ಗುಣಮಟ್ಟದ ಶಿಕ್ಷಣ ಅಗತ್ಯ
Team Udayavani, Aug 3, 2017, 11:46 AM IST
ಬೆಂಗಳೂರು: ಜಾಗತಿಕ ಮಟ್ಟದ ಸ್ಪರ್ಧೆಗೆ ಅನುಗುಣವಾಗಿ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಗುಣಮಟ್ಟ ಸುಧಾರಿಸಿಕೊಂಡಾಗ, ವಿದ್ಯಾರ್ಥಿಗಳಿಗೂ ಜಾಗತಿಕವಾಗಿ ಬೆಳೆಯಲು ಪೂರಕವಾಗಲಿದೆ ಎಂದು ರಾಜ್ಯಪಾಲ ವಜುಬಾಯಿ ರೂಢಬಾಯಿ ವಾಲಾ ಅವರು ಹೇಳಿದರು. ರೇವಾ ವಿಶ್ವವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎರಡನೇ ಘಟಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಶೈಕ್ಷಣಿಕ ಗುಣಮಟ್ಟ ಸುಧಾರಿಸುತ್ತಿದೆ. ತಾಂತ್ರಿಕ ವೈಜ್ಞಾನಿಕ, ಸಂಶೋಧನೆ ಮೊದಲಾದ ವಿಷಯದಲ್ಲಿ ನಾವು ಪ್ರಗತಿ ಸಾಧಿಸುತ್ತಿದ್ದೇವೆ. ದೇಶದ ವಿಶ್ವವಿದ್ಯಾಲಯಗಳು ಜಾಗತಿಕ ಗುಣಮಟ್ಟಕ್ಕೆ ತಕ್ಕಂತೆ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಇದರ ಪೂರ್ಣ ಉಪಯೋಗ ಆಗಲಿದೆ ಎಂದರು.
ದೇಶದ ಕಾಲೇಜು, ವಿಶ್ವವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ತಾಂತ್ರಿಕ ಹಾಗೂ ವೈಜ್ಞಾನಿಕ ಮತ್ತು ಸಂಶೋಧನೆಯ ವಿಷಯದಲ್ಲಿ ದೊಡ್ಡ ಸಾಧನೆಯನ್ನೇ ಮಾಡುತ್ತಿದ್ದಾರೆ. ಶೈಕ್ಷಣಿಕ ಗುಣಮಟ್ಟದ ಆಧಾರದಲ್ಲಿ ಕೌಶಲತೆ ಹೊಂದಿರುವ ಯುವಕರ ಸಂಖ್ಯೆ ಎಷ್ಟಿದೆ ಎಂಬುದನ್ನು ಗಣತಿ ಮಾಡಿದರೆ, ಪ್ರಗತಿಯ ಪ್ರಮಾಣ ಎಷ್ಟಿದೆ ಎಂಬುದನ್ನು ಸುಲಭವಾಗಿ ಅರಿಯಬಹುದು. ಅದರ ಸುಧಾರಣೆಗೆ ಬೇಕಾದ ಕ್ರಮ ತೆಗೆದುಕೊಳ್ಳಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಯುವ ಪೀಳಿಗೆ ವಿದ್ಯಾಭ್ಯಾಸ ಪಡೆಯುತ್ತಿರುವಾಗ ಯಾವುದೇ ರೀತಿಯ ವ್ಯಸನಗಳಿಗೂ ಬಲಿಯಾಗಬಾರದು. ಒಮ್ಮೆ ಕೆಟ್ಟ ಚಟಗಳಿಗೆ ಅಂಟಿಕೊಂಡರೆ ಅದರಿಂದ ವಾಪಾಸ್ ಬರುವುದು ತುಂಬಾ ಕಷ್ಟ. ಹೀಗಾಗಿ ವಿದ್ಯಾರ್ಥಿ ಜೀವನವನ್ನು ಎಚ್ಚರಿಕೆಯಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಮುನ್ನೆಡಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ನೀಡಿದರು.
ರೇವಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಪ್ರಾಧ್ಯಾಪಕರು, ಉಪನ್ಯಾಸಕರು ಹಾಗೂ ಶಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.