ರಸ್ತೆ ನಡುವಿನ ಗುಂಡಿಯಲ್ಲಿ ಗಿಡ ನೆಟ್ಟು ಪ್ರತಿಭಟನೆ
Team Udayavani, Oct 13, 2017, 11:08 AM IST
ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಅನಾಹುತಕ್ಕೀಡಾದ ಹಲವು ಪ್ರದೇಶಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುರುವಾರ ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್, ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಮಳೆ ಅನಾಹುತ ಭಾಗಗಳಿಗೆ ಭೇಟಿ ನೀಡಿದರು. ಮೊದಲಿಗೆ ದಂಡು ರೈಲ್ವೆ ನಿಲ್ದಾಣದ ಬಳಿಯ ಅಂಡರ್ ಪಾಸ್ ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿಕೊಂಡಿರುವುದು ವೀಕ್ಷಿಸಿದ ಅವರು, ರಸ್ತೆಗುಂಡಿಗಳಲ್ಲಿ ಗಿಡಗಳನ್ನು ನೆಟ್ಟು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಶಿವಾಜಿನಗರದ ಟಸ್ಕರ್‌ಟೌನ್ ಪೊಲೀಸ್ ವಸತಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ತೊಂದರೆಗಳ ಕುರಿತು ಮಾಹಿತಿ ಪಡೆದರು. ಈ ವೇಳೆ ವಸತಿ ಕಟ್ಟಡಗಳನ್ನು ತೆರವುಗೊಳಿಸಿ ನೂತನ ಕಟ್ಟಡಗಳನ್ನು ನಿರ್ಮಿಸುವುದಾಗಿ ಅಧಿಕಾರಿಗಳು ತಿಳಿಸಿದ್ದು, ಮೊದಲು ಪರ್ಯಾಯ ವ್ಯವಸ್ಥೆ ಕಲ್ಪಿಸಿ ನಂತರ ಕಟ್ಟಡಗಳ ತೆರವು ಮಾಡಲಿ ಎಂದು ನಿವಾಸಿಗಳು ಮನವಿ ಮಾಡಿದರು. ಅದಕ್ಕೆ ಮಾಜಿ ಡಿಸಿಎಂ ಆರ್.ಅಶೋಕ್, ವಿಷಯವನ್ನು ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು.
ಬಳಿಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಸೃಷ್ಟಿಯಾದ ರಸ್ತೆಗುಂಡಿಗಳ ಪರಿಶೀಲಿಸಿ, ಗುಂಡಿಗಳಿಗೆ ಬಣ್ಣದ ಪಟ್ಟಿ ಹಾಕಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ಯಡಿಯೂರಪ್ಪ ಹಾಗೂ ಅವರ ಬೆಂಬಲಿಗರ ವಾಹನಗಳು ನಿಲ್ದಾಣದ ಬಳಿ ನಿಲ್ಲಿಸಿದರಿಂದ ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ನಿಲ್ದಾಣದಿಂದ ಬಸ್‌ಗಳು ಹೊರಲಾಗಲಿಲ್ಲ. ಇದರಿಂದ ನಿಲ್ದಾಣದ ಸುತ್ತಮುತ್ತಲಿನ ಭಾಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ನಂತರ ಹಲಸೂರು ಪೊಲೀಸ್ ಠಾಣೆ ಸಮೀಪ ಬ್ಲಾಕ್‌ಸ್ಪಾಟ್ ಪರಿಶೀಲಿಸಿ, ಠಾಣೆಯಿಂದ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದವರೆಗೆ ಪಾದಯಾತ್ರೆ ನಡೆಸಿದರು. ಈ ವೇಳೆ ರಸ್ತೆಯಲ್ಲಿನ ಗುಂಡಿಗಳಿಗೆ ಕಾರ್ಯಕರ್ತರು ಬಿಳಿ ಪಟ್ಟಿ ಹಾಕಿದರು. ಪರಿಣಾಮ ಎರಡು ರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿತು
2 ನಿಮಿಷ ಪರಿಶೀಲನೆ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನರಿಗೆ ತೊಂದರೆಯಾದಾಗ ಯಾರು ಭೇಟಿ ನೀಡಲಿಲ್ಲ. ಈಗ ಭೇಟಿ ನೀಡಿದ್ದರಿಂದ ಆಗುವ ಪ್ರಯೋಜನವೇನು? ಎಂದು ಟಸ್ಕರ್‌ಟೌನ್ ನಿವಾಸಿಗಳು ದೂರಿದರು. ಯಡಿಯೂರಪ್ಪ ಅವರು ನಮ್ಮ ಏರಿಯಾಗೆ ಬಂದು ಕೇವಲ ಎರಡು ನಿಮಿಷ ಪರಿಶೀಲನೆ ನಡೆಸಿ ಹೊರಟುಹೋದರು. ನಿಜವಾಗಿಯೂ ಇಲ್ಲಿನ ಜನರು ಸಮಸ್ಯೆಗಳೇನು ಎಂಬುದನ್ನು ತಿಳಿದು ಪರಿಹಾರ ನೀಡುವ ಯಾವುದೇ ಪ್ರಯತ್ನ ಮಾಡಲಿಲ್ಲ ಎಂದು ಕೆಲ ನಿವಾಸಿಗಳು ಬೇಸರ ವ್ಯಕ್ತಪಡಿಸಿದರು.
ಪೊಲೀಸ್ ವಸತಿ ಗೃಹ ಪ್ರದೇಶದಲ್ಲಿ ಕಾಲುವೆಗಳು ಹಾಳಾಗಿದ್ದು, ಸೊಳ್ಳೆಗಳ ಕಾಟ ಹೆಚ್ಚಿದೆ. ಆದರೆ, 19 ವರ್ಷಗಳಿಂದ ಒಮ್ಮೆಯೂ ಪಾಲಿಕೆ ಅಧಿಕಾರಿಗಳು ಈ ಕಡೆಗೆ ಬಂದಿಲ್ಲ.
ಮಂಜುಳಾ ಸುರೇಶ್‌ಬಾಬು, ನಿವಾಸಿ
ಕಳಪೆ ಕಾಮಗಾರಿಯಿಂದಾಗಿ ರಸ್ತೆಗಳು ಗುಂಡಿಮಯವಾಗಿದ್ದು, ಜನ ಸಾಯುವಂತಾಗಿದೆ. ಇಷ್ಟೆಲ್ಲ ಅನಾಹುತ ಸಂಭವಿಸಿದರೂ, ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ.
ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.