ಮುಂದುವರಿದ ವೈದ್ಯ ವಿದ್ಯಾರ್ಥಿಗಳ ಧರಣಿ
Team Udayavani, Nov 4, 2019, 11:07 AM IST
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಸ್ನಾತಕೋತ್ತರ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಭಾನುವಾರ ಮುಂದುವರಿಯಿತು. ನಮ್ಮ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಲೇ ಇವೆ. ನಮಗೆ ರಕ್ಷಣೆ ಕೊಡಿ ಎಂದು ವೈದ್ಯಕೀಯ ವಿದ್ಯಾರ್ಥಿಗಳು ಮನವಿ ಮಾಡಿದರು. ಸೋಮವಾರವೂ ಪ್ರತಿಭಟನೆ ಮುಂದುವರಿಯುವ ಸಾಧ್ಯತೆಗಳಿವೆ.
ಪ್ರತಿಭಟನೆ ಸಂಬಂಧಿಸಿದಂತೆ ಬೆಂಗಳೂರು ಮೆಡಿಕಲ್ ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ.ಸತೀಶ್ ಮಾತನಾಡಿ, ಪ್ರತಿಭಟನೆ ಮಾಡುತ್ತಿರುವ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ವೈದ್ಯಕೀಯ ಶಿಕ್ಷಣ ಸಚಿ ವರು ರಕ್ಷಣೆ ಒದಗಿಸುವ ಭರವಸೆ ನೀಡಿದ್ದಾರೆ ಆಸ್ಪತ್ರೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.
ಪ್ರತಿಭಟನೆ ಕೈಬಿಡಲು ಮನವಿ: ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯ ಮಂತ್ರಿ ಡಾ.ಅಶ್ವತ್ಥನಾರಾಯಣ, ಕಾನೂನನ್ನು ಕೈಗೆ ತೆಗೆದುಕೊಂಡವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ವೈದ್ಯರು ನಿರ್ಭೀತವಾಗಿ ಸೇವೆ ಸಲ್ಲಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗುತ್ತದೆ. ವೈದ್ಯರು ಭದ್ರತೆ ಸಂಬಂಧಿಸಿದಂತೆ ನೀಡಿರುವ ಮನವಿ ಯನ್ನು ಶೀಘ್ರವೇ ಜಾರಿಗೊಳಸಲಾ ಗುವುದು. ಪ್ರತಿಭಟನೆಯಿಂದ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಪ್ರತಿಭಟನೆ ಕೈಬಿಡಿಬೇಕು. ಇನ್ನು ಔಷಧ ವ್ಯತ್ಯಯದಿಂದ ಕಣ್ಣು ಕಳೆದುಕೊಂಡವರಿಗೂ ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.