Puneeth kerehalli: ನಾಯಿ ಮಾಂಸ ಗಲಾಟೆ; ಪುನೀತ್ ಬಂಧನ
Team Udayavani, Jul 28, 2024, 11:36 AM IST
ಬೆಂಗಳೂರು: ನಾಯಿ ಹಾಗೂ ಇತರೆ ಪ್ರಾಣಿಗಳ ಮಾಂಸವನ್ನು ರಾಜಸ್ಥಾನದಿಂದ ರೈಲಿನಲ್ಲಿ ನಗರಕ್ಕೆ ತಂದು ಪ್ರತಿಷ್ಠಿತ ಹೋಟೆಲ್ ಸೇರಿ ಗ್ರಾಹಕರಿಗೆ ಪೂರೈಸಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರಾಜಸ್ಥಾನದ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಾಗೆಯೇ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಹಾಗೂ ಸಾರ್ವಜನಿಕರಿಗೆ ತೊಂದರೆ ಕೊಟ್ಟ ಆರೋಪದಡಿ 2 ಎಫ್ಐಆರ್ ದಾಖಲಾಗಿದೆ. ಜೊತೆಗೆ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಶುಕ್ರವಾರ ಸಂಜೆ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಜೈಪುರ- ಮೈಸೂರು ಎಕ್ಸ್‌ಪ್ರೆಸ್ ರೈಲಿನಲ್ಲಿ 120 ಬಾಕ್ಸ್‌ಗಳಲ್ಲಿ ಅಂದಾಜು 4,500 ಕೆ.ಜಿ ಮಾಂಸ ತರಲಾಗಿತ್ತು. ಅದರಲ್ಲಿ ನಾಯಿ ಮಾಂಸವನ್ನು ಮಿಶ್ರ ಮಾಡಿ ತರಲಾಗಿದೆ ಎಂದು ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಗುಂಪೊಂದು ಪ್ರತಿಭಟನೆ ನಡೆಸಿತ್ತು. ಸ್ಥಳಕ್ಕೆ ಬಂದಿದ್ದ ಪೊಲೀಸರು ಪರಿಶೀಲಿಸಿ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳನ್ನು ಕರೆಸಿದ್ದರು. ಅವರು ಮಾಂಸದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ರಾಜಸ್ಥಾನದಿಂದ ನಗರಕ್ಕೆ ಮಾಂಸ ಕಳುಹಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಂಡಿದ್ಧಾರೆ.
ಸಂಬಂಧಿಸಿದ ವ್ಯಕ್ತಿಯನ್ನು ಪತ್ತೆ ಮಾಡಿ ನೋಟಿಸ್ ಕಳುಹಿಸಿ ವಿಚಾರಣೆ ನಡೆಸಲಾಗುವುದು. ಕೆಲವೇ ದಿನಗಳಲ್ಲಿ ಆಹಾರ ಸುರಕ್ಷತೆ ಇಲಾಖೆ ವರದಿಯೂ ಬರಲಿದ್ದು, ನಗರಕ್ಕೆ ಬಂದಿದ್ದು ಯಾವ ಪ್ರಾಣಿ ಮಾಂಸ ಎಂಬುದು ತಿಳಿಯಲಿದೆ ಎಂದು ಪೊಲೀಸರು ಹೇಳಿದರು.
ಪುನೀತ್ ಕೆರೆಹಳ್ಳಿ ಅಸ್ವಸ್ಥ: ಪುನೀತ್ ಕೆರೆಹಳ್ಳಿ ವಿರುದ್ಧ ಎರಡು ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ. ಈ ಸಂಬಂಧ ಕಾಟನ್‌ಪೇಟೆ ಪೊಲೀಸರು, ಶುಕ್ರವಾರ ತಡರಾತ್ರಿ ಬಂಧಿಸಿದ್ದರು. ಆದರೆ, ತಡರಾತ್ರಿ ಠಾಣೆಯಲ್ಲಿ ಆತ ಅಸ್ವಸ್ಥಗೊಂಡಿದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಣಮುಖರಾದ ಬಳಿಕ ಆತತನ್ನು ಕೋರ್ಟ್‌ಗೆ ಹಾಜರು ಪಡಿಸಲಾಗುತ್ತದೆ ಎಂದು ಪೊಲೀಸರು ಹೇಳಿದರು.
ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್ ಹಲ್ಲೆ: ಕಮಿಷನರ್‌ಗೆ ಹಿಂದೂ ಸಂಘಟನೆ ದೂರು:
ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಮೇಲೆ ಕಾಟನ್‌ಪೇಟೆ ಎಸಿಪಿ ಚಂದನ್ ಕುಮಾರ್ ದೌರ್ಜನ್ಯ ಎಸೆಗಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಎಸಿಪಿ ಚಂದನ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ ಮುಖಂಡರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ಶನಿವಾರ ದೂರು ನೀಡಿದ್ದಾರೆ.
ಎಸಿಪಿ ಚಂದನ್ ಕುಮಾರ್ ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ ಮಾಡಿದ್ದಾರೆ. ಪುನೀತ್ ಕೆರೆಹಳ್ಳಿ ಅವರನ್ನು ನಗ್ನಗೊಳಿಸಿ ವಿಡಿಯೋ ಮಾಡಿಕೊಂಡಿದ್ದಾರೆ. ನಿನ್ನ ನಾಟಕ ಜಾಸ್ತಿಯಾಗಿದೆ. ಇನ್ನು ಮುಂದೆ ಇದೆಲ್ಲಾ ನಡೆಯುವುದಿಲ್ಲ. ಜಾಸ್ತಿ ನಾಟಕ ಮಾಡಿದರೆ ನಿನ್ನ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತೇನೆ’ ಎಂದು ಅಪಮಾನಿಸಿದ್ದಾರೆ. ಅಲ್ಲದೆ, ಪುನೀತ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ದೂರು ನೀಡಿದ್ದಾರೆ. ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟದ ಮುಖಂಡರಾದ ಮೋಹನ ಗೌಡ, ವಕೀಲ ಪ್ರಸನ್ನ, ಶರತ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.