ಮುಂದುವರಿದ ಗುತ್ತಿಗೆ ನೌಕರರ ಪ್ರತಿಭಟನೆ
Team Udayavani, Jan 19, 2018, 11:23 AM IST
ಬೆಂಗಳೂರು: ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಗುತ್ತಿಗೆ ಆಧಾರಿತ ದಾದಿಯರು ಹಾಗೂ ಪ್ರಯೋಗಾಲಯ ತಂತ್ರಜ್ಞರು ಗುರುವಾರವೂ ಸೇವೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಸಂಸ್ಥೆಯ ನಿರ್ದೇಶಕ ಡಾ.ಕೆ.ಬಿ.ಲಿಂಗೇಗೌಡ ಗುರುವಾರ ಸಂಜೆ ಪ್ರತಿಭಟನಾನಿರತ ಪ್ರಮುಖರೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗದ ಕಾರಣ ಪ್ರತಿಭಟನೆ ಮುಂದುವರಿದಿದೆ.
ಶುಕ್ರವಾರ ವಿವಾದ ಇತ್ಯರ್ಥವಾಗುವ ಸಾಧ್ಯತೆ ಇದೆ. ಗುತ್ತಿಗೆ ಆಧಾರಿತ ದಾದಿಯರು, ಪ್ರಯೋಗಾಲಯ ತಂತ್ರಜ್ಞರ ಬಹುತೇಕ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಲಾಗಿದೆ. ತಮ್ಮನ್ನು ಗುತ್ತಿಗೆ ಸೇವೆಯಿಂದ ವಜಾಗೊಳಿಸದಂತೆ ಭರವಸೆ ನೀಡಿ ಎಂದು ಪ್ರತಿಭಟನಾನಿರತರು ಕೇಳಿದ್ದಾರೆ. ಆ ರೀತಿ ವಾಗ್ಧಾನ ನೀಡಲು ಸಾಧ್ಯವಿಲ್ಲ.
ಶೇ.90ರಷ್ಟು ಬೇಡಿಕೆಗಳನ್ನು ಒಪ್ಪಿಕೊಳ್ಳಲಾಗಿದ್ದು, ಶುಕ್ರವಾರ ವಿವಾದ ಬಗೆಹರಿಯುವ ನಿರೀಕ್ಷೆ ಇದೆ. ಈ ನಡುವೆ ಸಂಸ್ಥೆಯ ಹೊರರೋಗಿ ವಿಭಾಗ, ಒಳರೋಗಿ ವಿಭಾಗದಲ್ಲಿ ರೋಗಿಗಳ ಶುಶ್ರೂಷೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೆ.ಬಿ. ಲಿಂಗೇಗೌಡ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.