಡಾ. ಎಸ್. ಮುರುಳಿ ಮೋಹನ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.