ಪರರಿಗೆ ವೋಟರ್ ಐಡಿ ನೀಡಿದರೆ ಶಿಕ್ಷೆ
Team Udayavani, Feb 17, 2019, 6:23 AM IST
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಗುರುತಿನ ಚೀಟಿ ವಿತರಿಸಲಾಗುತ್ತಿದ್ದು, ಕುಟುಂಬದ ಸದಸ್ಯರಲ್ಲದವರಿಗೆ ಗುರುತಿನ ಚೀಟಿ ನೀಡುವುದು ಹಾಗೂ ಬೇರೆಯವರ ಗುರುತಿನ ಚೀಟಿ ಪಡೆಯುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದರು.
ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಕೈಗೊಂಡಿರುವ ಚುನಾವಣಾ ಪೂರ್ವ ಸಿದ್ಧತೆಗಳ ಕುರಿತು ಶನಿವಾರ ಸುದ್ಧಿಗೋಷ್ಠಿ ನಡೆಸಿದ ಅವರು, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಭಾರೂ ಪ್ರಮಾಣದಲ್ಲಿ ಗುರುತಿನ ಚೀಟಿಗಳನ್ನು ಸಂಗ್ರಹಿಸಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಹಾಗಾಗಿ ಈ ಬಾರಿ ಅಗ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಆಯೋಗದಿಂದ ಈಗಾಗಲೇ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿದ್ದು, ಚುನಾವಣೆ ಸಂದರ್ಭದಲ್ಲಿ ಆಮೀಷ ಒಡ್ಡುವುದು ಹಾಗೂ ಮತದಾರರ ಮೇಲೆ ಒತ್ತಡ ಹೇರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಜತೆಗೆ ಮತದಾರರ ಗುರುತಿನ ಚೀಟಿ ಸಂಗ್ರಹಿಸುವ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ವ್ಯಾಪಾಕ ಪ್ರಚಾರದ ಮೂಲಕ ಜನರಿಗೆ ಅರಿವು ಮೂಡಿಸಲಾಗುವುದು ಎಂದು ಹೇಳಿದರು.
ಪಾಲಿಕೆ ಅಧಿಕಾರಿಗಳು ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೆ ತೆರಳಿ ಮತದಾರರನ್ನು ಭೇಟಿಯಾಗಿ, ಯಾರಾದರೂ ಒತ್ತಡ ಹಾಕುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ. ಹೀಗೆ ಸಂಗ್ರಹಿಸಿದ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು. ಜತೆಗೆ ಮತದಾರರ ಮೇಲೆ ಯಾರೇ ಒತ್ತಡ ಹಾಕಿದರೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದರು.
ಪಾಲಿಕೆ ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳಲ್ಲಿ 8,515 ಮತಗಟ್ಟೆಗಳನ್ನು ಸ್ಥಾಪಿಸಲಿದ್ದು, ಪ್ರತಿ 10-12 ಮತಗಟ್ಟೆಗಳಿಗೆ ಒಂದು ಸೆಕ್ಟರ್ ನಿರ್ಮಿಸಿ, ಸೆಕ್ಟರ್‌ಗೆ ಒಬ್ಬ ಅಧಿಕಾರಿಯನ್ನು ನೇಮಿಸಿ ಮ್ಯಾಜಿಸ್ಟ್ರೇಟ್ ಅಧಿಕಾರ ನೀಡಲಾಗುವುದು. ಅವರೊಂದಿಗೆ ಪೊಲೀಸ್ ಅಧಿಕಾರಿಗಳು ಇರಲಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂ ಸುವವರ ವಿರುದ್ಧ ಕ್ರಮಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಚುನಾವಣೆ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಿಗೆ ತಲಾ 18 ವಾಯು ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡ ಹಾಗೂ ವಿಡಿಯೋ ಕಣ್ಗಾವಲು ತಂಡಗಳನ್ನು ನೇಮಿಸಲಾಗಿದೆ. ಜತೆಗೆ ಆರು ವಿವಿಟಿ ತಂಡಗಳನ್ನು ರಚಿಸಿದ್ದು, ಒಟ್ಟು 410 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅದರಂತೆ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 36,97,211 ಪುರುಷರು, 34,03,597 ಮಹಿಳಾ ಮತದಾರರು ಹಾಗೂ 703 ಇತರೆ ಮತದಾರರೂ ಸೇರಿದಂತೆ ಒಟ್ಟು 71,01,561 ಮತದಾರರು ಪಟ್ಟಿಯಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.
ಗೈರು ಮತದಾರರ ಪರಿಶೀಲನೆ: ಪಾಲಿಕೆ ಅಧಿಕಾರಿಗಳು ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಿಸಿದ್ದು, ಎಲ್ಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೃತಪಟ್ಟ ಮತದಾರರ ಹೆಸರನ್ನು ತೆಗೆದಿದ್ದಾರೆ. ಅದರಂತೆ ಚುನಾವಣೆಗೆ ಮೊದಲು ಮತ್ತೂಮ್ಮೆ ಬೂತ್ ಮಟ್ಟದ ಅಧಿಕಾರಿಗಳು ಮನೆಮನೆಗೆ ತೆರಳಿ ಮತದಾರರ ಮಾಹಿತಿ ಕಲೆಹಾಕಲಿದ್ದು,
ಮೃತಪಟ್ಟ ಮತದಾರರ ಹೆಸರಿನ ಮುಂದೆ “ಡಿ’ ಎಂದು, ಸ್ಥಳಾಂತರಗೊಂಡಿದ್ದರೆ “ಎಸ್’ ಹಾಗೂ ಮತದಾನದಲ್ಲಿ ಹಲವು ಬಾರಿ ಗೈರಾಗಿದ್ದರೆ “ಎ’ ಎಂದು ಬರೆಯಲಿದ್ದಾರೆ. ಅದನ್ನು ಆಧಾರಿಸಿ ಮತದಾನ ಸಂದರ್ಭದಲ್ಲಿ ಈ ಸಂಕೇತವಿರುವ ಮತದಾರರನ್ನು ಚುನಾವಣಾಧಿಕಾರಿಗಳು ಎರಡೆರಡು ಬಾರಿ ಪರಿಶೀಲಿಸುತ್ತಾರೆ ಎಂದು ಆಯುಕ್ತರು ಹೇಳಿದರು.
