ಪಬ್, ಕೆಫೆಗಳ ಮೇಲೆ 24 ಗಂಟೆ ನಿಗಾಗೆ ಶಿಫಾರಸು
Team Udayavani, Mar 24, 2018, 10:21 AM IST
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ “ಮೋಜು-ಮಸ್ತಿ’ ನಡೆಸುವ ಪಬ್, ಫರ್ಜಿ ಕೆಫೆ, ಕಾಫಿ ಬಾರ್ ಹಾಗೂ ಐಷಾರಾಮಿ ಹೋಟೆಲ್‌ಗಳ ಮೇಲೆ ದಿನದ 24 ಗಂಟೆ ಪೊಲೀಸರು ನಿಗಾ ಇಡಬೇಕು ಎಂದು ವಿ.ಎಸ್.ಉಗ್ರಪ್ಪ ನೇತೃತ್ವದ “ಮಹಿಳೆಯರು ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ತಡೆ ಮತ್ತು ವರದಿ ನೀಡುವ ತಜ್ಞರ ಸಮಿತಿ’ ಶಿಫಾರಸು ಮಾಡಿದೆ.
ಜತೆಗೆ ಇವುಗಳಿಗೆ ಪ್ರತಿ ದಿನ ಬೆಳಗ್ಗೆ 10ರಿಂದ ರಾತ್ರಿ 11 ಗಂಟೆವರೆಗೆ ಮಾತ್ರ ತೆರೆಯಲು ಅವಕಾಶ ಕೊಡುವ ನಿಟ್ಟಿನಲ್ಲಿ ನಿಯಮ ರೂಪಿಸಬೇಕು. ಅಲ್ಲದೇ ಅಲ್ಲಿಗೆ ಭೇಟಿ ನೀಡುವ ಸಾರ್ವಜನಿಕರ ರಕ್ಷಣೆಯ ಪೂರ್ಣ ಜವಾಬ್ದಾರಿ ಆಯಾ ಕೇಂದ್ರಗಳನ್ನು ನಡೆಸುವ ಮಾಲೀಕರ ಹೊಣೆ ಎಂಬ ಶರತ್ತಿನೊಂದಿಗೆ ಪರವಾನಗಿ ನೀಡಬೇಕು. ಶರತ್ತು ಉಲ್ಲಂ ಸಿದ ಕೇಂದ್ರಗಳ ಪರವಾನಗಿ ರದ್ದುಗೊಳಿಸಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಐಟಿ-ಬಿಟಿ ಸಂಸ್ಥೆಗಳಲ್ಲಿ ಕೆಲಸ ಮಾಡವ ಹಾಗೂ ಇನ್ನಿತರ ಕಾರಣಗಳಿಂದ ರಾತ್ರಿ 10 ಗಂಟೆ ನಂತರ ಹೆಣ್ಣು ಮಕ್ಕಳನ್ನು ಕೊಂಡೊಯ್ಯುವ ಖಾಸಗಿ ಬಾಡಿಗೆ ಕ್ಯಾಬ್‌ಗಳ ತಪಾಸಣೆ ಹಾಗೂ ನಿಗಾವಹಿಸುವ ಪೊಲೀಸ್ ಬೀಟ್ ವ್ಯವಸ್ಥೆ ಜಾರಿಗೆ ತರಬೇಕು. ಚಾಲಕರು ಅಥವಾ ಇತರ ಸಿಬ್ಬಂದಿಯಿಂದ ದೃಷ್ಕೃತ್ಯಗಳು ನಡೆದರೆ ವಾಹನಗಳ ಮಾಲೀಕರು ಹಾಗೂ ಟ್ರಾವೆಲ್ಸ್ ಕಚೇರಿ ಮಾಲೀಕರನ್ನು ಹೊಣೆಗಾರರನ್ನಾಗಿ ಮಾಡಲು ಕಾನೂನು ರೂಪಿಸಬೇಕು. ಐಟಿ, ಬಿಟಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕು. ನಗರದ ಎಲ್ಲ “ಪೇಯಿಂಗ್ ಗೆಸ್ಟ್’ (ಪಿ.ಜಿ)ಗಳ ಮಾಹಿತಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಸಲ್ಲಿಸುವುದು ಕಡ್ಡಾಯಗೊಳಿಸಬೇಕು. ಪಿ.ಜಿ. ಕೇಂದ್ರಗಳಲ್ಲಿ ಭದ್ರತಾ ವ್ಯವಸ್ಥೆ ಕಡ್ಡಾಯ, ಹೆಣ್ಣು ಮಕ್ಕಳ ಮೇಲೆ ಶೋಷಣೆ, ಲೈಂಗಿಕ ದೌರ್ಜನ್ಯ ನಡೆದರೆ ಕೃತ್ಯ ಎಸಗಿದವರ ಜತೆಗೆ ಪಿ.ಜಿ. ಮಾಲೀಕರ ವಿರುದ್ಧವೂ ಕಾನೂನು ಕ್ರಮ ಜರುಗಿಸಲು ನಿಯಮಗಳನ್ನು ರೂಪಿಸಬೇಕು. ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಡ್ಡಾಯಗೊಳಿಸಬೇಕು ಎಂದು ಶಿಫಾರಸು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.