ಬೇಡಿಕೆ ಈಡೇರಿಕೆಗೆ ಧರಣಿ
Team Udayavani, Dec 13, 2019, 11:32 AM IST
ಬೆಂಗಳೂರು: ಅಸಂಘಟಿತ ಕಾರ್ಮಿಕರ ಭವಿಷ್ಯ ನಿಧಿ ಕಾನೂನು ಜಾರಿ, ಅಂಬೇಡ್ಕರ್ ಸ್ಮಾರ್ಟ್ ಕಾರ್ಡ್ ವಿತರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಸದಸ್ಯರು ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಅಸಂಘಟಿತ ಕಾರ್ಮಿಕರು ಕಾಲ್ನಡಿಗೆ ಜಾಥಾ ನಡೆಸಿ, ತಮ್ಮ ಬೇಡಿಕೆ ಪೂರೈಸಲು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಕಾರ್ಮಿಕ ಇಲಾಖೆ ರೂಪಿಸಿದ ಭವಿಷ್ಯ ನಿಧಿ ಯೋಜನೆ ಅಸಂಘಟಿತ ಕಾರ್ಮಿಕರಿಗೆ ಪೂರಕವಾಗಿದೆ. ಇದನ್ನು ಕೂಡಲೇ ಜಾರಿಗೊಳಿಸಿ 2020ರ ಬಜೆಟ್‌ನಲ್ಲಿ 500 ಕೋಟಿ ರೂ. ಅನುದಾನ ಮೀಸಲಿಡಬೇಕು. ಸ್ಮಾರ್ಟ್ ಕಾರ್ಡ್ ಮತ್ತು ಗುರುತಿನ ಚೀಟಿ ಪಡೆದಿರುವವರಿಗೆ ಕರ್ನಾಟಕ ಆಯುಷ್ಮಾನ್ ಭಾರತ್ ಕಾರ್ಡ್‌ಗಳನ್ನು ವಿತರಿಸಬೇಕು. ಪ್ರಧಾನ ಮಂತ್ರಿ ಜೀವನ್ ಭೀಮಾ ಯೋಜನೆ ಮತ್ತು ಸುರಕ್ಷಾ ಭೀಮಾ ಯೋಜನೆಯನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ವರ್ಗಾಯಿಸಿ, ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬೀದಿಬದಿ ವ್ಯಾಪಾರಸ್ಥರು, ಹಮಾಲಿ ಕಾರ್ಮಿಕರು, ಮನೆಗೆಲಸ ಮಾಡುವವರು, ಆಟೋ, ಟ್ಯಾಕ್ಸಿ ಚಾಲಕರು ಸೇರಿ ಹಲವು ವಲಯಗಳಲ್ಲಿ ಅಸಂಘಟಿತ ಕಾರ್ಮಿಕರುಕೆಲಸ ಮಾಡುತ್ತಿದ್ದಾರೆ. 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಎರಡು ಕೋಟಿಗೂ ಅಧಿಕ ಅಸಂಘಟಿತ ಕಾರ್ಮಿಕರಿದ್ದಾರೆ. ರಾಜ್ಯದ ಒಟ್ಟು ಆದಾಯದಲ್ಲಿ ಶೇ 60ರಷ್ಟು ಕೊಡುಗೆ ಕಾರ್ಮಿಕರದ್ದು. ಆದರೆ, ಕನಿಷ್ಠ ವೇತನ, ಪಿಂಚಣಿ, ಆರೋಗ್ಯ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಆರೋಪಿಸಿದರು.
ಕಾರ್ಮಿಕರಿಗೆ ಸಾಮಾಜಿಕ ರಕ್ಷಣೆ ಒದಗಿಸುವ ಉದ್ದೇಶದಿಂದ 2009ರಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿ ರಚನೆಯಾಗಿದೆ. ಇದರಂತೆ ಮಕ್ಕಳಿಗೆ ಉಚಿತ ಶಿಕ್ಷಣ, ಅಪಘಾತ ಪರಿಹಾರ, ವಸತಿ ಹಾಗೂ ಪಿಂಚಣಿ ಸೇರಿ ಅನೇಕ ಸೌಲಭ್ಯಗಳು ಸಿಗಬೇಕಿತ್ತು. ಆದರೆ, ಅನುದಾನದ ಕೊರತೆಯ ನೆಪದಲ್ಲಿ ಈ ಸೌಲಭ್ಯ ಈವರೆಗೆ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯೂನಿಯನ್ ಅಧ್ಯಕ್ಷ ಕೆ.ಎನ್.ಉಮೇಶ್, ಖಜಾಂಚಿ ಬಸಮ್ಮ, ಪ್ರಧಾನ ಕಾರ್ಯದರ್ಶಿ ಸೈಯದ್ ಮುಜೀಬ್ ಸೇರಿದಂತೆ ಪ್ರಮುಖ ರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.