ಸಿರಿವಂತರ ಕಾರುಗಳಿಗೆ ಬೆಂಕಿ ಹಚ್ಚುತ್ತಿದ್ದ ಸೈಕೋ ಡಾಕ್ಟರ್‌ ಸೆರೆ

Team Udayavani, Jan 19, 2018, 6:25 AM IST

Psycho-Doctor.jpg

ಬೆಳಗಾವಿ: ಶ್ರೀಮಂತರ ಮನೆಗಳ ಮುಂದೆ ನಿಲ್ಲಿಸಿರುವ ಐಷಾರಾಮಿ ಕಾರುಗಳನ್ನೇ ಟಾರ್ಗೆಟ್‌ ಮಾಡಿ ಕರ್ಪೂರದಿಂದ ಬೆಂಕಿ ಹಚ್ಚುವ ಚಾಳಿ ನಡೆಸಿದ್ದ ವಿಕೃತ ಮನಸ್ಸಿನ ವೈದ್ಯ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಮೂಲತಃ ಕಲಬುರ್ಗಿಯ ಪ್ರಗತಿ ನಗರದ ಎಂಬಿಬಿಎಸ್‌, ಎಂಡಿ ಪದವೀಧರ ಡಾ.ಅಮಿತ ವಿಜಯಕುಮಾರ ಗಾಯಕವಾಡ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ವೈದ್ಯಕೀಯ ಸಂಶೋಧನಾ ಕೇಂದ್ರ(ಬಿಮ್ಸ್‌)ದಲ್ಲಿ ಸಹಾಯಕ ಪ್ರೊಫೆಸರ್‌ ಆಗಿರುವ ಈತ ರಕ್ತ ಭಂಡಾರದ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾನೆ. ನಾಲ್ಕು ದಿನಗಳ ಅವಧಿಯಲ್ಲಿ ಒಟ್ಟು 20 ಐಷಾರಾಮಿ ಕಾರುಗಳು ಡಾಕ್ಟರ್‌ನ ಕರ್ಪೂರದ ಬೆಂಕಿಗೆ ಆಹುತಿಯಾಗಿವೆ. ಶ್ರೀಮಂತರ ಕಾರುಗಳ ಮೇಲೆಯೇ ಈತ ವಕ್ರದೃಷ್ಟಿ ಬೀರಿದ್ದು ಏಕೆ ಎಂಬ ಬಗ್ಗೆ ಇನ್ನೂ ಬಾಯಿ ಬಿಟ್ಟಿಲ್ಲ. ಜತೆಗೆ ತಾನೇ ಬೆಂಕಿ ಹಚ್ಚಿರುವುದನ್ನೂ ಒಪ್ಪಿಕೊಳ್ಳಲು ಸಿದ್ಧನಿಲ್ಲ.

ಸಿಕ್ಕಿ ಬಿದ್ದಿದ್ದು ಹೇಗೆ?: ಐಷಾರಾಮಿ ಕಾರುಗಳಾದ ಬಿಎಂಡಬ್ಲ್ಯು, ಇನ್ನೋವಾ, ಐ-20, ಐ-10, ವೆರ್ನಾ, ಎರ್ಟಿಗಾ ಮುಂತಾದ ಕಾರುಗಳಿಗೆ ಬೆಂಕಿ ಹಚ್ಚುವ ಚಾಳಿಯನ್ನು ಈತ ಪ್ರಾರಂಭಿಸಿದ್ದ. ಬುಧವಾರ ಒಂದೇ ದಿನ ನಗರದಲ್ಲಿ ಒಟ್ಟು 10 ಕಾರುಗಳಿಗೆ ಬೆಂಕಿ ಹಚ್ಚಿದ್ದ ಈ ವೈದ್ಯ ರಾತ್ರಿ 9 ಗಂಟೆ ಸುಮಾರಿಗೆ ಮತ್ತೂಂದು ಕಾರಿಗೆ ಕರ್ಪೂರ ಇಟ್ಟು ಬೆಂಕಿ ಹಚ್ಚುವ ವೇಳೆ ವಾಚ್‌ಮನ್‌ ಗಂಗನಗೌಡ ಪಾಟೀಲಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಾಗ ಪ್ರಕರಣ ಬೆಳಕಿಗೆ ಬೆಂದಿದೆ.

