ಶಿಕ್ಷಕರಿಂದ ಇಂದು ಪ್ರತಿಭಟನೆ
Team Udayavani, Nov 9, 2018, 6:37 AM IST
ಬೆಂಗಳೂರು: ಕಳೆದ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರಿಸುವುದು ಮತ್ತು ಬೆಳಗಾವಿ ಅಧಿವೇಶನದಲ್ಲಿ
ಶಿಕ್ಷಕರ ವರ್ಗಾವಣೆ ಕಾಯ್ದೆಯಲ್ಲಿರುವ ಅವೈಜ್ಞಾನಿಕ ನಿಯಮಗಳನ್ನು ತಿದ್ದುಪಡಿ ಮಾಡಲು ಹಾಗೂ ರದ್ದುಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಶಿಕ್ಷಕರ ಹೋರಾಟ ಸಮಿತಿ ವತಿಯಿಂದ ನ.9 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಮಾಲತೇಶ ಬಬ್ಬಜ್ಜಿ ಮಾತನಾಡಿ, ದಂಪತಿ ಪ್ರಕರಣ ಹೊರತುಪಡಿಸಿ ರೂಪಿಸಿರುವ ಇತರೆ ಮಹಿಳಾ ಮತ್ತು ಪುರುಷ ಶಿಕ್ಷಕರು ಎಂಬ ಆದ್ಯತೆ ರದ್ದುಗೊಳಿಸಿ ಸೇವಾ ಜೇಷ್ಠತೆ ಆಧಾರದ ಮೇಲೆ ವರ್ಗಾವಣೆ ಪ್ರಕ್ರಿಯೆ ನಡೆಸಬೇಕೆಂದು ಒತ್ತಾಯಿಸಿ ಅಂದು ಬೆಳಗ್ಗೆ 10ಕ್ಕೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು
ತಿಳಿಸಿದರು.
ಕಳೆದ 2-3 ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಲಾ ಗಿತ್ತು. ವಿಧಾನಸಭಾ ಚುನಾವಣೆಯಿಂದಾಗಿ
ಕಳೆದ ವರ್ಷ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗಲಿಲ್ಲ. ಈಗ ಮುಂದುವರಿದ ವರ್ಗಾವಣೆ ಪ್ರಕ್ರಿಯೆಯನ್ನು ಶಿಕ್ಷಣ
ಇಲಾಖೆ ಅರ್ಧದಲ್ಲಿಯೇ ನಿಲ್ಲಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ನಡೆಸಲು ಉದ್ದೇಶಿಸಿದೆ. ಇದರಿಂದ ವರ್ಗಾವಣೆ
ಬಯಸಿದ ಶಿಕ್ಷಕರಿಗೆ ನಿರಾಸೆಯುಂಟಾಗಿದೆ. ಶಿಕ್ಷಣ ಇಲಾಖೆ ಕೂಡಲೇ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸಿ ಮುಂದಿನ ವರ್ಷ ವರ್ಗವಾದ ಶಾಲೆಗಳಿಗೆ ಶಿಕ್ಷಕರನ್ನು
ನಿಯೋಜಿಸಲಿ ಎಂದರು.
ಶಿಕ್ಷಕರ ವರ್ಗಾವಣೆ ಕಾಯ್ದೆಯಲ್ಲಿ ಹಲವು ಅವೈಜ್ಞಾನಿಕ ನಿಯಮಗಳಿವೆ. ಇದರಿಂದ ವರ್ಗಾವಣೆ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಲಿದೆ. ಹೀಗಾಗಿ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಕಾಯ್ದೆಯಲ್ಲಿರುವ ಅವೈಜ್ಞಾನಿಕ ನಿಯಮ ತಿದ್ದುಪಡಿ ಮಾಡಬೇಕು ಅಥವಾ ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ಶೇ.20ರಷ್ಟು ಖಾಲಿ ಹುದ್ದೆ ರದ್ದುಪಡಿಸಿ ಕೌನ್ಸೆಲಿಂಗ್ ಸಮಯದಲ್ಲಿ ಎಲ್ಲ ತಾಲೂಕಿನ ಶಿಕ್ಷಕರಿಗೆ ವರ್ಗಾವಣೆಗೆ ಅವಕಾಶ ನೀಡಬೇಕು. ಹೈ.ಕ ಭಾಗದ ಶಿಕ್ಷಕರಿಗೆ ಕಡ್ಡಾಯವಾಗಿ 10 ವರ್ಷಗಳ ಸೇವೆ ಸಲ್ಲಿಸಬೇಕೆಂಬ ನಿಯಮ ಕೈ ಬಿಟ್ಟು ಅಂತಿಮ ಆದ್ಯತಾ ಪಟ್ಟಿಯಲ್ಲಿ ಪರಿಗಣಿಸಿ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ
ಅವಕಾಶ ನೀಡಬೇಕೆಂದು ಮನವಿ ಮಾಡಿದರು.
ಸಿ ವಲಯದಿಂದ ಎಲ್ಲ ವಲಯಗಳಿಗೂ ವರ್ಗಾವಣೆ ತೆಗೆದುಕೊಳ್ಳಲು ಅವಕಾಶ ಮಾಡಿಕೊಡಬೇಕು. ಅಂತರ್ ಘಟಕ ವರ್ಗಾವಣೆಯನ್ನು ಶೇ.6ಕ್ಕೆ ಹೆಚ್ಚಿಸಬೇಕು. ಅಂತರ್ ಘಟಕದಲ್ಲಿ ಕನಿಷ್ಠ ಸೇವಾವಧಿ ಸೇವೆ ಸಲ್ಲಿಸಿರುವ ಶಿಕ್ಷಕರಿಗೆ ಅವರವರ ಮೂಲ ಜಿಲ್ಲೆಗೆ ವರ್ಗಾವಣೆ ಆಗಲು ಅವಕಾಶ ಕಲ್ಪಿಸಬೇಕೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.