ಕ್ವಾರಿ ಉದ್ಯಾನವನ ಮೆಚ್ಚಿದಮೇಯರ್‌ ಸಂಪತ್‌ರಾಜ್‌

Team Udayavani, Dec 21, 2017, 11:34 AM IST

blore-4.jpg

ಬೆಂಗಳೂರು: ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮೂಲಕ ಬಂಡೆ ಕ್ವಾರಿಯನ್ನು ಉದ್ಯಾನವಾಗಿ ಪರಿವರ್ತಿಸಿರುವ ಬಾಗಲೂರಿನ ಕ್ವಾರಿ ಪ್ರದೇಶಕ್ಕೆ ಮೇಯರ್‌ ಆರ್‌.ಸಂಪತ್‌ರಾಜ್‌ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಬಿಬಿಎಂಪಿಯ ಆರೋಗ್ಯ ವಿಭಾಗದ ಅಧಿಕಾರಿಗಳೊಂದಿಗೆ ಯಲಹಂಕ ವಲಯದ ಬೆಳ್ಳಳ್ಳಿ, ಮಿಟ್ಟಗಾನಹಳ್ಳಿ ಹಾಗೂ ಬಾಗಲೂರು ಬಂಡೆ ಕ್ವಾರಿಗಳಿಗೆ ಭೇಟಿ ನೀಡಿದ ಅವರು, ಬಂಡೆ ಕ್ವಾರಿಯನ್ನು ಉದ್ಯಾನವಾಗಿ ಪರಿವರ್ತಿಸಿರುವ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಾಗಲೂರು ಬಳಿಯ 12 ಎಕರೆ ಪ್ರದೇಶದಲ್ಲಿನ ಎರಡು ಕ್ವಾರಿಗಳನ್ನು ವೈಜ್ಞಾನಿಕವಾಗಿ ಭರ್ತಿ ಮಾಡಿ ಉದ್ಯಾನ ಹಾಗೂ ಆಟದ ಮೈದಾನ ನಿರ್ಮಿಸಲು ಯೋಜನೆ ರೂಪಿಸಿದ್ದು, ಈಗಾಗಲೇ ರಾಜ್ಯ ಸರ್ಕಾರ 16 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಎರಡು ಕ್ವಾರಿಗಳ ಪೈಕಿ ಈಗಾಗಲೇ 1.32 ಎಕರೆ ಪ್ರದೇಶದ ಕ್ವಾರಿಯನ್ನು ತ್ಯಾಜ್ಯದಿಂದ ಭರ್ತಿ ಮಾಡಿ ಉದ್ಯಾನವಾಗಿ ಪರಿವರ್ತಿಸಿದ್ದು, ನೂರಾರು ಪ್ರಭೇದದ ಗಿಡಗಳನ್ನು ನೆಟ್ಟು ಉದ್ಯಾನದ ಮಧ್ಯ ಭಾಗದಲ್ಲಿ ಲಾನ್‌ ಬೆಳೆಸಿ, ಸಾರ್ವಜನಿಕರ ಅನುಕೂಲಕ್ಕಾಗಿ ವಾಕಿಂಗ್‌ ಟ್ರ್ಯಾಕ್‌ ನಿರ್ಮಿಸಲಾಗಿದೆ.

ವೈಜ್ಞಾನಿಕ ಭೂ ಭರ್ತಿ ವಿಧಾನ : ಮೊದಲಿಗೆ ಕ್ವಾರಿಯಲ್ಲಿನ ತ್ಯಾಜ್ಯ ಹಾಗೂ ನೀರು ತೆಗೆದು, ಮಣ್ಣಿನಿಂದ ಆ ಪ್ರದೇಶವನ್ನು ಸಮತಟ್ಟುಗೊಳಿಸಲಾಗುತ್ತದೆ. ನಂತರ ತ್ಯಾಜ್ಯದಿಂದ ಸೃಷ್ಟಿಯಾಗುವ ಲೀಚೆಟ್‌ ನೀರು ಸಂಗ್ರಹಿಸಲು ಟ್ಯಾಂಕ್‌ ನಿರ್ಮಿಸಿ, ಭೂಮಿಯೊಳಗೆ ಯಾವುದೇ ರೀತಿಯ ಲೀಚೆಟ್‌ ಪ್ರವೇಶಿಸದಂತೆ ವೈಜ್ಞಾನಿಕವಾಗಿ ಕ್ಲೇ ಲೈನರ್‌, ಎಚ್‌ಡಿಪಿಇ ಮೆಂಬ್ರೇನ್‌ ಹಾಗೂ ಜಿಇಒ ಮೆಂಬ್ರೇನ್‌ ಎಂಬ ಪದರಗಳನ್ನು ಹಾಕಲಾಗುತ್ತದೆ.

