ಟಿಇಟಿ ಅಭ್ಯರ್ಥಿಗಳಿಂದ ಇಂದು ಪ್ರತಿಭಟನೆ
Team Udayavani, Apr 2, 2019, 5:00 AM IST
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ನಡೆಸಿದ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯ 13 ಪ್ರಶ್ನೆಗಳು ಮತ್ತು ಅವುಗಳಿಗೆ ಸಂಬಂಧಿಸಿದ ಗೊಂದಲ ಬಗೆಹರಿಸುವಂತೆ ಕೋರಿ ಏ.2ರಂದು ನೊಂದ ಅಭ್ಯರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಯಾವುದೇ ರೀತಿಯಲ್ಲೂ ಸಂಚಾರಕ್ಕೆ ತೊಂದರೆ ಮಾಡದಂತೆ ಪ್ರತಿಭಟನೆ ನಡೆಸಲು ಹಲಸೂರು ಪೊಲೀಸ್ ಠಾಣೆಯಿಂದ ಅನುಮತಿ ಪಡೆದುಕೊಂಡಿದ್ದೇವೆ. ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಕೇಂದ್ರೀಕೃತ ದಾಖಲಾತಿ ಘಟಕದ ಎದುರು ಪ್ರತಿಭಟನೆ ನಡೆಸಲಿದ್ದೇವೆ ಎಂದು ಅಭ್ಯರ್ಥಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ಶಿಕ್ಷಕರ ಅರ್ಹತೆಯಲ್ಲಿ ಕೇಳಲಾದ ಪ್ರಶ್ನೆಗಳ ಪೈಕಿ, 13 ಪ್ರಶ್ನೆಗಳು ಮತ್ತು ಅದಕ್ಕೆ ನೀಡಿದ ಉತ್ತರ ಗೊಂದಲಮಯವಾಗಿತ್ತು. ಸರಿ ಉತ್ತರ ಬರೆದವರಿಗೂ ಕೇಂದ್ರೀಕೃತ ದಾಖಲಾತಿ ಘಟಕದಿಂದ ಅಂಕಗಳು ಸಿಗಲಿಲ್ಲ. ಇದರಿಂದ ಹಲವರ ಭವಿಷ್ಯ ಅತಂತ್ರವಾಗಿದೆ. ಇದನ್ನು ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದೇವೆ. ಏ.2ರಂದು ಸಮಸ್ಯೆಗೆ ಸೂಕ್ತ ಸ್ಪಂದನೆ ಸಿಗದಿದ್ದರೆ ಏ.3ರಂದೂ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.