ಸಚಿವರ ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ


Team Udayavani, Nov 30, 2017, 6:40 AM IST

29BNP-(4).jpg

ಬೆಂಗಳೂರು: ಸಚಿವರಾದ ಕೆ.ಜೆ.ಜಾರ್ಜ್‌ ಮತ್ತು ವಿನಯ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ನಗರದ ಆನಂದರಾವ್‌ ವೃತ್ತದ ಬಳಿಯ ಗಾಂಧಿ ಪ್ರತಿಮೆ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್‌ ದಾಖಲಿಸಿರುವ ಹಿನ್ನೆಲೆಯಲ್ಲಿ ಸಚಿವ ಜಾರ್ಜ್‌ ಮತ್ತು ಧಾರವಾಡ ಜಿಪಂ ಸದಸ್ಯರಾಗಿದ್ದ ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿರುವ ವಿನಯ ಕುಲಕರ್ಣಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಬ್ಬರನ್ನೂ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಎರಡೂ ಪ್ರಕರಣಗಳಲ್ಲಿ ಸಾಕ್ಷಿಗಳನ್ನು ಮುಚ್ಚಿಹಾಕುವಲ್ಲಿ ಸಚಿವರ ಕೈವಾಡವಿರುವುದು ಸಾಬೀತಾಗಿದೆ. ಹೀಗಾಗಿ ಸಚಿವರಿಬ್ಬರೂ ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದರೂ ಸರ್ಕಾರ ಅವರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದಟಛಿ ಘೋಷಣೆ ಕೂಗಿದರು. 

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌, ಸಚಿವರಾದ ಜಾರ್ಜ್‌ ಮತ್ತು ವಿನಯ ಕುಲಕರ್ಣಿ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಮಾತನಾಡಿ, ಎಲ್ಲಾ ಪ್ರಕರಣಗಳಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕೊಲೆ ಗಡುಕರಿಗೆ ಬೆಂಬಲ ನೀಡುತ್ತಿದೆ. ಈ ಮೂಲಕ ಇದು ಕೇವಲ ಭ್ರಷ್ಟ ಸರ್ಕಾರ ಮಾತ್ರವಲ್ಲ, ಕೊಲೆಗಡುಕ ಸರ್ಕಾರವೂ ಹೌದು ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ಆರೋಪಿಸಿದರು.

ಸಂಸದ ಪಿ.ಸಿ.ಮೋಹನ್‌, ಶಾಸಕರಾದ ಎಸ್‌. ಸುರೇಶ್‌ಕುಮಾರ್‌, ಮುನಿರಾಜು, ವಿಧಾನ ಪರಿಷತ್‌ ಸದಸ್ಯ ರಾಮಚಂದ್ರಗೌಡ, ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಅಬ್ದುಲ್‌ ಅಜೀಂ, ಬಿಜೆಪಿ ನಗರ ಅಧ್ಯಕ್ಷ ನಗರ ಅಧ್ಯಕ್ಷಪಿ.ಎನ್‌.ಸದಾಶಿವ ಮತ್ತಿತರರು ಇದ್ದರು.

ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ನಿರ್ಮಾಣದ ಪರಿವರ್ತನಾ ಯಾತ್ರೆಗೆ ಸಿಗುತ್ತಿರುವ ಜನಬೆಂಬಲ ನೋಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನಡುಕ ಆರಂಭವಾಗಿದ್ದು, ಈ ಕಾರಣದಿಂದ ಯಾತ್ರೆ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.
–  ಜಗದೀಶ ಶೆಟ್ಟರ್‌
ವಿಧಾನಸಭೆ ಪ್ರತಿಪಕ್ಷ ನಾಯಕ

ಕೇಂದ್ರ ಸರ್ಕಾರದ ಹಣದಲ್ಲಿ ಕೈಗೊಳ್ಳುತ್ತಿರುವ ಎಲ್‌ಇಡಿ ಬಲ್ಬ್ ವಿತರಿಸುವ ಯೋಜನೆ, ಅನ್ನಭಾಗ್ಯ ಯೋಜನೆಗಳನ್ನು ತಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಊರೆಲ್ಲಾ ಬುರುಡೆ ಬಿಡುತ್ತಾ ತಿರುಗಾಡುತ್ತಿದ್ದಾರೆ. ದೇಶದಲ್ಲೇ ಭ್ರಷ್ಟ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರ ವಿರುದ್ದ ಎಸಿಬಿಯಲ್ಲಿ 48 ದೂರುಗಳು ದಾಖಲಾಗಿದ್ದರೂ ನಾನೊಬ್ಬನೇ ಸಾಚಾ ಎನ್ನುವಂತೆ ವರ್ತಿಸುತ್ತಿದ್ದಾರೆ.
 ಆರ್‌.ಅಶೋಕ್‌
ಮಾಜಿ ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.