ಅರಣ್ಯ ಸಂಪತ್ತಿನ ರಕ್ಷಣೆ ನಮ್ಮೆಲ್ಲರ ಹೊಣೆ


Team Udayavani, Oct 10, 2018, 12:26 PM IST

aranya.jpg

ಬೆಂಗಳೂರು: ಪ್ರಕೃತಿ ಮತ್ತು ವನ್ಯಜೀವಿಗಳ ರಕ್ಷಣೆಯಿಂದ ಮನುಕುಲದ ಉಳಿವು ಸಾಧ್ಯ. ಕರ್ನಾಟಕಕ್ಕೆ ದೇವರು ನೀಡಿರುವ ಅಮೂಲ್ಯ ಪ್ರಕೃತಿ ಸಂಪತ್ತನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ರಾಜ್ಯಪಾಲ ವಿ.ಆರ್‌.ವಾಲಾ ಹೇಳಿದರು.

ಅರಣ್ಯ ಇಲಾಖೆಯಿಂದ ಮಂಗಳವಾರ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಭವನದಲ್ಲಿ ಹಮ್ಮಿಕೊಂಡಿದ್ದ 64ನೇ ವನ್ಯಜೀವಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ತುಂಗಭದ್ರಾ, ಕಾವೇರಿ ಹೀಗೆ ಹತ್ತಾರು ನದಿಗಳ ಜತೆಗೆ ವಿಶ್ವವಿಖ್ಯಾತ ಜೋಗಜಲಪಾತವೂ ಇದೆ. ಅಪಾರ ವನ್ಯಸಂಪತ್ತು, ಪ್ರಾಣಿ, ಪಕ್ಷಿಗಳಿವೆ. ಇದನ್ನೆಲ್ಲವನ್ನು ಆದ್ಯತೆಯ ಮೇರೆಗೆ ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮದಾಗಬೇಕು ಎಂದು ಹೇಳಿದರು.

ಪ್ರಕೃತಿಯನ್ನು ಜೀವಂತವಾಗಿಟ್ಟುಕೊಂಡರೆ ನಾವೆಲ್ಲರೂ ಜೀವಂತವಾಗಿರುತ್ತೇವೆ. ಪ್ರಕೃತಿಗೆ ಮೃತ್ಯು ನೀಡಿದರೆ, ನಾವ್ಯಾರೂ ಉಳಿಯುವುದಿಲ್ಲ. ಕಾಡು ನಾಶದಿಂದ ಪರಿಸರ ಅಸಮತೋಲದನದ ಜತೆಗೆ ಮನುಷ್ಯನ ಜೀವನ ಕ್ರಮದ ಮೇಲೂ ದುಷ್ಪರಿಣಾಮ ಬೀರುತ್ತದೆ. ಕಾಲಚಕ್ರದಲ್ಲೂ ಬದಲಾವಣೆಯಾಗುತ್ತದೆ. ಮಳೆಗಾಲದಲ್ಲಿ ಸರಿಯಾಗಿ ಮಳೆ ಬರುವುದಿಲ್ಲ. ಬೇಸಿಗೆಯಲ್ಲಿ ಅತಿಯಾದ ಬಿಸಿಲಿರುತ್ತದೆ. ಹೀಗಾಗಿ ಪರಿಸರ ಮತ್ತು ವನ್ಯಜೀವಿ ರಕ್ಷಣೆಯ ಅರಿವು ಅಗತ್ಯವಾಗಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಕಾಡುಗಳ ರಕ್ಷಣೆ ಮತ್ತು ಸಂವರ್ಧನೆ ತುರ್ತು ಅಗತ್ಯವಾಗಿದೆ. ಹತ್ತಾರು ಪಕ್ಷಿ ಸಂಕುಲಗಳು ನಾಶವಾಗಿವೆ ಹಾಗೂ ಕೆಲವು ಅಳಿವಿನಂಚಿನದಲ್ಲಿದೆ. ಹುಲಿ, ಸಿಂಹ, ನವಿಲು ಸಹಿತವಾಗಿ ಎಲ್ಲ ಪ್ರಾಣಿ ಪಕ್ಷಿಗಳ ರಕ್ಷಣೆಯಾಗಬೇಕು. ಪ್ರಾಣಿ ಪಕ್ಷಿಗಳ ರಕ್ಷಣೆಯ ಜತೆಗೆ ಅವುಗಳಿಗೆ ಬೇಕಾದ ಆಹಾರ ವ್ಯವಸ್ಥೆ ಮಾಡಬೇಕು. ಮಕ್ಕಳಿಗೆ ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಬೇಕು. ಕಾಂಕ್ರೀಟೀಕರಣಕ್ಕೆ ಬದಲಾಗಿ ಕಾಡುಗಳನ್ನು ಬೆಳೆಸುವ ಪ್ರವೃತ್ತಿ ಹೆಚ್ಚಾಗಬೇಕು. ಇದಕ್ಕೆ ಸರ್ಕಾರವು ಹೆಚ್ಚು ಮಹತ್ವ ನೀಡಬೇಕು ಎಂದರು.