ಆನಂತರದಲ್ಲಿ ನಿರಂತರವಾಗಿ ಕ್ವಾರಿ ಭರ್ತಿಯಾಗುವವರೆಗೆ ಒಂದು ಪದರ ಮಣ್ಣು, ಮತ್ತೂಂದು ಪದರ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತದೆ. ಕ್ವಾರಿ ಭರ್ತಿಯಾದ ಬಳಿಕ ತ್ಯಾಜ್ಯ ಹಾಗೂ ಮಣ್ಣು ಹದವಾಗಲು ನಾಲ್ಕು ತಿಂಗಳು ಬಿಟ್ಟು, ಮುಂದಿನ ದಿನಗಳಲ್ಲಿ ಪದರ ಕುಸಿಯದಂತೆ ಬೃಹತ್‌ ರೋಲರ್‌ ಮೂಲಕ ಪ್ರದೇಶವನ್ನು ಸಮತಟ್ಟು ಮಾಡಲಾಗುತ್ತದೆ. ಬಳಿಕ ಆದರ ಮೇಲೆ ಎರಡು ಮೀಟರ್‌ ಗುಣಮಟ್ಟದ ಮಣ್ಣು ಸುರಿದು ಹದ ಮಾಡಿ ಉದ್ಯಾನ ನಿರ್ಮಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗ್ಯಾಸ್‌ ಪೈಪ್‌ಲೈನ್‌ ಅಳವಡಿಕೆ: ಕ್ವಾರಿಯಲ್ಲಿ ಸಾವಿರಾರು ಟನ್‌ ತ್ಯಾಜ್ಯ ವಿಲೇವಾರಿ ಮಾಡುವುದರಿಂದ ಮಿಥೇನ್‌ ಗ್ಯಾಸ್‌ ಉತ್ಪತ್ತಿಯಾಗುವ ಸಾಧ್ಯತೆಯಿದೆ. ಹಾಗಾಗಿ ಕ್ವಾರಿ ಪ್ರದೇಶದಲ್ಲಿ ಉತ್ಪತ್ತಿಯಾಗುವ ಮಿಥೇನ್‌ ಗ್ಯಾಸ್‌ ಹೊರಬರಲು ವೈಜ್ಞಾನಿಕವಾಗಿ ಗ್ಯಾಸ್‌ ಪೈಪ್‌ಲೈನ್‌ಗಳನ್ನು ಅಳವಡಿಸಲಾಗಿದ್ದು, ಪೈಪ್‌ಗ್ಳ ಮೂಲಕ ಹೊರಬರುವ ಅನಿಲವನ್ನು ವಿದ್ಯುತ್‌ ಆಗಿ ಪರಿವರ್ತಿಸಲು ಅಧಿಕಾರಿಗಳು ಯೋಜನೆ ರೂಪಿಸುತ್ತಿದ್ದಾರೆ.  

ಬಾಗಲೂರಿನ ಕ್ವಾರಿಯಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡಿ 1.36 ಎಕರೆ ಪ್ರದೇಶದ ಕ್ವಾರಿಯನ್ನು ಉದ್ಯಾನವಾಗಿ ಪರಿವರ್ತಿಸಲಾಗಿದೆ. ಉಳಿದ ಕ್ವಾರಿಗಳನ್ನು ಸಹ ವೈಜ್ಞಾನಿಕವಾಗಿ ಭೂ ಭರ್ತಿ ಮಾಡಿ ಸಾರ್ವಜನಿಕರಿಗೆ
ಉಪಯೋಗವಾಗುವಂತೆ ಆಟದ ಮೈದಾನ ಅಥವಾ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುವುದು.
●ಆರ್‌.ಸಂಪತ್‌ರಾಜ್‌, ಮೇಯರ್‌  

ಟಾಪ್ ನ್ಯೂಸ್

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.