ಪದವಿಪೂರ್ವ ಇಲಾಖೆಯ ಉಪನ್ಯಾಸಕ‌ರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ಸುರೇಶ್ ಕುಮಾರ್

Team Udayavani, Nov 20, 2020, 5:04 PM IST

suresh-kumar

ಬೆಂಗಳೂರು: ಪದವಿಪೂರ್ವ ಶಿಕ್ಷಣ‌ ಇಲಾಖೆಯಲ್ಲಿ ನೇರ‌ ನೇಮಕಾತಿಗೆ ಲಭ್ಯವಿರುವ ಸುಮಾರು ಒಂದು ಸಾವಿರ ಹುದ್ದೆಗಳನ್ನು ತುಂಬಲು‌ ಮುಂದಿನ ಆರು ತಿಂಗಳ‌ ಅವಧಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ್ದಾರೆ.

ಮುಖ್ಯಮಂತ್ರಿಗಳ‌ ಅಧ್ಯಕ್ಷತೆಯಲ್ಲಿ‌ ಪದವಿಪೂರ್ವ ಶಿಕ್ಷಣ‌ ಇಲಾಖೆಗೆ ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಸಾಂಕೇತಿಕ ನೇಮಕಾತಿ ಆದೇಶ ವಿತರಣಾ‌ ಕಾರ್ಯಕ್ರಮದಲ್ಲಿ‌  ಮಾತನಾಡಿದ ಸಚಿವರು ಇಷ್ಟರಲ್ಲಿಯೇ ಖಾಲಿಯಿರುವ ಎಲ್ಲ ಬೋಧಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದೆಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿವಿಧ ವಿಷಯಗಳ 1194 ಉಪನ್ಯಾಸಕ ಅಭ್ಯರ್ಥಿಗಳನ್ನು  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಯ್ಕೆ ಮಾಡಿದೆ. ಅವರಲ್ಲಿ 1161 ಮಂದಿ ಈಗಾಗಲೇ ಸ್ಥಳ ನಿಯುಕ್ತಿ ಮಾಡಿಕೊಂಡಿದ್ದಾರೆ.  1203 ಉಪನ್ಯಾಸಕರ ಆಯ್ಕೆಗೆ 2015ರಿಂದ ಪ್ರಕ್ರಿಯೆ ಶುರುವಾಗಿತ್ತು. ಆದರೆ ಅದು ಅರ್ಜಿ ಕರೆದುದರ ಹೊರತಾಗಿ ಮುಂದೆ ಹೋಗಿರಲಿಲ್ಲ. 2019ರಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಈ ಪ್ರಕ್ರಿಯೆಗೆ ವೇಗ ದೊರಕಿತು.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಪ್ರಕ್ರಿಯೆಗೆ ವೇಗ ದೊರಕಿತು. ಉಪನ್ಯಾಸಕರ ಆಯ್ಕೆ ಪೂರ್ಣಗೊಂಡು ಸ್ಥಳ ನಿಯುಕ್ತಿ ಮಾಡಿ ಇಂದು ಆದೇಶ ನೀಡುತ್ತಿದ್ದೇವೆ. ಈ ಕೆಲಸ ಇನ್ನೂ ಆರು ತಿಂಗಳ  ಮೊದಲೇ ನಡೆಯಬೇಕಿತ್ತು. ಆದರೆ ಕೋವಿಡ್-19 ಪ್ರಸರಣದಿಂದಾಗಿ ಲಾಕ್‍ಡೌನ್ ಹಿನ್ನೆಲೆ ಹಾಗೂ ಶಾಲಾ ಕಾಲೇಜುಗಳು ಪುನರಾರಂಭವಾಗುವುದರ ಅನಿಶ್ಚಿತ ವಾತಾವರಣದ ಹಿನ್ನೆಲೆಯಲ್ಲಿ ಈಗ ಇದಕ್ಕೆ ಮಹೂರ್ತ ನಿಗದಿಯಾಗಿದೆ. ನಾನು ಇಲಾಖೆಯ ಸಚಿವರಾದ ಮಾರನೇ ದಿನವೇ ಈ ಕುರಿತು ಅಧಿಕಾರಿಗಳ ಸಭೆ ನಡೆಸಿದೆ. ಸಚಿವನಾಗಿ ನಾನು ಕೈಗೆತ್ತಿಕೊಂಡ ಮೊದಲ ಕೆಲಸ ಇದು ಎಂದು ಹೇಳಲು ನನಗೆ ಹೆಮ್ಮೆಯಾಗುತ್ತದೆ ಎಂದು‌ ಸಚಿವ ಸುರೇಶ್‌ಕುಮಾರ್‌‌ ಹೇಳಿದರು.

