ಹತ್ಯಾಚಾರ ಖಂಡಿಸಿ ಪ್ರತಿಭಟನೆ
Team Udayavani, Oct 8, 2018, 12:48 PM IST
ವಿಜಯಪುರ: ಚಿಮ್ಮಲಗಿ ಗ್ರಾಮದ ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿ ಮೇಲಿನ ಹತ್ಯಾಚಾರ ಕೃತ್ಯದ ಆರೋಪಿಗಳನ್ನು ಬಂಧಿ ಸುವಂತೆ ಆಗ್ರಹಿಸಿ ಬಂಜಾರ ಸಮಾಜದ ಮುಖಂಡರು ಹಾಗೂ ವಿವಿಧ ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಈ ವೇಳೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಪಂ ಮಾಜಿ ಅಧ್ಯಕ್ಷ ಅರ್ಜುನ ರಾಠೊಡ ಮಾತನಾಡಿ, ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ, ಕೊಲೆ ನಡೆದಿರುವುದು ಅತ್ಯಂತ ಅಮಾನವೀಯ ಸಂಗತಿ. ಏನೂ ಅರಿಯದ ಮುಗª ಬಾಲಕಿ ಮೇಲೆ ಕಾಮುಕರು ತಮ್ಮ ಅಟ್ಟಹಾಸ ಮೆರೆದು ರಾಕ್ಷಸರಂತೆ ವರ್ತಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ, ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದರು.
ಈ ಹಿನ್ನೆಲೆ ಕೂಡಲೇ ಪೈಶಾಚಿಕ ಕೃತ್ಯವೆಸಗಿದ ನಿರ್ದಯಿ, ಹೃದಯಹೀನರನ್ನು ತಕ್ಷಣ ಬಂಧಿಸಬೇಕು. ಕೂಡಲೇ ಈ ವಿಷಯವನ್ನು ಸಮಗ್ರ ತನಿಖೆಗೊಳಪಡಿಸಬೇಕು. ಪಾಪಿಗಳಿಗೆ ಕಠಿಣ ಶಿಕ್ಷೆ ಕೊಡಿಬೇಕು. ಸಂತ್ರಸ್ತ ಬಾಲಕಿ ಕುಟುಂಬಕ್ಕೆ
25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಬಂಜಾರಾ ಸಮಾಜದ ಮುಖಂಡರಾದ ರಾಜಪಾಲ ಚವ್ಹಾಣ, ಡಿ.ಎಲ್. ಚವ್ಹಾಣ, ಬಿ.ಬಿ. ನಾಯಕ, ಶಂಕರ ಚವ್ಹಾಣ, ವಾಮನ್ ಚವ್ಹಾಣ, ಸಂತೋಷ ನಾಯಕ, ಬಿ.ಎಲ್. ನಾಯಕ, ರಘುವೀರ ನಾಯಕ, ಸಂತು ರಾಠೊಡ, ಹೀರಾ ರಾಠೊಡ, ಸಂತೋಷ ರಾಠೊಡ, ಅಶೋಕ ರಾಠೊಡ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.