ಬೆಳಗಾವಿಯಲ್ಲಿ ಅಷ್ಟೇ ಅಲ್ಲದೆ ಕಲಬುರ್ಗಿಯಲ್ಲೂ ಸಂಕ್ರಾಂತಿ ಹಬ್ಬಕ್ಕೆಂದು ಹೋದಾಗ ಎರಡು ದಿನಗಳ ಅವಧಿಯಲ್ಲಿ 10 ಕಾರುಗಳಿಗೆ ಬೆಂಕಿ ಹಚ್ಚಿದ್ದಾನೆ. ಎಲ್ಲ ಕಾರುಗಳ ಬೊನೆಟ್‌ ಹಾಗೂ ವೈಪರ್‌ನ ಮಧ್ಯ ಭಾಗದಲ್ಲಿ ಕರ್ಪೂರ ಇಟ್ಟು ಲೈಟರ್‌ ಮೂಲಕ ಬೆಂಕಿ ಹಚ್ಚಿರುವುದರಿಂದ ಬೆಳಗಾವಿ ಹಾಗೂ ಕಲಬುರ್ಗಿಯ ಪ್ರಕರಣಗಳಿಗೆ ಸಾಮ್ಯತೆ ಕಂಡು ಬಂದು ತನಿಖೆ ವೇಳೆ ಬಯಲಾಗಿದೆ.

ವಾಚ್‌ಮನ್‌ ಕೈಗೆ ಸಿಕ್ಕಿಬಿದ್ದ: ಜ.17ರಂದು ಬೆಳಗಿನ ಜಾವ 3:50ರಿಂದ 5 ಗಂಟೆ ಒಳಗಾಗಿ ಜಾಧವ ನಗರದಲ್ಲಿ 7 ಕಾರುಗಳು ಬೆಂಕಿಗಾಹುತಿಯಾಗಿವೆ. ನಂತರ ಅದೇ ದಿನ ಸಂಜೆ 7 ಗಂಟೆ ಸುಮಾರಿಗೆ ಕ್ಯಾಂಪ್‌ ಪ್ರದೇಶದ ಎರಡು ಹಾಗೂ ವಿಶ್ವೇಶ್ವರಯ್ಯ ನಗರದಲ್ಲಿ ಒಂದು ಕಾರಿಗೆ ಬೆಂಕಿ ಹಚ್ಚಿದ್ದಾನೆ. ಇದೇ ಪ್ರದೇಶದ ಯುವೆಂತಾ ಅಪಾರ್ಟ್‌ಮೆಂಟ್‌ ಬಳಿ ನಿಲ್ಲಿಸಿದ್ದ ಕಾರಿನ ಬಳಿ ಕರ್ಪೂರ ಇಟ್ಟಾಗ ಸಂಶಯಗೊಂಡು ವಾಚ್‌ಮನ್‌ ವಿಚಾರಿಸಿದ. ಆಗ ಡಾ.ಅಮಿತ ಉತ್ತರಿಸಲು ತಡವರಿಸಿದಾಗ ಜನರನ್ನು ಕೂಡಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ. ಹೆಲ್ಮೆಟ್‌ ಧರಿಸಿಯೇ ಕೃತ್ಯ ಎಸಗಿರುವುದನ್ನು ಪ್ರತ್ಯಕ್ಷದರ್ಶಿಗಳು ಕಂಡಿದ್ದಾರೆ.

29 ರವರೆಗೆ ನ್ಯಾಯಾಂಗ ಬಂಧನ: ಬಂಧಿತ ಡಾಕ್ಟರ್‌ ಅಮಿತ ಗಾಯಕವಾಡನನ್ನು ಗುರುವಾರ ಸಂಜೆಯೇ ನಾಲ್ಕನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜ.29ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ವೈದ್ಯರ ಕಾರುಗಳೇ ಟಾರ್ಗೆಟ್‌
ಮೂಲತಃ ವೈದ್ಯ ಕುಟುಂಬದಿಂದ ಬಂದ ಡಾ.ಅಮಿತನ ತಂದೆ ಆರ್‌ಎಂಒ ವೈದ್ಯ. ಈತನ ಸಹೋದರ ಹಾಗೂ ಚಿಕ್ಕಪ್ಪ ಕೂಡ ವೈದ್ಯರೇ. ಎಂಡಿ ಪದವಿ ಮುಗಿಸಿ ಬಿಮ್ಸ್‌ಗೆ ನೌಕರಿಗೆ ಸೇರಿದ ಡಾ.ಅಮಿತ ಕೆಲವು ದಿನಗಳಿಂದ ಖನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಕಲಬುರಗಿಯಲ್ಲಿ ಬೆಂಕಿಗೆ ಆಹುತಿಯಾದ 10 ಕಾರುಗಳ ಪೈಕಿ 7 ಕಾರುಗಳು ವೈದ್ಯರಿಗೇ ಸೇರಿದ್ದಾಗಿವೆ. ಜತೆಗೆ ಬೆಳಗಾವಿಯಲ್ಲಿ ಶಾಸಕ ಫಿರೋಜ್‌ ಸೇs…  ಸಹೋದರ ಸೇರಿದಂತೆ ಎಲ್ಲ ಶ್ರೀಮಂತರ ದುಬಾರಿ ಕಾರುಗಳು ಭಸ್ಮವಾಗಿವೆ.

ಟಾಪ್ ನ್ಯೂಸ್

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.