Puneeth Kerehalli: ಜಾತಿ ನಿಂದನೆ; ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ
Team Udayavani, Nov 5, 2023, 11:12 AM IST
ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆ ಕೆರೆಹಳ್ಳಿ ವಿರುದ್ಧ ಕನ್ನಡಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ಸಂಪಿಗೆಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು.
ಮತ್ತೆ ಜೈಲು ಸೇರಿದ ಪುನೀತ್: ಪುನೀತ್ ಕೆರೆಹಳ್ಳಿಯನ್ನು ಇತ್ತೀಚೆಗೆ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದರು. ಅದನ್ನು ಪ್ರಶ್ನಿಸಿದ ಪುನೀತ್ ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಕೋರ್ಟ್ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಸಲಹಾ ಸಮಿತಿರಚಿಸಿತ್ತು. ಆ ನಂತರ ಪುನೀತ್ ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ವರದಿಯಲ್ಲಿ ಸಲಹಾ ಸಮಿತಿ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೀಗಾಗಿ ಪುನೀತ್ ಕೆರೆಹಳ್ಳಿಯನ್ನು ಬಂಧನದಿಂದ ಸರ್ಕಾರ ಮುಕ್ತಗೊಳಿಸಿತ್ತು. ಇದೀಗ ಮತ್ತೂಂದು ಪ್ರಕರಣದಲ್ಲಿ ಜೈಲು ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.