51 ಸಾವಿರ ಮಂದಿ ಸಿಬ್ಬಂದಿ ನಿಯೋಜನೆ: ಮೂರು ಲೋಕಸಭಾ ಕ್ಷೇತ್ರಗಳಲ್ಲಿನ ಚುನಾವಣೆಗೆ ಒಟ್ಟು 51 ಸಾವಿರ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದು, ಈಗಾಗಲೇ ಅವರಿಗೆ ತರಬೇತಿ ನೀಡುವ ಕಾರ್ಯ ಆರಂಭಿಸಲಾಗಿದೆ. ಕಳೆದ ಬಾರಿ ವಿವಿಪ್ಯಾಟ್ ಯಂತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ವೀಕ್ಷಿಸಲು ಹೆಚ್ಚುವರಿಯಾಗಿ ಒಬ್ಬರು ಸಿಬ್ಬಂದಿ ನೇಮಿಸಿದ್ದರಿಂದ ಒಟ್ಟು 65 ಸಾವಿರ ಸಿಬ್ಬಂದಿ ನೇಮಿಸಿಕೊಳ್ಳಲಾಗಿತ್ತು. ಆದರೆ, ಈ ಬಾರಿ ಮತಗಟ್ಟೆ ಅಧಿಕಾರಿಯೇ ಅದರ ಉಸ್ತುವಾರಿ ವಹಿಸಿಕೊಳ್ಳಬೇಕಿರುವುದರಿಂದ ಸಿಬ್ಬಂದಿ ಸಂಖ್ಯೆ ಕಡಿಮೆಯಾಗಿದೆ ಎಂದು ಮಾಹಿತಿ ನೀಡಿದರು.
ವಿವಿಪ್ಯಾಟ್ ಪ್ರಾತ್ಯಾಕ್ಷಿಕೆ: ಚುನಾವಣೆಗೆ ಮೊದಲು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರದ ಪ್ರಮುಖ ಉದ್ಯಾನಗಳು, ಮಾಲ್‌ಗಳು ಹಾಗೂ ಕಾಲೇಜುಗಳಲ್ಲಿ ಇವಿಎಂ-ವಿವಿಪ್ಯಾಟ್‌ಗಳ ಪ್ರಾತ್ಯಕ್ಷಿಕೆ ಆಯೋಜಿಸಲಾಗುವುದು. ಜತೆಗೆ ಪರರಿಗೆ ಗುರುತಿನ ಚೀಟಿ ನೀಡುವುದು ದಂಡಾರ್ಹ ಅಪರಾಧ ಎಂಬ ಕುರಿತ ಕಿರುಚಿತ್ರಗಳನ್ನು ಚಿತ್ರಮಂದಿರಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ಆಯುಕ್ತರು ಹೇಳಿದರು.
ಮಾಹಿತಿ, ದೂರು ನೀಡಲು ಆ್ಯಪ್: ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು “ಚುನಾವಣಾ ಆ್ಯಪ್’ ಅಭಿವೃದ್ಧಿಪಡಿಸಿದ್ದು, ಮತದಾರರ ಹೆಸರು, ಮತಗಟ್ಟೆ ವಿಳಾಸ, ಕ್ರಮ ಸಂಖ್ಯೆ ಸೇರಿ ಇತರೆ ಮಾಹಿತಿ ಆ್ಯಪ್‌ನಲ್ಲಿ ದೊರೆಯಲಿದೆ ಎಂದು ಮಂಜುನಾಥ ಪ್ರಸಾದ್ ಹೇಳಿದರು.
ಇದರೊಂದಿಗೆ ಮತದಾರರ ಮೇಲೆ ಒತ್ತಡ ಹೇರುವುದು, ಹಣ ಹಂಚಿಕೆ, ಗುರುತಿನ ಚೀಟಿ ಸಂಗ್ರಹ ಸೇರಿದಂತೆ ನೀತಿ ಸಂಹಿತೆ ಉಲ್ಲಂಘನೆ ಕುರಿತು ಸಾರ್ವಜನಿಕರು “ಸಿ ವಿಜಿಲ್’ ಆ್ಯಪ್ ಮೂಲಕ ಮಾಹಿತಿ ನೀಡಬಹುದಾಗಿದೆ. ಸಾರ್ವಜನಿಕರಿಂದ ಬಂದ ದೂರುಗಳು ನೇರವಾಗಿ ಸಂಬಂಧಿಸಿದ ಚುನಾವಣಾ ಅಧಿಕಾರಿಗೆ ರವಾನೆಯಾಗಲಿದ್ದು, ಅವರು ನಿಯಮ ಉಲ್ಲಂ ಸಿದವರ ವಿರುದ್ಧ ಕ್ರಮಕೈಗೊಳ್ಳಲಿದ್ದಾರೆ.
ಇದರೊಂದಿಗೆ ಮತದಾರರು ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಮಾಹಿತಿ ಅಥವಾ ದೂರುಗಳನ್ನು ನೀಡಲು “1950′ ಉಚಿತ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.