26ಕ್ಕೆ ಸಂವಿಧಾನ ರಕ್ಷಿಸಿ ದೇಶ ಉಳಿಸಿ ಅಭಿಯಾನ
Team Udayavani, Jan 21, 2018, 7:00 AM IST
ಬೆಂಗಳೂರು: ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿರುವ ಕೇಂದ್ರ ಸಚಿವರ ವಿರುದ್ದ ಜ.26 ರಂದು ಯುವ
ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಂವಿಧಾನ ರಕ್ಷಿಸಿ ದೇಶ ಉಳಿಸಿ ಎಂಬ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ.
ಅರಮನೆ ಮೈದಾನದಲ್ಲಿ ಮೂರು ದಿನಗಳಿಂದ ನಡೆದ ಯುವದೃಷ್ಟಿ ಕಾರ್ಯಾಗಾರದ ಕೊನೆಯ ದಿನವಾದ ಶನಿವಾರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಂವಿಧಾನ ಬದಲಾಯಿಸುವ ನಿರ್ಧಾರ ದೇಶದ ವೈವಿಧ್ಯತೆ ಮತ್ತು ಏಕತೆಗೆ ಧಕ್ಕೆ ತರಲಿದೆ. ಹೀಗಾಗಿ ಜ. 26 ರಂದು ತ್ರಿವರ್ಣ ಧ್ವಜ ಹಿಡಿದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಸಂವಿಧಾನ ರಕ್ಷಣಾ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಯುವ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ಹೇಳಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮುಗಲಭೆ, ಕೊಲೆ ಪ್ರಕರಣಗಳು ಮರುಕಳಿಸದಂತೆ ಯುವ ಜನರಲ್ಲಿ ಜಾಗೃತಿ ಮೂಡಿಸಲಾಗುವುದು.
ಫೆಬ್ರವರಿ ಅಂತ್ಯದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಯುವ ಸಮಾವೇಶ ಹಮ್ಮಿಕೊಳ್ಳಲು
ತೀರ್ಮಾನಿಸಲಾಗಿದೆ. ಯುವ ಘಟಕದಿಂದ ಈಗಾಗಲೇ 54 ಸಾವಿರ ಬೂತ್ ಕಮಿಟಿ ರಚನೆಯಾಗಿದೆ ಎಂದರು.
ಯುವ ಪ್ರಣಾಳಿಕೆ
ಕೊನೆಯ ದಿನದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಯುವಕರಿಗೆ
ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ. ಅವರ ಸೂಚನೆಯಂತೆ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಯುವಕರ ಬೇಡಿಕೆಗಳನ್ನು ಆಲಿಸಿ, ಪ್ರಣಾಳಿಕೆ ಸಿದ್ಧಪಡಿಸಲಾಗುವುದು. ಆನ್ಲೈನ್ ಮೂಲಕವೂ ಪ್ರಣಾಳಿಕೆಗೆ ಯುವಕರ
ಅಭಿಪ್ರಾಯ ಸಂಗ್ರಹಿಸುವ ಕಾರ್ಯ ನಡೆಸಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.