ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ
Team Udayavani, Jul 19, 2018, 7:00 AM IST
ಬೆಂಗಳೂರು: ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರಿನಲ್ಲಿ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್ ನೀಡುವುದಾಗಿ ಈ ಹಿಂದೆ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಆದರೆ, ಶಾಲೆ-ಕಾಲೇಜುಗಳು ಆರಂಭಗೊಂಡು ಎರಡು ತಿಂಗಳಾದರೂ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಕೂಡಲೇ ಉಚಿತ ಪಾಸ್ ಘೋಷಿಸುವ ಮೂಲಕ ಸರ್ಕಾರವು ನುಡಿದಂತೆ ನಡೆಯಬೇಕು. ಈಗಾಗಲೇ ಘೋಷಿಸಿದ ಉಚಿತ ಬಸ್ ಪಾಸ್ ಎದುರು ನೋಡುತ್ತಿದ್ದೇವೆ. ಒಂದೂವರೆ ತಿಂಗಳಿಂದ ಈ ಸಂಬಂಧ ನಿರಂತರ ಹೋರಾಟ ಮಾಡಲಾಗುತ್ತಿದೆ. ಆದರೆ, ಸರ್ಕಾರದಿಂದ ಪೂರಕ ಸ್ಪಂದನೆ ಸಿಗುತ್ತಿಲ್ಲ. ಇದೇ ಧೋರಣೆ ಮುಂದುವರಿದರೆ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ ಹರ್ಷ ನಾರಾಯಣ ಮಾತನಾಡಿ, ಶಾಸಕರಿಗೆ ದುಬಾರಿ ಮೊತ್ತದ ಕಾರುಗಳನ್ನು ಖರೀದಿಸಲು, ಮೋಜು-ಮಸ್ತಿಗೆ ಸರ್ಕಾರದ ಬಳಿ ಹಣ ಇದೆ.ಆದರೆ, ಬಡ ವಿದ್ಯಾರ್ಥಿಗಳಿಗೆ ಪಾಸ್ ನೀಡಲು ಆರ್ಥಿಕ ಸಂಕಷ್ಟ ಎದುರಾಗುತ್ತದೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಮಂಡ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ಸರ್ಕಾರದ ವಿರುದಟಛಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ, ಬೆಂಗಳೂರು- ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಚಿಕ್ಕಬಳ್ಳಾಪುರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ನೂರಾರು ವಿದ್ಯಾರ್ಥಿಗಳು ಬೃಹತ್ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸುವ ಮೂಲಕ ವಾಹನಕ್ಕೆ ಸಂಚಾರಕ್ಕೆ ಅಡ್ಡಿಪಡಿಸಿದರು. ಬಳಿಕ ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ಕಚೇರಿಯ ಶಿರಸ್ತೇದಾರರಿಗೆ ಮನವಿ ಸಲ್ಲಿಸಿ, ಉಚಿತ ಬಸ್ ಪಾಸ್‌ಗೆ ಆಗ್ರಹಿಸಿದರು. ಇದೇ ವೇಳೆ, ಉಡುಪಿ,ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ಕಲಬುರಗಿ,ಬೀದರ್, ರಾಯಚೂರು, ಬೆಳಗಾವಿ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.