ಎಲಿವೇಟೆಡ್‌ ಕಾರಿಡಾರ್‌ ವಿರೋಧಿಸಿ ಪ್ರತಿಭಟನೆ

Team Udayavani, Mar 15, 2019, 6:15 AM IST

elivated.jpg

ಬೆಂಗಳೂರು: ರಾಜ್ಯ ಸರ್ಕಾರ ಕೈಗೊಳ್ಳಲು ಉದ್ದೇಶಿಸಿರುವ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ರದ್ದುಗೊಳಿಸುವಂತೆ ಒತ್ತಾಯಿಸಿ ಸಿಟಿಜನ್‌ ಫಾರ್‌ ಬೆಂಗಳೂರು ಫೋರಂ ವತಿಯಿಂದ ಮಾ.16ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ಪೂರ್ಣಗೊಳ್ಳಬೇಕಾದರೆ 3 ಸಾವಿರಕ್ಕೂ ಅಧಿಕ ಮರಗಳನ್ನು ಬಲಿಕೊಡಬೇಕಾಗುತ್ತದೆ.

ಪ್ರಮುಖ ಕೆರೆಗಳ ಒತ್ತುವರಿಯಾಗುತ್ತವೆ ಹೀಗಾಗಿ ರಾಜ್ಯ ಸರ್ಕಾರ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಶನಿವಾರ ಮೌರ್ಯ ವೃತ್ತದ ಬಳಿ ಬೆಳಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಸಿಟಿಜನ್‌ ಫಾರ್‌ ಬೆಂಗಳೂರು ಫೋರಂನ ತಾರಾ ಕೃಷ್ಣಸ್ವಾಮಿ ತಿಳಿಸಿದರು.

ಎಲಿವೇಟೆಡ್‌ ಕಾರಿಡಾರ್‌ ಯೋಜನೆಯನ್ನು ಕೈಬಿಟ್ಟು ಸಮೂಹ ಸಾರಿಗೆ ಕಡೆಗೆ ಹೆಚ್ಚು ಗಮನ ನೀಡಬೇಕು. ಉಪನಗರ ರೈಲು, ಬಸ್‌ ಸಂಪರ್ಕ ವ್ಯವಸ್ಥೆ, ಮೆಟ್ರೋ ರೈಲು ಯೋಜನೆಗಳನ್ನು ಮತ್ತಷ್ಟು ವಿಸ್ತರಿಸಬೇಕು. “ಕಾಂಕ್ರೀಟ್‌ ಸಾಕು, ಸಮೂಹ ಸಾರಿಗೆ ಬೇಕು’ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರನ್ನು ಆಗ್ರಹಿಸಿದರು.

ಈ ಯೋಜನೆಯಿಂದ ಕಬ್ಬನ್‌ ಉದ್ಯಾನವನದಲ್ಲಿ 120 ಮರಗಳು, ಜಯಮಹಲ್‌ ಪ್ಯಾಲೇಸ್‌ನಲ್ಲಿ 356 ಮರಗಳು, ಕೋಲ್ಸ್‌ ಪಾರ್ಕ್‌ನಲ್ಲಿ 47 ಮರಗಳು, ಐಐಎಸ್‌ಸಿ ಕ್ಯಾಂಪಸ್‌ ಹಾಗೂ ಸಿ.ವಿ.ರಾಮನ್‌ ರಸ್ತೆಯಲ್ಲಿ 195 ಮರಗಳು ಮತ್ತು ರಾಜಾರಾಮ್‌ ಮೋಹನ್‌ರಾಯ್‌ ರಸ್ತೆಯಲ್ಲಿ 108 ಮರಗಳನ್ನು ಕಡಿಯಬೇಕಾಗುತ್ತದೆ ಎಂದು ತಿಳಿಸಿದರು.

ಹೆಬ್ಟಾಳ ಕೆರೆ, ಹಲಸೂರು ಕೆರೆ, ವರ್ತೂರು ಕೆರೆ ಮತ್ತು ವೃಷಾಭವತಿ ಕೆರೆಯ 5 ಮೀಟರ್‌ ವ್ಯಾಪ್ತಿ, ಕೆ.ಆರ್‌.ಪುರ ಕೆರೆ ಮತ್ತು ಸರ್ವಜ್ಞನಗರ ಕೆರೆಯ 20 ಮೀಟರ್‌ ವ್ಯಾಪ್ತಿ, ಅಗರ ಕೆರೆ ಮತ್ತು ಚಳ್ಳಕೆರೆಯ 30 ಮೀಟರ್‌ ವ್ಯಾಪ್ತಿ, ಬಾಣಸವಾಡಿ ರಾಜಕಾಲುವೆ ಹಾಗೂ ಶಾಂತಿನಗರ ರಾಜಕಾಲುವೆಯ 1 ಮೀಟರ್‌ ವ್ಯಾಪ್ತಿ ಯೋಜನೆಗೆ ಬಲಿಯಾಗಲಿದೆ ಎಂದು ಮಾಹಿತಿ ನೀಡಿದರು.

ರಂಗಕರ್ಮಿ ಪ್ರಕಾಶ್‌ ಬೆಳವಾಡಿ ಮಾತನಾಡಿ, ಕಾವೇರಿ ನೀರು ಸರಬರಾಜು ಮಾಡುವಾಗ ಶೇ.48ರಷ್ಟು ನೀರು ಪೋಲಾಗುತ್ತದೆ. ಅದನ್ನು ತಡೆಯಲು 26 ಸಾವಿರ ಕೋಟಿ ರೂ. ಅಗತ್ಯವಿದೆ. ನಗರದ ಮೂಲ ಸೌಕರ್ಯದ ಸಮಸ್ಯೆ ನಿವಾರಿಸಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಶ್ರೀಮಂತರ ಪರವಾಗಿರುವ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ರೂಪಿಸಲು ಸರ್ಕಾರದ ಬಳಿ 35 ಸಾವಿರ ಕೋಟಿ ರೂ. ಹಣ ಇದೆ ಎಂದು ಟೀಕಿಸಿದರು.

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.