ಇದನ್ನೂ ಓದಿ: ಲಾಕ್‌ಡೌನ್‌ ಬಳಿಕ ಹೊಸ ಚಿತ್ರದತ್ತ ಸೆಂಚುರಿ ಸ್ಟಾರ್ : ‌ಶಿವಪ್ಪನಾದ ಶಿವಣ್ಣ

ಕಾಲೇಜುಗಳು ಆರಂಭವಾದ ದಿನದಿಂದ ನೇಮಕಾತಿ ಆದೇಶ ಜಾರಿಗೆ ಬರಲಿದ್ದು, ಅದಕ್ಕೂ ಮೊದಲು ನೂತನ ಉಪನ್ಯಾಸಕರಿಗೆ ಇಲಾಖೆಯ ನಿಯಮಗಳು, ಆಡಳಿತ, ವೃಂದ ಮತ್ತು ನೇಮಕಾತಿ ನಿಯಮಗಳು, ಉಪನ್ಯಾಸಕರ ವೃತ್ತಿ ಧರ್ಮ, ವೃತ್ತಿ ಗೌರವ ಸೇರಿದಂತೆ ಪ್ರೇರಣಾದಾಯಕ ತರಭೇತಿ ಕಾರ್ಯಾಗಾರವನ್ನು ಜಿಲ್ಲೆಗಳಲ್ಲಿ ಇಲ್ಲವೇ ವಿಭಾಗಗಳಲ್ಲಿ ನೀಡಲಾಗುವುದು ಎಂದ ಸಚಿವ ಸುರೇಶ್‌ಕುಮಾರ್,  ರಾಜ್ಯದಲ್ಲಿ  ಇರುವ 1231 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 12, 857 ಉಪನ್ಯಾಸಕ ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 10370 ಉಪನ್ಯಾಸಕರ ಸ್ಥಾನಗಳು ಭರ್ತಿಯಾಗಿದ್ದು, 2487 ಹುದ್ದೆಗಳು ಖಾಲಿಯಾಗಿವೆ. ಈ ಖಾಲಿಯಾದ ಹುದ್ದೆಗಳಿಗೆ ಈಗ ನೇಮಕ ಮಾಡಿರುವ 1196 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದರ ಹೊರತಾಗಿಯೂ ಉಳಿಯುವ ಖಾಲಿ ಹುದ್ದೆಗಳ ಶೀಘ್ರ ಭರ್ತಿಗೆ ಸರ್ಕಾರ ಕ್ರಿಯಾ  ಯೋಜನೆ ರೂಪಿಸುತ್ತಿದೆ. ಮುಂದಿನ ಆರು ತಿಂಗಳ ಅವಧಿಯಲ್ಲಿ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಸರ್ಕಾರಿ, ಅನುದಾನಿತ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಒಟ್ಟು 12,22,273 ವಿದ್ಯಾರ್ಥಿಗಳ ಹಿತದೃಷ್ಟಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ:  ಸ್ನೇಹಿತನೊಂದಿಗೆ ವಾಟ್ಸಾಪ್ ಚಾಟ್ ಮಾಡಿದ್ದಕ್ಕೆ ತಂಗಿಗೆ ಗುಂಡು ಹಾರಿಸಿದ ಅಣ್ಣ !

ನೂತನ‌ ಉಪನ್ಯಾಸಕರಿಗೆ ಕಿವಿಮಾತು ಹೇಳಿದ ಸಚಿವ ಸುರೇಶ್‌ಕುಮಾರ್, ನಮ್ಮ ಸರ್ಕಾರ ಅತ್ಯಂತ ಪಾರದರ್ಶಕ ವಾಗಿ  ಭ್ರಷ್ಟಾಚಾರಕ್ಕೆ‌‌ ಎಡೆ ಮಾಡದೇ ನೇಮಕಾತಿ ಆದೇಶಗಳನ್ನು ನೀಡಿದ್ದು, ಮಕ್ಕಳ ಭವಿಷ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಬೇಕೆಂದು ಹೇಳಿದರು.

ಕೋವಿಡ್ ತಂದೊಡ್ಡಿದ ಎಲ್ಲ ಆರ್ಥಿಕ ಸಂಕಷ್ಟದ ಸಮಯದಲ್ಲೂ ನೇಮಕಾತಿ ಆದೇಶಗಳನ್ನು ನೀಡಲಾಗಿದ್ದು ಎಲ್ಲ ಉಪನ್ಯಾಸಕರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕೆಂದು ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರು ಕರೆ ನೀಡಿದರು.

ಇದನ್ನೂ ಓದಿ:  ಮನೆಯೇ ಸ್ವರ್ಗ: ಮಾನಸಿಕ ಪ್ರತಿರಕ್ಷಣಾ ಗುಣ ಬೆಳೆಸಿಕೊಳ್ಳುವುದು ಹೇಗೆ?

ಶಿಕ್ಷಣ ಇಲಾಖೆಯ ಪ್ರಧಾನ‌ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಪದವಿಪೂರ್ವ ಶಿಕ್ಷಣ‌ ನಿರ್ದೇಶಕಿ ದೀಪಾ‌ಚೋಳನ್ ಸೇರಿದಂತೆ ಹಿರಿಯ ಅಧಿಕಾರಿಗಳು‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.