ತಾಲೂಕಿಗೊಂದು ನರ್ಸರಿ!: ಸಚಿವ ಆರ್‌.ಶಂಕರ್‌ ಮಾತನಾಡಿ, ಕರ್ನಾಟಕವನ್ನು ಹಸಿರೀಕರಣ ಮಾಡುವ ನಿಟ್ಟಿನಲ್ಲಿ ಈಗಾಗಲೇ 5.50 ಕೋಟಿ ಗಿಡ ನೆಡುವ ಯೋಜನೆ ಚಾಲ್ತಿಯಲ್ಲಿದೆ. ಮುಂದಿನ ವರ್ಷ 10 ಕೋಟಿ ಗಿಡ ನೆಡಲು ಬೇಕಾದ ರೂಪುರೇಷೆ ಸಿದ್ಧಪಡಿಸುತ್ತಿದ್ದೇವೆ. ಹಾಗೆಯೇ ತಾಲೂಕು ಮಟ್ಟದಲ್ಲಿ ಸಾರ್ವಜನಿಕರ ಅಗತ್ಯಗೆ ಅನುಗುಣವಾಗಿ ಗಿಡಗಳನ್ನು ನೀಡಲು ತಾಲೂಕಿಗೊಂದು ನರ್ಸರಿ ಆರಂಭಿಸಲು ಚಿಂತನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಸಮಗ್ರ ರಕ್ಷಣೆ ಮತ್ತು ಸಂರಕ್ಷಣಾ ಕ್ರಮಗಳಿಂದ ರಾಜ್ಯದಲ್ಲಿ ಐದು ಹುಲಿ ಸಂರಕ್ಷಿತ ಪ್ರದೇಶದಲ್ಲಿ 406 ಹುಲಿಗಳು, 6072 ಆನೆಗಳು, ಉಳಿದುಕೊಂಡಿವೆ. ದೇಶದಲ್ಲಿ ಉಳಿದುಕೊಂಡಿರುವ ಆನೆಗಳ ಪೈಕಿ ಶೇ.25ರಷ್ಟು ಕರ್ನಾಟಕದಲ್ಲಿದೆ. ಜತೆಗೆ ದೇಶದಲ್ಲಿಯೇ ಅತಿ ಹೆಚ್ಚು ಹುಲಿ ಹಾಗೂ ಆನೆಗಳನ್ನು ಹೊಂದಿರುವ ರಾಜ್ಯ ನಮ್ಮದಾಗಿದೆ ಎಂದು ಮಾಹಿತಿ ನೀಡಿದರು. ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ.ಸಂದೀಪ್‌ ದವೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನಾಟಿ ಶ್ರೀಧರ್‌, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಸಿ.ಜಯರಾಮ್‌ ಇದ್ದರು.

ವನ್ಯಜೀವಿಗಳು ಮತ್ತು ಮನುಷ್ಯ ಸಮನ್ವಯದಿಂದ ಬದುಕಬೇಕು. ವನ್ಯಜೀವಿಗಳಿಗೆ ಯಾವುದೇ ರೀತಿಯಲ್ಲೂ ಆಘಾತವಾಗದಂತೆ ಎಚ್ಚರ ವಹಿಸಬೇಕು. ವಾಯಮಾಲಿನ್ಯ ತಡೆಗೂ ಗಮನ ಹರಿಸಬೇಕು. ಪ್ಲಾಸ್ಟಿಕ್‌ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ ಬರಬೇಕು. ರಾಜ್ಯವನ್ನು ಹಸಿರೀಕರಣ ಮಾಡುವ ಮೂಲಕ ವನ್ಯಜೀವಿಗಳ ರಕ್ಷಣೆ ಅರಿವು ಮೂಡಿಸಬೇಕು. 
-ಆರ್‌.ಶಂಕರ್‌, ಸಚಿವ 

ಟಾಪ್ ನ್ಯೂಸ್

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

3-aranthodu

Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.