ರಾಜ್ಯದಲ್ಲೂ ಶೀಘ್ರ ಎನ್‌ಡಿಆರ್‌ಎಫ್ ಶಾಖೆ
Team Udayavani, Nov 13, 2018, 6:00 AM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಯಾವುದೇ ರೀತಿಯ ರಾಸಾಯನಿಕ ಅಸ್ತ್ರಗಳ ದಾಳಿ ನಡೆದರೆ ತಾಸುಗಟ್ಟಲೆ ಕಾಯಬೇಕಾಗಿಲ್ಲ. ಕೇವಲ ಅರ್ಧ ಗಂಟೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಲಿದೆ.
ಇಂಥದ್ದೊಂದು ವ್ಯವಸ್ಥೆ ಇನ್ನು ಬೆಂಗಳೂರಲ್ಲೇ ಕಾರ್ಯಾರಂಭ ಮಾಡಲಿದೆ. ಪ್ರಸ್ತುತ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಚೆನ್ನೈನಲ್ಲಿದ್ದು, ಈಗ ರಾಜ್ಯದಲ್ಲಿ ಮೊದಲ ಬಾರಿಗೆ ಶಾಖೆಯೊಂದನ್ನು ತೆರೆಯಲು ಮುಂದಾಗಿದೆ. ಈವರೆಗೆ ರಾಜ್ಯದಲ್ಲಿ ಏನಾದರೂ ವಿಪತ್ತು ಸಂಭವಿಸಿದರೆ ಎನ್‌ಡಿಆರ್‌ಎಫ್ ಪಡೆ ಆಗಮನಕ್ಕಾಗಿ ಆರು ತಾಸು ಕಾಯಬೇಕು. ಆದರೆ, ಈಗ ಯಲಹಂಕದಲ್ಲೇ ತನ್ನ ಶಾಖೆಯನ್ನು ತೆರೆಯಲು ನಿರ್ಧರಿಸಿದೆ. ಮುಂದಿನ ಎರಡು ವರ್ಷಗಳಲ್ಲಿ ಇದು ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ. ಇದರಿಂದ ಬೆಂಗಳೂರು ನಗರದಲ್ಲಿ ಘಟನೆ ನಡೆದ ಅರ್ಧಗಂಟೆಯಲ್ಲಿ ಈ ಸೇವೆ ಲಭ್ಯವಾಗಲಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ ವಕ್ತಾರರು ತಿಳಿಸಿದ್ದಾರೆ.
ಯಲಹಂಕದಲ್ಲಿರುವ ಗಡಿ ಭದ್ರತಾ ಪಡೆಯ ಪಕ್ಕದಲ್ಲೇ ಎನ್‌ಡಿಆರ್‌ಎಫ್ ಶಾಖೆಯನ್ನು ತೆರೆಯಲಿದ್ದು, ಭೂಸ್ವಾಧೀನ ಆಗಬೇಕಾಗಿದೆ. ಇದರಿಂದ ಸಹಜವಾಗಿ ಹತ್ತಿರದಲ್ಲಿರುವ ವಿಮಾನ ನಿಲ್ದಾಣದ ಸುರಕ್ಷತೆಗೆ ಮತ್ತಷ್ಟು ಬಲ ಬರಲಿದೆ. ಸದ್ಯ ನಿಲ್ದಾಣದಲ್ಲಿ ಸುರಕ್ಷತೆ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ತಂಡ ಇದೆ. ಯಾವುದೇ ಅಹಿತಕರ ಘಟನೆ ಸಂಭವಿಸಿದ ಕೇಲವು ನಿಮಿಷಗಳಲ್ಲಿ ನಿಲ್ದಾಣದ ಭದ್ರತಾ ತಂಡ ಸ್ಥಳಕ್ಕೆ ಧಾವಿಸಿ, ಸುರಕ್ಷತಾ ಕ್ರಮ ಕೈಗೊಳ್ಳುವಷ್ಟು ಸಾಮರ್ಥ್ಯ ಹೊಂದಲಿದೆ ಎಂದು ತಿಳಿಸಿದರು.
ಏನೇನು ತರಬೇತಿ?
