ಡಿ.ಕೆ. ಶಿವಕುಮಾರ್ ಒಡೆತನದ ಹಿಲ್‌ವಿಲ್ ಶಾಲೆ ವಿರುದ್ಧ ಪ್ರತಿಭಟನೆ
Team Udayavani, May 10, 2017, 11:51 AM IST
ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕುಟುಂಬದವರ ಒಡೆ ತದ, ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್ ಹಿಲ್‌ವೀವ್ ಶಾಲೆಯಲ್ಲಿ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) ಮಕ್ಕಳ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ಪೋÐಕರು ಚಾಮರಾಜಪೇಟೆಯ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಾಲೆಯಲ್ಲಿ ಆರ್‌ಟಿಇ ಅಡಿ ಲಭ್ಯವಿದ್ದ ಸೀಟಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಅರ್ಜಿ ಸಲ್ಲಿಸಿ, ಆನ್‌ಲೈನ್ ಸೀಟು ಹಂಚಿಕೆ ಪ್ರಕ್ರಿಯೆ ಮೂಲಕವೇ ಸೀಟು ಪಡೆದ ಮಕ್ಕಳಿಗೆ ಪ್ರವೇಶ ನಿರಾಕರಿಸುವ ಮೂಲಕ ಶಾಲಾಡಳಿತ ಮಂಡಳಿ ಸರ್ಕಾರದ ಆದೇಶ ಉಲ್ಲಂ ಸಿದೆ ಎಂದು ಪೋಷಕರು ಆರೋಪಿಸಿದರು.
ಶಿಕ್ಷಣ ಇಲಾಖೆಯ ನಿಯಮದಂತೆ ಆರ್‌ಟಿಇ ಸೀಟು ಹಂಚಿಕೆಯಾದ ಮಕ್ಕಳ ಪ್ರವೇಶಕ್ಕೆ ಮೇ 10 ಕೊನೆ ದಿನವಾದ್ದು, ಶಾಲಾಡಳಿತ ಮಂಡಳಿ ಯವರು ಮಂಗಳವಾರ ಸೀಟು ನೀಡಲು ನಿರಾಕರಿಸಿದ್ದಾರೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿ, ಸಚಿವ ಡಿ.ಕೆ.ಶಿವಕುಮಾರ್, ಅಧಿಕಾರಿಗಳು ಹಾಗೂ ಶಾಲಾಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ಈ ಸಂಬಂಧ ಸ್ಪಷ್ಟೀಕರಣ ನೀಡಿದ ಸಚಿವ ಡಿ.ಕೆ.ಶಿವಕುಮಾರ್, ಕಾನೂನು ರೀತಿಯಲ್ಲೇ ನಡೆದುಕೊಳ್ಳುತ್ತಿದ್ದೇವೆ. ಮೊದಲ ಹಂತದಲ್ಲಿ ಹಂಚಿಕೆಯಾಗಿರುವ ಸೀಟುಗಳಿಗೆ ಪ್ರವೇಶ ನೀಡಿದ್ದೇವೆ. ಪ್ರತಿಭಟನೆ ನಡೆಸುತ್ತಿರುವ ಪೋಷಕರು ಎರಡು ಹಂತದಲ್ಲಿ ಸೀಟು ಕೇಳುತ್ತಿ¨ªಾರೆ. ಹಾಗೆ ನೋಡಿದರೆ ಆರ್‌ಟಿಇ ಮಕ್ಕಳ ಪೋಷಕರ ಆದಾಯ ಪರಿಶೀಲಿಸುವ ಅಗತ್ಯ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.