ದಂಡದ ಹಣದಲ್ಲಿ ಹೊಸ ಹೆಲ್ಮೆಟ್‌ ಖರೀದಿ

Team Udayavani, Nov 14, 2019, 3:06 AM IST

dandada

ಬೆಂಗಳೂರು: ಬೀದಿ ನಾಟಕ, ಶಾಲಾ-ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮಗಳು ಹಾಗೂ ಯಮ ವೇಷಧಾರಿ ಹೀಗೆ ನಾನಾ ಮಾರ್ಗಗಳ ಮೂಲಕ ಸಂಚಾರ ನಿಯಮ ಪಾಲನೆ ಬಗ್ಗೆ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದ ಸಂಚಾರ ಪೊಲೀಸರು, ಇದೀಗ ಹೊಸ ಮಾದರಿಯನ್ನು ಆರಂಭಿಸಿದ್ದಾರೆ.

ಹೆಲ್ಮೆಟ್‌ ಧರಿಸದೆ ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರಿಗೆ ದಂಡ ವಿಧಿಸದೆ, ಅದೇ ಹಣದಲ್ಲಿ ಹೊಸ ಹೆಲ್ಮೆಟ್‌ ಖರೀದಿ ಮಾಡಿ, ವಾಹನ ಕೊಂಡೊಯ್ಯುವಂತೆ ಸೂಚಿಸಿದ್ದಾರೆ. ಮಡಿವಾಳ ಸಂಚಾರ ಠಾಣೆ ಪೊಲೀಸರ ಈ ಹೊಸ ಕಾರ್ಯಕ್ಕೆ ವಾಹನ ಸವಾರರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಡಿವಾಳ ಸಂಚಾರ ಠಾಣೆ ಇನ್‌ಸ್ಪೆಕ್ಟರ್‌ ಗವಿಸಿದ್ದಪ್ಪ ಮತ್ತು ಪಿಎಸ್‌ಐ ಶಿವರಾಜ್‌ ಕುಮಾರ್‌ ಅಂಗಡಿ ಮಾರ್ಗದರ್ಶನದಲ್ಲಿ ಸಂಚಾರ ಸಿಬ್ಬಂದಿ ಬುಧವಾರ ಅಪರಾಹ್ನ ಎರಡು ಗಂಟೆಗಳ ಕಾಲ ತಮ್ಮ ವ್ಯಾಪ್ತಿಯಲ್ಲಿ ಹೆಲ್ಮೆಟ್‌ ಧರಸದೆ ದ್ವಿಚಕ್ರ ವಾಹನ ಚಾಲನೆ ಮಾಡುವ ಯಾವೊಬ್ಬ ಸವಾರನಿಗೆ ದಂಡ ವಿಧಿಸಿಲ್ಲ.

ಕೈಗೆ ಗುಲಾಬಿ: ಅಲ್ಲದೆ, ಹೊಸ ಹೆಲ್ಮೆಟ್‌ ಖರೀದಿಸಿದ ಸವಾರರಿಗೆ ಪೊಲೀಸ್‌ ಸಿಬ್ಬಂದಿ ಗುಲಾಬಿ ಹೂ ನೀಡಿ. ಮುಂದೆ ಈ ರೀತಿ ತಪ್ಪುಗಳನ್ನು ಮಾಡಬೇಡಿ. ಹೆಲ್ಮೆಟ್‌ ಧರಿಸುವುದು ನಿಮ್ಮ ಹಾಗೂ ನಿಮ್ಮ ಕುಟಂಬದ ಸುರಕ್ಷತೆಗಾಗಿಯೇ ಹೊರತು ಸರ್ಕಾರ ಅಥವಾ ಪೊಲೀಸರಿಗಾಗಿ ಅಲ್ಲ ಎಂದು ಬುದ್ದಿವಾದ ಹೇಳಿ ಕಳುಹಿಸಿದ್ದಾರೆ.

ಸಂಚಾರ ಪೊಲೀಸರ ಈ ವಿಶೇಷ ಜಾಗೃತಿ ಕಾರ್ಯಕ್ರಮ ಮೆಚ್ಚುಗೆ ವ್ಯಕ್ತಪಡಿಸಿದ ಕೆಲ ವಾಹನ ಸವಾರರು ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವುಗಳು ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

ಹೆಲ್ಮೆಟ್‌ ಮಹತ್ವ ಕುರಿತು ಮಾಹಿತಿ: ಬದಲಿಗೆ ಈ ರೀತಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಎಲ್ಲ ಸವಾರರನ್ನು ಸಲಾಗಿ ನಿಲ್ಲಿಸಿ ಹೆಲ್ಮೆಟ್‌ ಮಹತ್ವ ಕುರಿತು ಮಾಹಿತಿ ನೀಡಿದ್ದಾರೆ. ಅವರ ದ್ವಿಚಕ್ರ ವಾಹನಗಳನ್ನು ಕೆಲ ಹೊತ್ತು ವಶಕ್ಕೆ ಪಡೆದುಕೊಂಡು, ತಾವು ಯಾರು ದಂಡ ಕಟ್ಟಬೇಕಾದ ಅಗತ್ಯವಿಲ್ಲ.

ಆದರೆ, ಸಮೀಪದ ಹೆಲ್ಮೆಟ್‌ ಮಾರಾಟ ಮಳಿಗೆಗೆ ಹೋಗಿ ಒಂದು ಹೊಸ ಹೆಲ್ಮೆಟ್‌ ಖರೀದಿಸಿ ತರಬೇಕು. ನಂತರ ವಾಹನ ಬಿಡಲಾಗುತ್ತದೆ ಎಂದು ಆದೇಶಿಸಿದ್ದರು. ಅದರಿಂದ ಅಚ್ಚರಿಗೊಂಡ ಕೆಲ ವಾಹನ ಸವಾರರು ಆರಂಭದಲ್ಲಿ ಆಕ್ಷೇಪ ವ್ಯಕ್ತಪಡಿಸಿದರೂ ಕೊನೆಗೆ ಸಿಬ್ಬಂದಿಯ ಮನವರಿಕೆಯಿಂದ ಹೊಸ ಹೆಲ್ಮೆಟ್‌ ಖರೀದಿಸಿದ್ದಾರೆ.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.