ಜನವರಿಗೆ ಮುನ್ನ ಪ್ರಕಾಶಕರ ಸಮ್ಮೇಳನ
Team Udayavani, Dec 1, 2017, 1:31 PM IST
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದಿಂದ ಇದೇ ಮೊದಲ ಬಾರಿ ಪುಸ್ತಕ ಪ್ರಕಾಶಕರ ಸಮ್ಮೇಳನ ಆಯೋಜಿಸುತ್ತಿರುವುದಾಗಿ ಪ್ರಾಧಿಕಾರ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಹೇಳಿದ್ದಾರೆ.
ಗುರುವಾರ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಮ್ಮಿಕೊಂಡಿದ್ದ ಅಂತರ್ಜಾಲದಲ್ಲಿ ಪುಸ್ತಕ ಮಾರಾಟ ವ್ಯವಸ್ಥೆ ಉದ್ಘಾಟನೆ, ಉಚಿತ ಪುಸ್ತಕ ವಿತರಣೆ, ವಿದ್ಯಾರ್ಥಿಗಳಿಗೆ ರಸಪ್ರಶೆ,°ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡ ಪುಸ್ತಕ ಪ್ರಾಧಿಕಾರ ಕಳೆದ 24 ವರ್ಷಗಳಿಂದ ಪುಸ್ತಕ ಪ್ರಕಟಣೆಗೆ ಸೀಮಿತವಾಗದೆ, ಅತ್ಯುತ್ತಮ ಪುಸ್ತಕಗಳನ್ನು ಪ್ರಕಾಶಕರಿಂದ ಖರೀದಿಸಿ, ಗಡಿನಾಡು ಮತ್ತು ಒಳನಾಡಿನ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತವಾಗಿ ವಿತರಿಸುತ್ತಿದೆ.
ಈ ನಡುವೆ ಪ್ರಕಾಶಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಡಿಸೆಂಬರ್ ಅಥವಾ ಜನವರಿಯಲ್ಲಿ ಪ್ರಕಾಶಕರ ಸಮ್ಮೇಳನ ಆಯೋಜಿಸಲಿದ್ದು, ಸಮಸ್ಯೆಗಳ ಕುರಿತು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದರು.
ಕಾಮಧೇನು ಪ್ರಕಾಶನದ ಡಿ.ಕೆ.ಶ್ಯಾಮಸುಂದರ್ ಮಾತನಾಡಿ, ಪುಸ್ತಕ ಪ್ರಕಾಶಕರಿಗೆ ಮಾನ್ಯತೆಯೇ ಇಲ್ಲ. ಸರ್ಕಾರ, ಸಂಘ ಸಂಸ್ಥೆಗಳು ಕೂಡ ಅವರನ್ನು ನಿರ್ಲಕ್ಷಿéಸಿವೆ. ಪ್ರಕಾಶಕರಿಗೆ ಅನುಕೂಲ ಒದಗಿಸಿಕೊಟ್ಟರೆ, ಅಕ್ಷರ ಕ್ಷೇತ್ರಕ್ಕೆ ಇನ್ನೂ ಹೆಚ್ಚು ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ಆದರೆ, ಅವರನ್ನು ಅವಕಾಶ ವಂಚಿತರನ್ನಾಗಿ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
“ಥಟ್ ಅಂತ ಹೇಳಿ’ ಖ್ಯಾತಿಯ ಡಾ.ನಾ.ಸೋಮೇಶ್ವರ ಮಾತನಾಡಿ, ಓದಿದ್ದೆಲ್ಲಾ ಅರ್ಥವಾಗದೇ ಇರಬಹುದು. ಆದರೆ, ಗೊತ್ತಿಲ್ಲದಿರುವ ಅದೇಷ್ಟೋ ಸಂಗತಿಗಳನ್ನು ಓದಿನಿಂದ ತಿಳಿದುಕೊಳ್ಳಬಹುದು.
ಆದ್ದರಿಂದ ಯಾವುದೇ ಪುಸ್ತಕ ಸಂಪರ್ಕಕ್ಕೆ ಬಂದರೂ ಅದನ್ನು ಓದಬೇಕು. ಅರಿವು ಎಷ್ಟು ವಿಶಾಲವಾಗಿದೆ ಎಂದರೆ ಅದನ್ನು ತಿಳಿಯಲು ಒಂದು ಜನ್ಮ ಸಾಕಾಗುವುದಿಲ್ಲ. ಹಾಗಾಗಿ ಎಷ್ಟು ಸಾಧ್ಯವೋ ಅಷ್ಟು ಓದುವ, ತಿಳಿದುಕೊಳ್ಳುವ ತ್ಸಾಹ ಹೊಂದಬೇಕು ಎಂದರು.
ಕನ್ನಡ ಪುಸ್ತಕ ಪ್ರಾಧಿಕಾರ ಹಮ್ಮಿಕೊಂಡಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಬೆಂಗಳೂರಿನ 16 ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಡಾ.ನಾ.ಸೋಮೇಶ್ವರ ಅವರು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಇದೇ ವೇಳೆ ಪ್ರಾಧಿಕಾರದ 600 ಶೀರ್ಷಿಕೆಗಳ ಪುಸ್ತಕಗಳನ್ನು ಅಂತರ್ಜಾಲದಲ್ಲಿ ಮಾರಾಟ ಮಾಡುವ ವ್ಯವಸ್ಥೆಗೆ ಚಾಲನೆ ನೀಡಲಾಯಿತು.
ಪುಸ್ತಕ ಇರುವುದು ಪೂಜೆಗಲ್ಲ: ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಮಾತನಾಡಿ, ಪುಸ್ತಕಗಳಿಗೆ ಸರಸ್ವತಿ ಸ್ಥಾನ ನೀಡಲಾಗಿದೆ. ಹಾಗಂತಾ ಅವುಗಳಿಗೆ ದಿನವೂ ಪೂಜೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ.
ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ. ಕಲಿಯಲು ವಯಸ್ಸಿನ ಭೇದವಿಲ್ಲ. ಆಯಾ ಕಾಲಘಟ್ಟದಲ್ಲಿ ಆಗುವ ಬದಲಾವಣೆಗೆ ತಕ್ಕಂತೆ ನಾವು ಹೊಂದಿಕೊಂಡು ಹೋಗಬೇಕು. ಈ ನಿಟ್ಟಿನಲ್ಲಿ ಅಂತರ್ಜಾಲದಲ್ಲಿ ಪುಸ್ತಕ ಮಾರಾಟ ವ್ಯವಸ್ಥೆಗೆ ಮುಂದಾಗಿರುವ ಪುಸ್ತಕ ಪ್ರಾಧಿಕಾರದ ಕ್ರಮ ಸ್ವಾಗತಾರ್ಹ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.