ತರಬೇತಿಯಲ್ಲಿ ಸುರಕ್ಷತೆ, ತಪಾಸಣೆ ಕ್ರಮಗಳನ್ನು ಮತ್ತಷ್ಟು ಉತ್ತಮಗೊಳಿಸುವುದು, ತುರ್ತು ಸಂದರ್ಭಗಳಲ್ಲಿ ನಿಭಾಯಿಸುವುದು ಸೇರಿದಂತೆ ಹಲವು ಅಂಶಗಳ ಬಗ್ಗೆತಿಳಿಸಿಕೊಡಲಾಗುವುದು. ಈಗಾಗಲೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಕೆಲವು ಬಾರಿ ಅವುಗಳ ಪಾಲನೆ ಸಮರ್ಪಕವಾಗಿ ಆಗುವುದಿಲ್ಲ. ಉದಾಹರಣೆಗೆ ಪರ್ಫ್ಯೂಮ್ 100 ಎಂಎಲ್‌ನಷ್ಟು ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಲಾಗಿದೆ. ಆದರೆ, ವಾಸ್ತವವಾಗಿ ಇದಕ್ಕೂ ಅವಕಾಶ ನೀಡುವಂತಿಲ್ಲ ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿ ವಿಮಾನ ನಿಲ್ದಾಣದಲ್ಲಿ ಸಿಬಿಆರ್‌ಎನ್ ತುರ್ತು ನಿರ್ವಹಣೆ ಕುರಿತು ಮೂಲ ತರಬೇತಿಗೆ ಸೋಮವಾರ ಚಾಲನೆ ನೀಡಲಾಯಿತು. ಆರು ದಿನಗಳ ಕಾಲ ಈ ತರಬೇತಿ ಶಿಬಿರ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಐಎಎಲ್ ಉಪಾಧ್ಯಕ್ಷ (ಪ್ರಯಾಣಿಕರ ಅನುಭವ ಮತ್ತು ಕಾರ್ಯಾಚರಣೆ) ಗ್ಲೆನ್ ವಿಲ್ಸನ್, ಎಂಟರ್‌ಪ್ರೈಸ್ ರಿಸ್ಕ್ ಆಂಡ್ ಕಾರ್ಪೊರೇಟ್ ರೆಸಿಲಿಯನ್ಸ್ ಉಪ ವ್ಯವಸ್ಥಾಪಕ ಡಾ.ಕೆ.ಜೆ. ದೆವಾಸಿಯಾ ಮತ್ತಿತರರು ಉಪಸ್ಥಿತರಿದ್ದರು. 53 ಜನ ಶಿಬಿರದಲ್ಲಿ ಭಾಗವಹಿಸಿದ್ದು, ಇದರಲ್ಲಿ ಐವರು ತಜ್ಞರನ್ನು ಅಂತಿಮವಾಗಿ ಆಯ್ಕೆ ಮಾಡಲಾಗುವುದು.
ತುರ್ತು ನಿರ್ವಹಣಾ ತರಬೇತಿ ಕಡ್ಡಾಯ
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕನ್ಸಲ್ಟಂಟ್ ಡಾ.ಕುನಾಲ್ ಶರ್ಮ ಮಾತನಾಡಿ, ರಾಸಾಯನಿಕ ಅಸ್ತ್ರ ಪ್ರಯೋಗ ಯಾವುದೇ ರೀತಿಯಲ್ಲಿ ಆಗಬಹುದು. ಅದನ್ನು ಎದುರಿಸಲು ತಂಡವನ್ನು ಸನ್ನದ್ಧಗೊಳಿಸುವುದು ಈ ಸಿಬಿಆರ್‌ಎನ್ (ಕೆಮಿಕಲ್, ಬಯಾಲಜಿಕಲ್, ರೇಡಿಯಾಲಜಿಕಲ್, ನ್ಯೂಕ್ಲಿಯರ್) ತುರ್ತು ನಿರ್ವಹಣೆ ಕುರಿತ ಮೂಲ ತರಬೇತಿ ಉದ್ದೇಶವಾಗಿದೆ. ದೇಶದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಇದನ್ನು ಕಡ್ಡಾಯವಾಗಿ ಮಾಡಲು ಕೇಂದ್ರ ಸರ್ಕಾರ ಸೂಚಿಸಿದೆ. ಈಗಾಗಲೇ ಮುಂಬೈ, ದೆಹಲಿ ಸೇರಿ ಒಂಬತ್ತು ಕಡೆ ತರಬೇತಿ ಪೂರ್ಣಗೊಳಿಸಲಾಗಿದೆ. ಹತ್ತನೇ ಕಾರ್ಯಕ್ರಮ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ನಡೆಸಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.