ಫ್ರೀಡಂ ಪಾರ್ಕ್‌ಗಾಗಿ ಪ್ರತಿಭಟನೆ
Team Udayavani, Jan 25, 2018, 12:53 PM IST
ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ವರ್ಗಾಯಿಸಲು ಮುಂದಾಗಿರುವ ಸರ್ಕಾರದ ನಿಲುವು ಖಂಡಿಸಿ ಜ.27ರಂದು ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಸ್ವಾತಂತ್ರ್ಯ ಉದ್ಯಾನ ಉಳಿಸಿ ಹೋರಾಟ ಸಮಿತಿ ನಿರ್ಧರಿಸಿದೆ.
ಸ್ವಾತಂತ್ರ್ಯ ಉದ್ಯಾನದ ಆವರಣದಲ್ಲಿ ಎರಡು ಎಕರೆ ಜಾಗವನ್ನು ಪ್ರತಿಭಟನೆಗೆ ಮೀಸಲಿಡ ಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ರುವ ಫ್ರೀಡಂ ಪಾರ್ಕ್‌ನ 22 ಎಕರೆ ಪ್ರದೇಶ ವನ್ನು ಪ್ರವಾಸೋದ್ಯಮ ಇಲಾಖೆಗೆ ವರ್ಗಾ ಯಿಸಲು
ಸರ್ಕಾರ ಚಿಂತನೆ ನಡೆಸುತ್ತಿದೆ. ಇದರ ಹಿಂದೆ ಹೋರಾಟಗಾರರ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ಅಡಗಿದೆ. ಹೀಗಾಗಿ ಜ.27ರಂದು ಪ್ರತಿಭಟನೆ ನಡೆಸಲಿದ್ದೇವೆ ಎಂದು ಸಿಐಟಿಯು ಅಧ್ಯಕ್ಷೆ ಎಸ್.ವರಲಕ್ಷ್ಮೀ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಫ್ರೀಡಂಪಾರ್ಕ್‌ನಲ್ಲಿ ಖಾಸಗಿ ಸಂಸ್ಥೆಗಳ ವಸ್ತು ಪ್ರದರ್ಶನ ಹಾಗೂ ವಾಣಿಜ್ಯ ವ್ಯವಹಾರಕ್ಕಾಗಿ ಬಿಬಿಎಂಪಿ ಅನುಮತಿ ನೀಡುತ್ತಿದೆ. ಇದರಿಂದ ಸರ್ಕಾರಕ್ಕೆ ಸಾಕಷ್ಟು ಆದಾಯ ಬರುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿಯ ಹೆಸರಿನಲ್ಲಿ 22
ಎಕರೆ ಜಾಗವನ್ನು ಬಿಬಿಎಂಪಿಯಿಂದ ಪ್ರವಾಸೋದ್ಯಮ ಇಲಾಖೆಗೆ ನೀಡಲಾಗುತ್ತಿದೆ. ಇದರಿಂದ ಸರ್ಕಾರ ಹೋರಾಟಗಾರರಿಗೆ ವಂಚನೆ ಮಾಡಿದಂತಾಗುತ್ತದೆ ಎಂದು ಆರೋಪಿಸಿದರು.
ಉದ್ಯಾನದಲ್ಲಿ ಪ್ರತಿಭಟನೆಗೆ ಮೀಸಲಿಟ್ಟಿರುವ ಐದು ಎಕರೆ ಜಾಗದಲ್ಲಿ ಮೂರು ಎಕರೆ ಜಾಗವನ್ನು ಪಾರ್ಕಿಂಗ್ ಕಟ್ಟಡಕ್ಕೆ ನೀಡಲಾಗಿದೆ. ಉಳಿದ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ನೀಡಿದೆ ಹೋರಾಟಗಾರರಿಗೆ ಮೀಸಲಿಟ್ಟಿರುವ
ಜಾಗವನ್ನು ಇನ್ನಷ್ಟು ವಿಸ್ತರಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.