ಫೆ.20ರೊಳಗೆ ಪಿಯು ಪ್ರಾಯೋಗಿಕ ಪರೀಕ್ಷೆ
Team Udayavani, Jan 14, 2017, 3:45 AM IST
ಬೆಂಗಳೂರು: ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಷಯಗಳ ವಿದ್ಯಾರ್ಥಿಗಳಿಗೆ ಪದವಿಪೂರ್ವ ಕಾಲೇಜುಗಳು ಫೆ.2ರಿಂದ 20ರೊಳಗೆ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.
ಪ್ರಾಯೋಗಿಕ ಪರೀಕ್ಷೆಗೆ ಸಂಬಂಧಿಸಿದ ಉತ್ತರ ಪತ್ರಿಕೆಗಳು, ಒಎಂಆರ್ ಅಂಕಪಟ್ಟಿಗಳು, ವಿದ್ಯಾರ್ಥಿಗಳ ಪಟ್ಟಿ ಹಾಗೂ ಲೇಖನ ಸಾಮಗ್ರಿಗಳನ್ನು ಜಿಲ್ಲಾ ಉಪ ನಿರ್ದೇಶಕರ ಮೂಲಕ ಆಯಾ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಲಾಗುವುದು. 2010ರ ಸ್ಥಾಯಿಸೂಚನೆಯ ಕೈಪಿಡಿಯಲ್ಲಿ ಸೂಚಿಸಿರುವಂತೆ ಹಾಗೂ ಹೊಸ ಪಠ್ಯಕ್ರಮಕ್ಕೆ ಸೂಚಿಸಿರುವ ಅಂಕಗಳ ಮರುವಿನ್ಯಾಸವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ನಡೆಸಬೇಕು ಎಂದು ಇಲಾಖೆ ಸೂಚಿಸಿದೆ.
ಪ್ರಯೋಗಗಳಿಗೆ 20 ಅಂಕ, ಪ್ರಾಕ್ಟಿಕಲ್ ರೆಕಾರ್ಡ್ 6 ಅಂಕ ಸೇರಿದಂತೆ ಒಟ್ಟು 30 ಅಂಕಗಳಿಗೆ ಪ್ರಾಯೋಗಿಕ ಪರೀಕ್ಷೆ ಇರುತ್ತದೆ. ಒಎಂಆರ್ ಅಂಕಪಟ್ಟಿಗಳಲ್ಲಿನ ಅಂಕಗಳನ್ನೇ ಸ್ಕ್ಯಾನ್ ಮಾಡಲಾಗುವುದರಿಂದ ಆಂತರಿಕ ಹಾಗೂ ಬಾಹ್ಯ ಮೌಲ್ಯಮಾಪಕರು ಕಪ್ಪು ಬಾಲ್ ಪಾಯಿಂಟ್ ಪೆನ್ನುಗಳನ್ನೇ ಉಪಯೋಗಿಸಬೇಕು. ವಿದ್ಯಾರ್ಥಿಗಳು ಶೇಡಿಂಗ್ ಮಾಡುವಾಗ ಎಚ್ಚರವಹಿಸಬೇಕು ಎಂದು ಪಿಯು ಇಲಾಖೆ ನಿರ್ದೇಶಕಿ ಶಿಖಾ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.