ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ
Team Udayavani, Sep 6, 2018, 7:00 AM IST
ಬೆಂಗಳೂರು: ಸನಾತನ ಸಂಸ್ಥೆಯ ಮೇಲೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ
ಜತೆಗೂಡಿ ಹಿಂದೂ ಜನಜಾಗೃತಿ ಸಮಿತಿ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.
ಬನ್ನಪ್ಪ ಪಾರ್ಕ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ನಡೆದ ಮೆರವಣಿಗೆಯಲ್ಲಿ ಶ್ರೀರಾಮಸೇನೆ, ಹಿಂದೂ ಮಹಾಸಭಾ, ಕ್ರಾಂತಿ ಸೇನೆ, ಭಾರತೀಯ ಯುವ ಸೇನೆ, ಬಜರಂಗದಳ ಸೇರಿದಂತೆ ಅನೇಕ ಹಿಂದೂ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕೆಲವು ವಿಚಾರವಾದಿಗಳ ಹತ್ಯೆಯನ್ನು ಜೋಡಿಸಿ ಸನಾತನ ಸಂಸ್ಥೆ ಮೇಲೆ ಅಪಪ್ರಚಾರ ಮಾಡುವುದಕ್ಕೆ ಈ ಸಂದರ್ಭದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ಮುಖಂಡ ಗುರುಪ್ರಸಾದ್, ಗೌರಿ ಹತ್ಯೆ ಪ್ರಕರಣದಲ್ಲಿ
ಅಮಾಯಕ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಿ, ಹಿಂಸೆ ನೀಡಲಾಗುತ್ತಿದೆ. ಜೊತೆಗೆ, ತಮಗೆ ಬೇಕಾದ ರೀತಿಯಲ್ಲಿ ಹೇಳಿಕೆ ಬರೆಸಿಕೊಂಡು ಕರ್ನಾಟಕ ಸಂಘಟಿತ ಅಪರಾಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ 14 ಮಂದಿ ಹಿಂದೂಪರ ಸಂಘಟನೆಯ ಕಾರ್ಯಕರ್ತರಾಗಿದ್ದಾರೆ.
ಇವರಲ್ಲಿ ಒಬ್ಬರೂ ಸಹ ಸನಾತನ ಸಂಸ್ಥೆ ಅಥವಾ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಲ್ಲ. ಆದರೂ ಕೂಡ
ಸಂಘಟನೆಯ ಹೆಸರನ್ನು ಎಳೆದು ತರುತ್ತಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.